ಕೋವಿಡ್ : ಅಧಿಕಾರಿಗಳಿಗೆ ಮತ್ತೊಂದು ಸವಾಲು

Team Udayavani, Jun 1, 2020, 10:46 AM IST

01-June-02

ಕಲಬುರಗಿ: ಸಾಂಸ್ಥಿಕ ಕ್ವಾರಂಟೈನ್‌ ಅವಧಿಯನ್ನು 14ರಿಂದ 7 ದಿನಕ್ಕೆ ಇಳಿಸಿರುವ ಸರ್ಕಾರದ ನಿರ್ಧಾರ ಗ್ರಾಮೀಣ ಭಾಗದಲ್ಲಿ ಕೋವಿಡ್ ಭಯದ ವಾತಾವರಣ ಹುಟ್ಟು ಹಾಕಿದ್ದರೆ, ವಲಸಿಗರನ್ನು ಕ್ವಾರಂಟೈನ್‌ ನಲ್ಲಿ ಹಿಡಿದಿಟ್ಟಿದ್ದ ಅಧಿಕಾರಿಗಳ ಶ್ರಮ ಹೊಳೆಯಲ್ಲಿ ಹುಣಸೆ ಹಣ್ಣು ತೊಳೆದಂತಾಗಿದೆ. ಜತೆಗೆ ಅಧಿಕಾರಿಗಳು ಮತ್ತೊಂದು ಸವಾಲು ಎದುರಿಸುವಂತೆ ಆಗಿದೆ.

ಕಲ್ಯಾಣ ಕರ್ನಾಟಕ ಪ್ರದೇಶದಿಂದ ಮಹಾರಾಷ್ಟ್ರ ಮತ್ತು ತೆಲಂಗಾಣ ಮುಂತಾದ ಕಡೆಗಳಲ್ಲಿ ಗುಳೆ ಹೋಗಿದ್ದ ಸಾವಿರಾರು ಸಂಖ್ಯೆಯ ಕೂಲಿ ಕಾರ್ಮಿಕರು ರೈಲು, ಬಸ್‌, ಕಾಲ್ನಡಿಗೆ ಮೂಲಕ ವಾಪಸ್‌ ಆಗಿದ್ದಾರೆ. ಹೊರಗಡೆಯಿಂದ ಬಂದವರೆನ್ನಲ್ಲ ಕ್ವಾರಂಟೈನ್‌ ಕೇಂದ್ರಗಳಲ್ಲಿ ಇರಿಸಲಾಗಿತ್ತು. 14 ದಿನ ಕ್ವಾರಂಟೈನ್‌ ಮಾಡಿ, ಪ್ರತಿಯೊಬ್ಬರಿಗೂ ಗಂಟಲು ಮಾದರಿ ಪರೀಕ್ಷೆ ನಡೆಸಿಯೇ ಮನೆಗೆ ಬಿಡಬೇಕೆಂದು ಸರ್ಕಾರವೇ ಹೇಳಿತ್ತು. ಈಗ 7 ದಿನಕ್ಕೆ ಸಾಂಸ್ಥಿಕ ಕ್ವಾರಂಟೈನ್‌ ಅವಧಿ ಇಳಿಸಿ, 7 ದಿನಗಳಿಂದ ಕ್ವಾರಂಟೈನ್‌ ಇದ್ದವವರನ್ನು ಬಿಟ್ಟು ಬಿಡಿ ಎಂದು ಸರ್ಕಾರ ನಿಯಮ ಬದಲಿಸಿದೆ.

ಸರ್ಕಾರದ ಹೊಸ ನಿಯಮದಂತೆ ಜಿಲ್ಲಾಡಳಿತಗಳು ಕ್ವಾರಂಟೈನ್‌ನಲ್ಲಿ ಇದ್ದವರನ್ನು ಮನೆಗೆ ಕಳುಹಿಸುತ್ತಿವೆ. ಕಲಬುರಗಿಯಲ್ಲಿ ಕಳೆದ ನಾಲ್ಕು ದಿನದಲ್ಲಿ 29 ಸಾವಿರ ಜನರನ್ನು ಸಾಂಸ್ಥಿಕ ಕ್ವಾರಂಟೈನ್‌ನಿಂದ ಮುಕ್ತಿಗೊಳಿಸಲಾಗಿದೆ. ಇದರಲ್ಲಿ 7 ದಿನ ಕ್ವಾರಂಟೈನ್‌ ಮಾಡಿದವರಿಗೆ ಮಾತ್ರವೇ ಉಳಿದ 7 ದಿನದ ಹೋಂ ಕ್ವಾರಂಟೈನ್‌ ಮುದ್ರೆ ಹಾಕಿ ಮನೆಯಲ್ಲಿ ಇರುವಂತೆ ತಿಳಿಸಲಾಗಿದೆ. ಉಳಿದವರು ಮುಕ್ತವಾಗಿ ಹೊರಗಡೆ ಸುತ್ತಾಡುತ್ತಿದ್ದಾರೆ.

