ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆ ಮಾಡಿಕೊಳ್ಳಿ
Team Udayavani, May 31, 2020, 3:31 PM IST
ಸಾಂದರ್ಭಿಕ ಚಿತ್ರ
ಸೊರಬ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 20 ಕೇಂದ್ರಗಳನ್ನು ಗುರುತಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಗಳು ಎದುರಾಗದಂತೆ ಸಿದ್ಧತೆ ಮಾಡಬೇಕೆಂದು ಶಾಸಕ ಕುಮಾರ್ ಬಂಗಾರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಟ್ಟಣದ ರಂಗಮಂದಿರದಲ್ಲಿ ನಡೆದ ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ಸೋಂಕು ಹರಡದಂತೆ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಯಾದ ಪರಿಣಾಮ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಶಿಕ್ಷಣ ಇಲಾಖೆ ಮುಂದೂಡಿತ್ತು. ಜೂ. 25ರಿಂದ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಯಾವುದೇ ವಿದ್ಯಾರ್ಥಿಯೂ ಪರೀಕ್ಷೆಯಿಂದ ಹೊರಗುಳಿಯದಂತೆ ಕ್ರಮಕೈಗೊಳ್ಳಬೇಕು. ಲಾಕ್‌ಡೌನ್‌ನಿಂದ ತಾಲೂಕಿನಿಂದ ಹೊರಗುಳಿದ ವಿದ್ಯಾರ್ಥಿಗಳನ್ನು ಕನಿಷ್ಟ 15ದಿನ ಮುಂಚಿತವಾಗಿ ಕರೆಸಿಕೊಳ್ಳಲು ಪೋಷಕರಿಗೆ ಮಾಹಿತಿ ನೀಡಬೇಕು ಎಂದರು.
ಸಭೆಯಲ್ಲಿ ತಹಶೀಲ್ದಾರ್ ನಫೀಸಾ ಬೇಗಂ, ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ, ತಾಲೂಕು ಆರೋಗ್ಯಾಧಿಕಾರಿ ಡಾ| ಅಕ್ಷತಾ ವಿ. ಖಾನಾಪುರ, ಬಿಇಒ ಅಬ್ದುಲ್ ಗಫಾರ್ ಮುಲ್ಲಾ, ಸಾಗರ ಬಿಇಒ ಕೆ.ಆರ್. ಬಿಂಬಾ, ಸಾಗರದ ಇಒ ಪುಷ್ಪಾ ಕಮ್ಮಾರ್ , ತಾಲೂಕು ಮಟ್ಟದ ಅಧಿಕಾರಿಗಳು, ಮುಖ್ಯ ಶಿಕ್ಷಕರು, ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.