ಗಂಗೊಳ್ಳಿ: ಕುಸಿಯುತ್ತಿದೆ ಬ್ರೇಕ್‌ವಾಟರ್
ಅವೈಜ್ಞಾನಿಕ ಕಾಮಗಾರಿಯಿಂದ ಕುಸಿತ: ಮೀನುಗಾರರ ಆರೋಪ
Team Udayavani, Jun 1, 2020, 5:09 AM IST
ಗಂಗೊಳ್ಳಿ: ಕಡಲ್ಕೊರೆತ ತಡೆಗಾಗಿ ಗಂಗೊಳ್ಳಿಯಲ್ಲಿ ಕೋಟ್ಯಾಂತರ ರೂ. ವೆಚ್ಚದಲ್ಲಿ ನಿರ್ಮಿಸಿದ ಬ್ರೇಕ್‌ವಾಟರ್ ಈಗ ಕುಸಿಯುತ್ತಿದ್ದು, ಮೀನುಗಾರಿಕೆಗೆ ತೊಂದರೆಯಾಗುವ ಆತಂಕ ಎದುರಾಗಿದೆ. ಅವೈಜ್ಞಾನಿಕ ಕಾಮಗಾರಿಯೇ ಇದಕ್ಕೆ ಕಾರಣ ಎನ್ನುವ ಆರೋಪ ಮೀನುಗಾರರಿಂದ ಕೇಳಿ ಬಂದಿದೆ.
ಕೋಡಿಯಲ್ಲಿ ಸುಮಾರು 900 ಮೀ. ಹಾಗೂ ಗಂಗೊಳ್ಳಿಯಲ್ಲಿ 700 ಮೀ. ಉದ್ದದ 102 ಕೋ.ರೂ. ವೆಚ್ಚದ ಬ್ರೇಕ್ ವಾಟರ್ ಕಾಮಗಾರಿ ಕಳೆದ ವರ್ಷ ಪೂರ್ಣಗೊಂಡಿತ್ತು. ಇದರಲ್ಲಿ ಗಂಗೊಳ್ಳಿ ಭಾಗದಲ್ಲಿ ಟೆಟ್ರಾಫೈಡ್ ಹಾಗೂ ಕಲ್ಲುಗಳನ್ನು ಹಾಕಿ ನಿರ್ಮಿಸಲಾದ 700 ಮೀ. ಉದ್ದದ ಬ್ರೇಕ್ ವಾಟರ್‌ನಲ್ಲಿ ಒಂದೊಂದೇ ಕಲ್ಲುಗಳು ಸಮುದ್ರ ಸೇರುತ್ತಿವೆ.
ಕೋಟ್ಯಂತರ ರೂ. ಖರ್ಚು ಮಾಡಿ, ಬಹಳಷ್ಟು ವರ್ಷಗಳ ಕಾಲ ಬಾಳಿಕೆ ಬರಲೆಂದು ನಿರ್ಮಿಸಿದ ಬ್ರೇಕ್‌ವಾಟರ್ ಕಾಮಗಾರಿ ಪೂರ್ಣಗೊಂಡು ಕೇವಲ ಒಂದೆರಡು ವರ್ಷಗಳಲ್ಲಿಯೇ ಕುಸಿದು ಹೋಗುವುದಾದರೆ ಹೇಗೆ? ಸರಿಯಾಗಿ ರೂಪುರೇಶೆಗಳನ್ನು ಮಾಡಿಕೊಂಡು, ಇಲ್ಲಿನ ಮೀನುಗಾರರ ಅಭಿಪ್ರಾಯಗಳನ್ನು ಕೂಡ ಪರಿಗಣನೆಗೆ ತೆಗೆದುಕೊಂಡಿದ್ದರೆ ಈ ರೀತಿ ಆವಾಂತರಗಳು ಆಗುತ್ತಿರಲಿಲ್ಲ ಎನ್ನುವುದು ಮೀನುಗಾರರ ಆರೋಪವಾಗಿದೆ.
ಇಂದು ಭೇಟಿ
“ಉದಯವಾಣಿ’ಯೊಂದಿಗೆ ಮಾತನಾಡಿದ ಉಡುಪಿಯ ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಎಂಜಿನಿಯರ್ ಉದಯಕುಮಾರ್, ಬ್ರೇಕ್ ವಾಟರ್ ಕಾಮಗಾರಿಯ ಕುಸಿತದ ಬಗ್ಗೆ ಗಮನಕ್ಕೆ ಬಂದಿದ್ದು, ಜೂ. 1ರಂದು ಸ್ವತಃ ಅಲ್ಲಿಗೆ ಭೇಟಿ ನೀಡಿ ಪರಿ ಶೀಲನೆ ನಡೆಸಲಾಗುವುದು. ಕಾಮಗಾರಿ ನಿರ್ವಹಿಸಿದ ಗುತ್ತಿಗೆ ದಾರರನ್ನೂ ಕರೆಯಲಾಗಿದೆ ಎಂದವರು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.