ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿಗಳು


Team Udayavani, Jun 1, 2020, 5:13 PM IST

ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿಗಳು

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಪ್ರಗತಿಯಲ್ಲಿರುವ 9.74 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ಒಟ್ಟು 10,194 ಕೋಟಿ ರೂ.ಗಳ ಅನುದಾನದ ಮಂಜೂರಾತಿ ಬಗ್ಗೆ ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ನಕಲಿ ದಾಖಲೆಗಳನ್ನು ನೀಡಿ ಮನೆ ಪಡೆದುಕೊಳ್ಳುವ ಪ್ರಕರಣಗಳನ್ನು ಪತ್ತೆಹಚ್ಚಿ ಸರ್ಕಾರಕ್ಕೆ 8000 ಕೋಟಿ ರೂ.ಗಳನ್ನು ಉಳಿತಾಯ ಮಾಡಿರುವುದು ಶ್ಲಾಘನೀಯ ಎಂದು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿ ವಸತಿ ಯೋಜನೆಗಳ ಪಾರದರ್ಶಕ ಅನುಷ್ಠಾನಕ್ಕೆ ತಾಂತ್ರಿಕ ನೂನ್ಯತೆಗಳನ್ನು ಸರಿಪಡಿಸಿ, ಅನುದಾನ ದುರುಪಯೋಗ ತಡೆಯಲು ಅಭಿವೃದ್ಧಿಪಡಿಸಲಾಗಿರುವ ವಿಜಿಲ್ ಆ್ಯಪ್ ತಂತ್ರಾಂಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೊಡಗು ಪುನರ್ವಸತಿ ಯೋಜನೆಯಡಿ 115 ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಪೂರ್ಣಗೊಂಡಿರುವ 405 ಮನೆಗಳನ್ನು ಶೀಘ್ರವಾಗಿ  ಫಲಾನುಭವಿಗಳಿಗೆ ಹಸ್ತಾಂತರಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ 1.24 ಲಕ್ಷ ನಿವೇಶನಗಳನ್ನು ಬಡವರಿಗೆ ನೀಡಲು ಗುರುತಿಸಲಾಗಿದ್ದು, 100 ಕೋಟಿ ರೂ.ಗಳು ಲಭ್ಯವಿದೆ. ನಿವೇಶನಗಳನ್ನು ಅಭಿವೃದ್ಧಿಪಡಿಸಿ ಹಂಚಿಕೆ ಮಾಡಲು ಸುಮಾರು 1000 ಕೋಟಿ ರೂ.ಗಳ ಅವಶ್ಯಕತೆ ಇದೆ ಎಂದು ವಸತಿ ಸಚಿವ ವಿ.ಸೋಮಣ್ಣ ವಿವರಿಸಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಸರ್ಕಾರದ ಜಮೀನಿನಲ್ಲಿರುವ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕಿದೆ.  ಕೊಳಚೆ ಅಭಿವೃದ್ಧಿ ಮಂಡಳಿಗೆ ಬದಲಾಗಿ ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ವಿಲೀನಗೊಳಿಸಿದರೆ ಕೊಳಗೇರಿಗಳ ಸಮಸ್ಯೆಗಳನ್ನು ವ್ಯವಸ್ಥಿತವಾಗಿ ಬಗೆಹರಿಸಬಹುದಾಗಿದೆ ಎಂದು ಸಚಿವರು ಸಲಹೆ ನೀಡಿದರು.

ಕರ್ನಾಟಕ ಗೃಹ ಮಂಡಳಿ ವತಿಯಿಂದ ಆನೇಕಲ್ ತಾಲ್ಲೂಕು ಜಿಗಣಿ ಹೋಬಳಿಯ ಕೋನಸಂದ್ರ, ಬೊಮ್ಮಂಡಹಳ್ಳಿ, ಕಾಡುಜಕ್ಕನಹಳ್ಳಿ ಮತ್ತು ಕಸಬಾ ಹೋಬಳಿಯ ಇಂಗ್ಲವಾಡಿ, ಬಗ್ಗನದೊಡ್ಡಿ ಗ್ರಾಮಗಳಲ್ಲಿ ಪ್ರಧಾನಮಂತ್ರಿ ವಸತಿ ಬಡಾವಣೆಯನ್ನು 1264 ಕೋಟಿ ರೂ,ಗಳ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.

ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದಡಿ 4000 ಕ್ಕಿಂತ ಹೆಚ್ಚು ದೂರಗಳು ದಾಖಲಾಗಿದ್ದು ಸುಮಾರು 700 ಕ್ಕೂ ಹೆಚ್ಚು ದೂರುಗಳನ್ನು ವಿಲೇವಾರಿ ಮಾಡಲಾಗಿದೆ ಹಾಗೂ ದೂರು ವಿಲೇವಾರಿಗೆ ಹೆಚ್ಚಿನ ಸಿಬ್ಬಂದಿಯ ಅಗತ್ಯವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಆರಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ವಸತಿ ಇಲಾಖೆ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.