ಹೊಸ ಸವಾಲೇನು?: ಮಹಾರಾಷ್ಟ್ರದಿಂದ ಬಂದ ಬಹುತೇಕ ವಲಸೆ ಕಾರ್ಮಿಕರಲ್ಲಿ ಕೋವಿಡ್ ಪತ್ತೆಯಾಗಿದ್ದು, ಕಲಬುರಗಿ, ಬೀದರ್‌ ಮಾತ್ರವಲ್ಲದೇ ಎರಡು ತಿಂಗಳಿಂದ ಗ್ರೀನ್‌ ಝೋನ್‌ನಲ್ಲಿದ್ದ ಯಾದಗಿರಿ, ರಾಯಚೂರು ಜಿಲ್ಲೆಗಳು ಸಹ ಕೋವಿಡ್ ನಿಂದ ತತ್ತರಿಸುವಂತೆ ಆಗಿವೆ. ಬಳ್ಳಾರಿ, ಕೊಪ್ಪಳದಲ್ಲೂ ವಲಸಿಗರಿಗೆ ಕೋವಿಡ್ ಪತ್ತೆಯಾಗಿದೆ. ಈ ಹಿಂದೆ 14 ದಿನ ಕ್ವಾರಂಟೈನ್‌ ನಲ್ಲಿಟ್ಟು, ಎಲ್ಲರಿಗೂ ಕೋವಿಡ್ ಪರೀಕ್ಷೆ ಮಾಡಲಾಗುತ್ತಿತ್ತು. ಕೋವಿಡ್ ಲಕ್ಷಣಗಳೇ ಇಲ್ಲದವರಿಗೂ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಹೀಗಾಗಿಯೇ ಅನೇಕರಿಗೆ ಪರೀಕ್ಷೆ ಮಾಡಿದಾಗ ಮಾತ್ರ ಕೋವಿಡ್ ಗೊತ್ತಾಗುತ್ತಿತ್ತು. ಆದರೆ, ಅವರೆಲ್ಲರೂ ಕ್ವಾರಂಟೈನ್‌ ಕೇಂದ್ರಗಳಲ್ಲಿ ಇರುವುದರಿಂದ ಜನತೆ ನೆಮ್ಮದಿಯಿಂದ ಇದ್ದರು. ಪಾಸಿಟಿವ್‌ ಬಂದವರನ್ನು ಸುಲಭವಾಗಿ ಅಧಿಕಾರಿಗಳು ಪತ್ತೆ ಹಚ್ಚಿ ಆಸ್ಪತ್ರೆಗೆ ಕಳುಹಿಸುತ್ತಿದ್ದರು. ಇದೀಗ ಕ್ವಾರಂಟೈನ್‌ ಕೇಂದ್ರದಲ್ಲಿ ಗಂಟಲು ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನಿಸಿದವರನ್ನೂ ಮನೆಗೆ ಕಳುಹಿಸಲಾಗಿದೆ. ಹೀಗೆ ಮನೆಗೆ ಕಳುಹಿಸಿದ ಮೇಲೆ ಪ್ರಯೋಗಾಲಯದ ವರದಿ ಬರುತ್ತಿದ್ದು, ಗ್ರಾಮಕ್ಕೆ ತೆರಳಿ ಸೋಂಕಿತರನ್ನು ಪತ್ತೆ ಹೆಚ್ಚುವ ಕೆಲಸ ಅಧಿಕಾರಿಗಳು ಮಾಡಬೇಕಿದೆ.

