ಕೋವಿಡ್‌ಗಿಂತ ನಿರುದ್ಯೋಗವೇ ದೊಡ್ಡ ಸಮಸ್ಯೆ


Team Udayavani, Jun 1, 2020, 2:31 PM IST

ಕೋವಿಡ್‌ಗಿಂತ ನಿರುದ್ಯೋಗವೇ ದೊಡ್ಡ ಸಮಸ್ಯೆ

ಸಾಂದರ್ಭಿಕ ಚಿತ್ರ

ವಾಷಿಂಗ್ಟನ್‌ : ಕೋವಿಡ್‌ ಸೋಂಕಿನಿಂದ ಜರ್ಜರಿತಗೊಂಡಿರುವ ಅಮೆರಿಕಕ್ಕೆ ಈಗ ನಿರುದ್ಯೋಗ ಕೋವಿಡ್‌ಗಿಂತಲೂ ದೊಡ್ಡ ಸಂಕಟವಾಗಿ ಪರಿಣಮಿಸಿದೆ. 1930ರ ಮಹಾ ಆರ್ಥಿಕ ಕುಸಿತದ ಬಳಿಕದ ಅತಿದೊಡ್ಡ ಹೊಡೆತವನ್ನು ಕೋವಿಡ್‌ ನೀಡಿದೆ. ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಹಾಗೂ ನಿರುದ್ಯೋಗ ಅರ್ಜಿಗಳ ವಿಲೇವಾರಿ ಮಾಡಲು ರಾಜಕೀಯ ನಾಯಕರ ಮೇಲೆ ತೀವ್ರ ಒತ್ತಡ ಬಿದ್ದಿದೆ. ನಿರುದ್ಯೋಗ ಭತ್ಯೆ ಪಡೆಯ ಬಯಸಿ ದಾಖಲೆ ಪ್ರಮಾಣದಲ್ಲಿ ಅಮೆರಿಕನ್ನರು ಅರ್ಜಿ ಸಲ್ಲಿಸುತ್ತಿದ್ದಾರೆ.

ಕಳೆದ ಒಂದೇ ವಾರ 21 ಲಕ್ಷ ಜನರು ನಿರುದ್ಯೋಗ ಭತ್ಯೆಗೆ ಅರ್ಜಿ ಸಲ್ಲಿಸಿದ್ದಾರೆ. ಆ ಮೂಲಕ ಕೋವಿಡ್‌ನಿಂದಾಗಿ 10 ವಾರಗಳಲ್ಲಿ ಸುಮಾರು 4 ಕೋಟಿಯಷ್ಟು ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಕಳೆದ ತಿಂಗಳ ಕೊನೆಯಲ್ಲಿ 20 ದಶಲಕ್ಷಕ್ಕೂ ಹೆಚ್ಚು ಅಮೆರಿಕನ್ನರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದ್ದು, ರಾಷ್ಟ್ರದ ನಿರುದ್ಯೋಗ ದರ ಶೇ.14.7 ರಷ್ಟಕ್ಕೆ ಏರಿತ್ತು. ಇದರ ಪ್ರಮಾಣ ಮಾರ್ಚ್‌ನಲ್ಲಿ ಶೇ.4.4ರಷ್ಟಿತ್ತು. ಮೇ ಮೊದಲ 2 ವಾರದಲ್ಲಿ ಸುಮಾರು 21 ಲಕ್ಷ ಜನರು ಹೊಸದಾಗಿ ನಿರುದ್ಯೋಗ ಭತ್ಯೆ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಒಟ್ಟಾರೆ ನಿರುದ್ಯೋಗಿಗಳ ಸಂಖ್ಯೆ 4 ಕೋಟಿಯ ಗಡಿ ದಾಟಿದೆ.

ಐಟಿ-ಬಿಟಿ, ಆತಿಥೊದ್ಯಮ, ಪ್ರವಾಸೋದ್ಯಮ ಸೇರಿದಂತೆ ಬೀದಿ ಬದಿ ಸಣ್ಣ ಪುಟ್ಟ ವ್ಯಾಪಾರ ಮಾಡುವ ಪ್ರತಿಯೋರ್ವ ಉದ್ಯೋಗಿ, ಕಾರ್ಮಿಕ, ವ್ಯಾಪಾರಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಪ್ರತಿಯೊಂದು ಉದ್ಯಮವು ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ.ಕಾರ್ಮಿಕ ಇಲಾಖೆ ಹಂಚಿಕೊಂಡಿರುವ ಅಂಕಿಅಂಶಗಳ ಪ್ರಕಾರ ಆತಿಥ್ಯ ಉದ್ಯಮವು ಅತ್ಯಂತ ದುಃಸ್ಥಿತಿಯನ್ನು ಎದುರಿಸುತ್ತಿದ್ದು, 48 ಲಕ್ಷ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಪ್ರವಾಸೋದ್ಯಮದಲ್ಲಿಯೂ ಉದ್ಯೋಗ ಕಡಿತ ಸಮಸ್ಯೆ ತಲೆದೂರುವುದರೊಂದಿಗೆ ಶೇ.40ರಷ್ಟು ನಿರುದ್ಯೋಗ ದರ ದಾಖಲಾಗಿದೆ.

ಶಿಕ್ಷಣ, ಆರೋಗ್ಯ ಸೇವಾ ಸಂಸ್ಥೆ, ಚಿಲ್ಲರೆ ವ್ಯಾಪಾರ ಮತ್ತು ಉತ್ಪಾದನಾ ಘಟಕಗಳು ಸ್ಥಗಿತಗೊಂಡಿದ್ದು, ಈ ಕ್ಷೇತ್ರದಲ್ಲಿಯೂ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಅನೇಕ ರಾಜ್ಯಗಳು ನಿರುದ್ಯೋಗ ಅರ್ಜಿಗಳನ್ನು ವಿಲೇವಾರಿ ಮಾಡಲು ಹೆಣಗಾಡುತ್ತಿವೆ. ಅಗಾಧ ಸಂಖ್ಯೆಯಲ್ಲಿ ಆನ್‌ಲೈನ್‌ ಅರ್ಜಿಗಳು ಬಂದು ಬೀಳುತ್ತಿವೆ.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.