ಕೋವಿಡ್ ಸಂಕಷ್ಟಕ್ಕೆ ಪ್ರದೀಪ ಶೆಟ್ಟರ ಸ್ಪಂದನೆ
ಬಡ ಕುಟುಂಬಗಳ ಹಸಿವು ನೀಗಿಸಲು ಆಹಾರ ಕಿಟ್ ವಿತರಣೆ ; ಕೋವಿಡ್ ವಿರುದ್ಧ ಜಾಗೃತಿ
Team Udayavani, Jun 1, 2020, 7:12 AM IST
ಹುಬ್ಬಳ್ಳಿ: ಕೋವಿಡ್ ಲಾಕ್‌ಡೌನ್‌ನಿಂದಾಗಿ ಕೈಯಲ್ಲಿ ಉದ್ಯೋಗವಿಲ್ಲದೆ, ಜೀವನ ಹೇಗೆ ಎನ್ನುವ ಚಿಂತೆಯಲ್ಲಿದ್ದ ಕುಟುಂಬಗಳಿಗೆ ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ ದಿನಸಿ ಸಾಮಗ್ರಿಗಳನ್ನು ಅವರ ಮನೆಗಳಿಗೆ ಮುಟ್ಟಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಅಲ್ಲದೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಪ್ರತಿಯೊಂದು ಕರೆಗೂ ಸ್ಪಂದಿಸುವ ಮೂಲಕ ಬಡ ಕುಟುಂಬಗಳ ಹಸಿವನ್ನು ನೀಗಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಕರೆ ಮಾಡಿ ತಿಳಿಸಿದ ಪ್ರತಿಯೊಂದು ಸ್ಥಳಗಳಿಗೆ ತಾವೇ ಖುದ್ದಾಗಿ ಹೋಗಿ ದಿನಸಿ ಕಿಟ್‌ಗಳನ್ನು ವಿತರಿಸಿ ತೊಂದರೆಯಲ್ಲಿದ್ದ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ತೆರಳಿ ಅಲ್ಲಿನ ಜನರಿಗೆ ನೆರವು ನೀಡಿದ್ದಾರೆ. ಮೂರು ಜಿಲ್ಲೆಗಳು ಸೇರಿ ಸುಮಾರು 6,000 ಸಾವಿರಕ್ಕೂ ಅಧಿಕ ದಿನಸಿ ಕಿಟ್‌ಗಳನ್ನು ನೀಡಿ ಸಂಕಷ್ಟದಲ್ಲಿದ್ದ ಕುಟುಂಬಗಳಿಗೆ ನೆರವಾಗಿದ್ದಾರೆ.
ಕೋವಿಡ್ ವಿರುದ್ಧ ಹೋರಾಟ ಮಾಡುತ್ತಿರುವ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಪೌರ ಕಾರ್ಮಿಕರಿಗೂ ದಿನಸಿ ಕಿಟ್‌ಗಳನ್ನು ತಲುಪಿಸಲಾಗಿದೆ. ದಿನಸಿ ಕಿಟ್‌ನಲ್ಲಿ 5 ಕೆಜಿ ಅಕ್ಕಿ, ಗೋಧಿ, ಬೇಳೆ, ಖಾರ, ಉಪ್ಪು, ಮಸಾಲೆ ಸಾಮಗ್ರಿ, ಅಡುಗೆ ಎಣ್ಣೆ, ಸಕ್ಕರೆ, ರವಾ, ಅವಲಕ್ಕಿ ಸೇರಿದಂತೆ ಇನ್ನಿತರೆ ವಸ್ತುಗಳಿದ್ದು, ತೊಂದರೆಗೀಡಾದ ಕುಟುಂಬಗಳನ್ನು ಗುರುತಿಸಿ ಅವರಿಗೆ ತಲುಪಿಸುವ ಕೆಲಸ ಮಾಡಿದ್ದಾರೆ. ಇನ್ನು ಇವರ ನಿವಾಸಕ್ಕೆ ಆಗಮಿಸಿದ ಬಡ ಕುಟುಂಬಗಳಿಗೆ ಕಿಟ್ ನೀಡುವ ಮೂಲಕ ಅವರ ಹಸಿವು ನೀಗಿಸುವ ಕೆಲಸ ಮಾಡಿದ್ದಾರೆ.
ಆಹಾರ ಸಾಮಗ್ರಿಗಳ ವಿತರಣೆ ಒಂದಡೆಯಾದರೆ ಅಗತ್ಯವಿರುವ ಗ್ರಾಪಂಗಳಿಗೆ ಔಷಧಿ ಸಿಂಪರಣೆ ಸ್ಪ್ರೇಯರ್‌ಗಳನ್ನು ನೀಡಿದ್ದು, ವಿವಿಧ ಕಡೆಗೆ ಸ್ಯಾನಿಟೈಸರ್‌ಗಳನ್ನು ನೀಡಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಸ್ವಚ್ಛತೆ ಹಾಗೂ ಕೋವಿಡ್ ಹರಡದಂತೆ ನಿರ್ವಹಿಸುವ ಕಾರ್ಯಗಳಿಗೆ ಪ್ರದೀಪ ಶೆಟ್ಟರ ಬೆಂಬಲವಾಗಿ ನಿಂತಿದ್ದಾರೆ. ಇನ್ನುಹೋದ ಕಡೆಯಲ್ಲೆಲ್ಲಾ ಕೋವಿಡ್ ಸೋಂಕಿನಿಂದ ದೂರವಿರುವ ಕುರಿತು ಜಾಗೃತಿ ಮೂಡಿಸುವ ಕಾರ್ಯ ಮಾಡಿದ್ದಾರೆ.
