ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ ಕೋವಿಡ್ ಸೋಂಕು: ಇಂದು 187 ಕೋವಿಡ್ -19 ಸೋಂಕಿತರು ಪತ್ತೆ
Team Udayavani, Jun 1, 2020, 5:59 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಇಂದು ಮತ್ತಷ್ಟು ಹೆಚ್ಚಳವಾಗಿದೆ. ಇಂದು ಹೊಸ 187 ಕೋವಿಡ್-19 ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾಗಿದೆ.
ಇಂದಿನ ಸೋಂಕಿತರ ಪಟ್ಟಿಯಲ್ಲಿ ಹೆಚ್ಚಿನ ಪಾಲು ಕರಾವಳಿ ಜಿಲ್ಲೆ ಉಡುಪಿಯದ್ದು. ಇಲ್ಲಿ ಒಂದೇ ದಿನ 73 ಹೊಸ ಪ್ರಕರಣಗಳು ದೃಢವಾಗಿದೆ. ಮಹಾರಾಷ್ಟ್ರ ಮೂಲದಿಂದ ಬಂದ 32 ಪ್ರಕರಣ ಗಳು, ದುಬೈನಿಂದ ಬಂದ ಮೂವರಿಗೆ ಸೋಂಕು ದೃಢವಾಗಿದ್ದರೆ, 38 ಪ್ರಕರಣಗಳ ಸೋಂಕು ಮೂಲ ಇನ್ನೂ ಪತ್ತೆಯಾಗಿಲ್ಲ.
ಬೆಂಗಳೂರು ನಗರದಲ್ಲಿ 28 ಪ್ರಕರಣಗಳು, ಕಲಬುರಗಿಯಲ್ಲಿ 24 ಕೋವಿಡ್ ಸೋಂಕು ಪ್ರಕರಣಗಳು ದೃಢವಾಗಿದೆ. ಕಳೆದೆರಡು ದಿನಗಳಲ್ಲಿ ಭಾರಿ ಸಂಖ್ಯೆಯ ಸೋಂಕಿತರನ್ನು ಕಂಡಿದ್ದ ಯಾದಗಿರಿಯಲ್ಲಿ ಇಂದು ಯಾವುದೇ ಸೋಂಕು ಪ್ರಕರಣ ದೃಢಪಡದೇ ಇರುವುದು ಸಮಾಧಾನಕರವಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಇಂದು 15 ಹೊಸ ಪ್ರಕರಣಗಳು ದೃಢವಾಗಿದ್ದು, ಹಾಸನದಲ್ಲಿ 16 ಪ್ರಕರಣ ಪತ್ತೆಯಾಗಿದೆ. ಬೀದರ್ ನಲ್ಲಿ ಎರಡು, ಚಿಕ್ಕಬಳ್ಳಾಪುರ ಐದು, ದಕ್ಷಿಣ ಕನ್ನಡ ನಾಲ್ಕು, ವಿಜಯಪುರ ಒಂದು, ಬಾಗಲಕೋಟೆ, ಧಾರವಾಡದಲ್ಲಿ ತಲಾ ಎರಡು, ಶಿವಮೊಗ್ಗಒಂಬತ್ತು, ಬಳ್ಳಾರಿ ಮೂರು, ಕೋಲಾರ, ಹಾವೇರಿ ಮತ್ತು ರಾಮನಗರದಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ.
ರಾಜ್ಯದಲ್ಲಿಅನ್ಯರಾಜ್ಯಗಳಿಂದ ಬರುತ್ತಿರುವ ಪ್ರಯಾಣಿಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಅದರಲ್ಲೂ ಮಹಾರಾಷ್ಟ್ರ ರಾಜ್ಯದಿಂದ ಬರುತ್ತಿರುವವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವ ಪ್ರಮಾಣ ಹೆಚ್ಚಿದೆ.
ರಾಜ್ಯದಲ್ಲಿಒಟ್ಟು ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾಗಿದೆ, ಇವರಲ್ಲಿ 1328 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 52 ಮಂದಿ ಸೋಂಕಿನ ಕಾರಣದಿಂದ ಮರಣ ಹೊಂದಿದ್ದು, ಇಬ್ಬರು ಕೋವಿಡ್ ಅಲ್ಲದ ಅನ್ಯ ಕಾರಣದಿಂದ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.