ಒಂದೊಂದು ಜಿಲ್ಲೆಯಲ್ಲಿ ದಿನಕ್ಕೆ 50ಕ್ಕೂ ಜನರಲ್ಲಿ ಸೋಂಕು ಕಂಡು ಬರುತ್ತಿದ್ದು, ಆಸ್ಪತ್ರೆಗೆ ಕರೆತರಲು ಆಂಬ್ಯುಲೆನ್ಸ್‌ಗಳ ಸಮಸ್ಯೆ ಸಹ ಎದುರಾಗುವ ಸಂಭವವಿದೆ. ಮೇಲಾಗಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರೊಂದಿಗೆ ಸೋಂಕಿತರು ಬೆರೆತು ಹೋಗುತ್ತಿದ್ದಾರೆ. ಹೀಗಾಗಿ ಸೋಂಕಿತ ಸಂಪರ್ಕಕ್ಕೆ ಬಂದವರನ್ನೂ ಗುರುತಿಸಿ ಕ್ವಾರಂಟೈನ್‌ ಮಾಡುವುದು, ಇಲ್ಲವೇ ಆಸ್ಪತ್ರೆಗೆ ಸೇರುವುದು ಜಿಲ್ಲಾಡಳಿತ ಮತ್ತು ಅಧಿಕಾರಿಗಳಿಗೆ ಸವಾಲಿನ ಕೆಲಸವೇ ಸರಿ.

ಚಿತ್ತಾಪುರ ತಾಲೂಕಿನ ದೇವಾಪುರ ತಾಂಡಾದಲ್ಲಿ ಇಬ್ಬರು ಸಹೋದರರ ನಡುವಿನ ಸಾಮ್ಯತೆಯಿಂದ ಅಧಿಕಾರಿಗಳೇ ಗೊಂದಲಕ್ಕೀಡಾಗಿ, ಕೋವಿಡ್ ಸೋಂಕಿತ ವ್ಯಕ್ತಿಯನ್ನು ಮನೆಯಲ್ಲಿ, ಸೋಂಕಿಲ್ಲದ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ಯಡವಟ್ಟಿನ ಪ್ರಸಂಗವೂ ನಡೆದು ಹೋಗಿದೆ.

ಇಂದಿನಿಂದ “ಮಹಾ’ ರೈಲು!
ಮಹಾರಾಷ್ಟ್ರದಿಂದ ಬಂದ ಕಾರ್ಮಿಕರು ಕೋವಿಡ್ ಹೊತ್ತು ತಂದು ತಲ್ಲಣ ಸೃಷ್ಟಿಸಿರುವ ನಡುವೆಯೇ ಜೂ.1ರಿಂದ ಮುಂಬೈ-ಬೆಂಗಳೂರು ನಡುವಿನ ಉದ್ಯಾನ್‌ ಎಕ್ಸ್‌ಪ್ರೆಸ್‌ ಆರಂಭವಾಗಲಿದೆ. ಈ ರೈಲು ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಯಾದಗಿರಿ, ರಾಯಚೂರು ಮೂಲಕವೇ ಸಂಚರಿಸಲಿದ್ದು, ಮುಂಬೈನಿಂದ ಮತ್ತಷ್ಟು ಜನರು ಆಗಮಿಸುವ ಸಾಧ್ಯತೆ ಇದೆ. ಹೀಗಾಗಿ ಮತ್ತಷ್ಟು ಕೋವಿಡ್ ಆತಂಕ ಹೆಚ್ಚಾಗಿದೆ.

ಕಳೆದ ನಾಲ್ಕು ದಿನಗಳಲ್ಲಿ 29 ಸಾವಿರ ಜನರನ್ನು ಕ್ವಾರಂಟೈನ್‌ ಕೇಂದ್ರಗಳಿಂದ ಮನೆಗಳಿಗೆ ಕಳುಹಿಸಲಾಗಿದೆ. ಗಂಟಲು ಮಾದರಿ ಸಂಗ್ರಹಿಸಿದವರನ್ನು ಕಡ್ಡಾಯವಾಗಿ ಹೋಂ ಕ್ವಾರಂಟೈನ್‌ ಇರುವಂತೆ ಸೂಚಿಸಲಾಗಿದೆ. ಅಲ್ಲದೇ, ಅವರ ಮೇಲೆ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಲಿದ್ದಾರೆ. ರೈಲಿನ ಮೂಲಕ ಜಿಲ್ಲೆಗೆ ಆಗಮಿಸುವವರೆಗೆ ಕಡ್ಡಾಯವಾಗಿ 7 ದಿನ ಸಾಂಸ್ಥಿಕ ಕ್ವಾರಂಟೈನ್‌ ಮಾಡಲಾಗುತ್ತದೆ.
ಶರತ್‌ ಬಿ.,
ಜಿಲ್ಲಾಧಿಕಾರಿ

ಟಾಪ್ ನ್ಯೂಸ್

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.