ಕೋವಿಡ್ 19 ನಿಧಿಗೆ ವಿದೇಶಿ ಕನ್ನಡಿಗರಿಂದ 10ಲಕ್ಷ ದೇಣಿಗೆ
Team Udayavani, Jun 1, 2020, 6:04 AM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸಂಕಷ್ಟ ಪರಿಹಾರ ನಿಧಿಗೆ ಅಮೆರಿಕದ “ನಾವು ವಿಶ್ವ ಕನ್ನಡಿಗರು’ ನಾವಿಕ ಕನ್ನಡ ಒಕ್ಕೂಟ ಹತ್ತು ಲಕ್ಷ ರೂ. ದೇಣಿಗೆ ನೀಡಿದೆ.ರಾಜ್ಯದಲ್ಲಿ ಕೋವಿಡ್ 19 ಸುರಕ್ಷತಾ ಕ್ರಮಗಳಿಗಾಗಿ ಅಮೆರಿಕದಿಂದ ಸ್ಪಂದನೆ ಮಾಡಿರುವ ನಾವಿಕ ಕನ್ನಡ ಒಕ್ಕೂಟದ ಪದಾಧಿಕಾರಿಗಳಿಗೆ ಸರ್ಕಾರದ ಪರವಾಗಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಕೃತಜ್ಞತೆ ಸಲ್ಲಿಸಿ, ಅಮೆರಿಕದಲ್ಲೂ ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ಕನ್ನಡಿಗರು ಕೈ ಜೋಡಿಸಿರುವುದಕ್ಕೂ ಅಭಿನಂದನೆ ಸಲ್ಲಿಸಿದರು.
ಶನಿವಾರ ವಿಡಿಯೋ ಕಾನ್ಫರೆನ್ಸ್ ನಡೆಸಿದ ಅವರು, ಕೋವಿಡ್ 19 ಸಂಕಷ್ಟದಲ್ಲಿ ಕರ್ನಾಟಕದಲ್ಲಿರುವ ನಿಮ್ಮವರ ಕಾಳಜಿಗೆ ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ ದೇಶದಲ್ಲೇ ಉತ್ತಮವಾದ ಆರೋಗ್ಯ ವ್ಯವಸ್ಥೆಯಿದ್ದು ಕೋವಿಡ್ 19 ನಿಯಂತ್ರಣದಲ್ಲಿ ಒಂದು ಹಂತದ ಯಶಸ್ಸು ಸಾಧಿಸಿದ್ದೇವೆ ಎಂದು ಹೇಳಿದರು.
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕೋವಿಡ್ 19 ಪರಿಸ್ಥಿತಿ ಅತ್ಯಂತ ಸಮರ್ಥವಾಗಿ ನಿಭಾಯಿಸಲಾಗುತ್ತಿದೆ. ಕೋವಿಡ್ 19 ದೀರ್ಘಕಾಲ ನಮ್ಮೊಂದಿಗೆ ಇರುವುದರಿಂದ ಆರೋಗ್ಯ, ಆರ್ಥಿಕ ಸಮಸ್ಯೆ ಎದುರಿಸಲು ಪರಸ್ಪರ ಸಹಕಾರ ಮುಖ್ಯ. ಈ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲೂ ಆರೋಗ್ಯ ಸಮೀಕ್ಷೆ ನಡೆಸಿ ಆ ಮಾಹಿತಿ ಡಿಜಿಟಲೈಸ್ ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.