ಲಾಕ್‌ಡೌನ್ ಎಷ್ಟೇ ದಿನ ಮುಂದುವರೆದರೂ ಚಿಂತೆಯಿಲ್ಲ. ಅಲ್ಲಿಯವರೆಗೂ ದಿನಸಿ ಕಿಟ್‌ಗಳ ವಿತರಣೆ, ಅಗತ್ಯ ಸಹಾಯಕ್ಕೆ ತಾವು ಸಿದ್ಧ ಇರುವುದಾಗಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಕಾರ್ಮಿಕ ಇಲಾಖೆ ನೀಡಿದ ಕಿಟ್‌ಗಳನ್ನು ಸಹ ಅರ್ಹರನ್ನು ಗುರುತಿಸಿ ಅವರಿಗೆ ನೇರವಾಗಿ ಮುಟ್ಟಿಸುವ ಕೆಲಸ ಮಾಡಿದ್ದಾರೆ. ಸಂದಿಗ್ಧ ಪರಿಸ್ಥಿತಿಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ ಅವರ ನೆರವನ್ನು ಜನ ಮುಕ್ತ ಕಂಠದಿಂದ ಶ್ಲಾಘಿಸುತ್ತಿದ್ದಾರೆ.
ಎಸ್.ಎಸ್.ಶೆಟ್ಟರ್ ಫೌಂಡೇಶನ್‌ನಿಂದ ದೊಡ್ಡ ನೆರವು
ವಿಧಾನಪರಿಷತ್ ಸದಸ್ಯರಾಗಿ ಮೂರು ಜಿಲ್ಲೆಯ ಕೆಲ ಗ್ರಾ.ಪಂ. ಹಾಗೂ ಮಹಾನಗರದಲ್ಲಿ ಸಂಕಷ್ಟದಲ್ಲಿದ್ದ ಜನರಿಗೆ ನೆರವು ನೀಡಿರುವುದು ಒಂದಡೆಯಾದರೆ, ಎಸ್.ಎಸ್. ಶೆಟ್ಟರ ಫೌಂಡೇಶನ್ ಮೂಲಕ ಕೈಗೊಂಡ ಕಾರ್ಯ ಬಹು ದೊಡ್ಡದು. ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯೊಂದರಲ್ಲೇ ಬರೋಬ್ಬರಿ 30 ಸಾವಿರ ದಿನಸಿ ಕಿಟ್‌ಗಳನ್ನು ಬಡ ಕುಟುಂಬಗಳಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರದೀಪ ಶೆಟ್ಟರ ಕಾರ್ಯ ಅನನ್ಯ.
ಲಾಕ್‌ಡೌನ್ ಹಿನ್ನೆಲೆಯಲ್ಲಿ ಯಾರೂ ಹಸಿವಿನಿಂದ ಬಳಲಬಾರದು ಎಂದು ದಿನಸಿ ಖರೀದಿ, ಪ್ಯಾಕಿಂಗ್ ಹಾಗೂ ವಿತರಣೆ ಮಾಡುವ ಎಲ್ಲಾ ಕಾರ್ಯಗಳಲ್ಲಿ ಖುದ್ದಾಗಿ ನಿಂತು ಹಗಲಿರುಳು ಶ್ರಮಿಸಿದ್ದಾರೆ. ಪಕ್ಷದ ಕಾರ್ಯಕರ್ತರು, ಮುಖಂಡರು, ಜನರಿಂದ ಬಂದ ಕರೆ ಆಧರಿಸಿ ಕಷ್ಟದಲ್ಲಿದ್ದ ಕುಟುಂಬಗಳಿಗೆ ನೆರವಾಗಿದ್ದಾರೆ.
ಶಾಸಕರ ನಿಧಿಯಿಂದ 50 ಲಕ್ಷ ರೂ.
ಕೋವಿಡ್ ವಿರುದ್ಧದ ಹೋರಾಟಕ್ಕೆ ಸರಕಾರ ಮತ್ತಷ್ಟು ಸದೃಢಗೊಳ್ಳಲಿ ಎನ್ನುವ ಕಾರಣಕ್ಕೆ ತಮ್ಮ ಶಾಸಕರ ನಿಧಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ನೀಡಿದ್ದಾರೆ. ಅಲ್ಲದೆ ವೈಯಕ್ತಿಕವಾಗಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಲಕ್ಷ ರೂ. ನೀಡಿ ರಾಜ್ಯದ ಜನರ ಕಲ್ಯಾಣಕ್ಕೆ ಕೈ ಜೋಡಿಸಿದ್ದಾರೆ.
ಲಾಕ್‌ಡೌನ್ ಸಂದರ್ಭದಲ್ಲಿ ಯಾರೂ ಹಸಿವಿನಿಂದ ತೊಂದರೆ ಅನುಭವಿಸಬಾರದು. ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಸರೆಯಾಗಬೇಕು ಎಂದು ಈ ಸೇವೆ ಮಾಡುತ್ತಿದ್ದೇವೆ. ಕಷ್ಟದಲ್ಲಿರುವ ಜನರೊಂದಿಗಿದ್ದು ನೆರವಿನ ಸೇವೆಯ ಜೊತೆಗೆ ಅವರ ನೋವಿನಲ್ಲಿ ಭಾಗಿಯಾಗಿರುವುದು ತೃಪ್ತಿ ತಂದಿದೆ.
– ಪ್ರದೀಪ ಶೆಟ್ಟರ, ವಿಧಾನಪರಿಷತ್ ಸದಸ್ಯರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
MUST WATCH
ಹೊಸ ಸೇರ್ಪಡೆ
Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು
Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್.ರಾಜಣ್ಣ
MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್
BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!
BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.