ಭಾರತದಲ್ಲಿ ಕೋವಿಡ್ ಅಟ್ಟಹಾಸ; ಒಂದೇ ದಿನ 8ಸಾವಿರಕ್ಕೂ ಅಧಿಕ ಪ್ರಕರಣ ಪತ್ತೆ
ಈವರೆಗೆ ದೇಶದಲ್ಲಿ 89,983 ಮಂದಿ ಕೋವಿಡ್ 19 ವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ.
Team Udayavani, May 31, 2020, 2:43 PM IST
ನವದೆಹಲಿ:ದೇಶದ ಕೆಲವು ರಾಜ್ಯಗಳಲ್ಲಿ ಕೋವಿಡ್ 19 ಅಟ್ಟಹಾಸ ಮುಂದುವರಿದಿದ್ದು, ಏತನ್ಮಧ್ಯೆ ಕಳೆದ 24ಗಂಟೆಯಲ್ಲಿ ಬರೋಬ್ಬರಿ 8,380 ಕೋವಿಡ್ 19 ವೈರಸ್ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಕೋವಿಡ್ ಪ್ರಕರಣದ ಸಂಖ್ಯೆ 1,82,143ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 5,164ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈವರೆಗೆ ದೇಶದಲ್ಲಿ 89,983 ಮಂದಿ ಕೋವಿಡ್ 19 ವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ. ಭಾರತದಲ್ಲಿ ಶೇ.47.75ರಷ್ಟು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿ ಹೇಳಿದೆ.
ಆರೋಗ್ಯ ಸಚಿವಾಲಯದ ಅಂಕಿಅಂಶದ ಪ್ರಕಾರ, ಮಹಾರಾಷ್ಟ್ರದಲ್ಲಿ 65,168 ಕೋವಿಡ್ ಪ್ರಕರಣ, ತಮಿಳುನಾಡಿನಲ್ಲಿ 21,184, ದೆಹಲಿ 18,549 ಮತ್ತು ಗುಜರಾತ್ ನಲ್ಲಿ 16,343 ಪ್ರಕರಣ ವರದಿಯಾಗಿದೆ.
ದೇಶದಲ್ಲಿ ಕೋವಿಡ್ 19ಗೆ 5ಸಾವಿರಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲಿ 2,197, ಗುಜರಾತ್ ನಲ್ಲಿ 1007 ಹಾಗೂ ದೆಹಲಿಯಲ್ಲಿ 416 ಮಂದಿ ಸಾವನ್ನಪ್ಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.