2 ತಿಂಗಳ ಬಳಿಕ ಹೈಕೋರ್ಟ್‌ ಕಲಾಪ ಆರಂಭ


Team Udayavani, Jun 2, 2020, 6:06 AM IST

2tingala

ಬೆಂಗಳೂರು: ಲಾಕ್‌ಡೌನ್‌ನಿಂದ ಕಳೆದ ಎರಡು ತಿಂಗಳಿಂದ ಸ್ಥಗಿತಗೊಂಡಿದ್ದ ಹೈಕೋರ್ಟ್‌ ಕಲಾಪಗಳು ಸೋಮವಾರದಿಂದ ಪುನಾರಂಭವಾಗಿದ್ದು, ವಕೀಲರು ಹಾಗೂ ಅವರ ಸಹಾಯಕ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಕೋರ್ಟ್‌ಗೆ  ಆಗಮಿಸಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣಗೊಂಡಿತ್ತು. ಬೆಳಗ್ಗೆ 10 ಗಂಟೆಯಿಂದಲೇ ವಕೀಲರು ಕೋಟ್‌ ìಗೆ ಬರಲಾರಂಭಿಸಿದರು.

ಈ ಮಧ್ಯೆ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ  ಇರುವುದಕ್ಕೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ಮುಖ್ಯ ನ್ಯಾ. ಎ.ಎಸ್‌. ಓಕಾ ಸ್ವತಃ ಹೈಕೋರ್ಟ್‌ ಪ್ರವೇಶ ದ್ವಾರಕ್ಕೆ ಆಗಮಿಸಿ ಅಲ್ಲಿನ ಅವ್ಯವಸ್ಥೆ ಕಂಡು ಬೇಸರ ವ್ಯಕ್ತಪಡಿಸಿದರು. ಭಾನುವಾರ ಒಂದೇ ದಿನ ರಾಜ್ಯದಲ್ಲಿ 300 ಕೊರೊನಾ  ಪಾಸಿಟಿವ್‌ ಪ್ರಕರಣಗಳು ಪತ್ತೆಯವಾಗಿದೆ.

ಛತ್ತೀಸಗಡ್‌ ಹಾಗೂ ದೆಹಲಿ ಹೈಕೋರ್ಟ್‌ಗಳು ಕಲಾಪ ಆರಂಭ ಮಾಡಿದರೂ ನಂತರ ಸ್ಥಗಿತಗೊಳಿಸಲಾಗಿದೆ. ಸದ್ಯ ದೇಶದಲ್ಲಿ ಎಲ್ಲಿಯೂ ಹೈಕೋರ್ಟ್‌ ಕಾರ್ಯ ನಿರ್ವಹಣೆ ಮಾಡುತ್ತಿಲ್ಲ.  ಆದರೆ, ಕರ್ನಾಟಕ ಹೈಕೋರ್ಟ್‌ ಕಾರ್ಯಾರಂಭಿಸಿದ್ದು, ನ್ಯಾಯಮೂರ್ತಿಗಳು ತಮ್ಮ ಜೀವವನ್ನು ಪಣಕ್ಕಿಟ್ಟು ಕಲಾಪ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ವಕೀಲರು ಬೆಂಬಲ ನೀಡದೆ ಹೋದರೆ ಕಲಾಪ ನಡೆಸಲು ಹೇಗೆ  ಸಾಧ್ಯವಾಗುತ್ತದೆ ಎಂದು ಬೇಸರ ಹೊರ ಹಾಕಿದರು.

ಕಲಾಪ ಸ್ಥಗಿತದ ಎಚ್ಚರಿಕೆ: ವಕೀಲರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಅನವಶ್ಯಕಾಗಿ ಗುಂಪು ಸೇರಬಾರದು. ಕೋರ್ಟ್‌ ಆವರಣ ಪ್ರವೇಶಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ನಿಯಮ ಪಾಲನೆ  ಮಾಡಬೇಕು. ಯಾರಿಗೆ ಅನುಮತಿ ನೀಡಲಾಗಿದೆಯೇ ಅವರು ಮಾತ್ರ ಕೋರ್ಟ್‌ ಆವರಣ ಪ್ರವೇಶಿಸಬೇಕು. ಇಲ್ಲದೇ ಹೋದರೆ ಕೋರ್ಟ್‌ ಕಲಾಪವನ್ನೇ ಸ್ಥಗಿತಗೊಳಿಸುವುದಾಗಿ ಮುಖ್ಯ ನ್ಯಾಯಮೂರ್ತಿಗಳು ಎಚ್ಚರಿಕೆ ನೀಡಿದರು. ಹಾಗೆಯೇ, ಯಾರಿಗೆ ಅನುಮತಿ ನೀಡಲಾಗಿದೆಯೋ ಅವರನ್ನು ಮಾತ್ರ ಕೋರ್ಟ್‌ ಆವರಣ ಪ್ರವೇಶ ಮಾಡಲು ಅವಕಾಶ ನೀಡಬೇಕು.

ಇತರರಿಗೆ ಪ್ರವೇಶವಕಾಶ ನೀಡಬಾರದು ಎಂದು ಮುಖ್ಯ ನ್ಯಾಯಮೂರ್ತಿಗಳು ಇದೇ ವೇಳೆ ಭದ್ರತಾ ಸಿಬ್ಬಂದಿಗೆ ಸೂಚಿಸಿದರು. ಮತ್ತೂಂದೆಡೆ ವೈದ್ಯಕೀಯ ಸಿಬ್ಬಂದಿಯು ಅನುಮತಿ ಪಡೆದಿದ್ದ ವಕೀಲರಿಗೆ ಥರ್ಮಲ್‌ ಸ್ಕ್ರೀನಿಂಗ್‌ ಮಾಡಿದರು. ಉಷ್ಣಾಂಶ ಕಡಿಮೆಯಿದ್ದ ವಕೀಲರಿಗೆ ಕೋರ್ಟ್‌ ಪ್ರವೇಶಿಸಲು ಅವಕಾಶ ನೀಡಿದರು. ಕೋರ್ಟ್‌ಗೆ  ಭೇಟಿ ಕೊಟ್ಟವರ ಹೆಸರು ಹಾಗೂ ಇತರೆ ವಿವರಗಳನ್ನು ನಮೂದು ಮಾಡಿಕೊಂಡರು. ಸಾರ್ವಜನಿಕರು, ವ್ಯಾಜ್ಯದಾರರಿಗೆ ಕೋರ್ಟ್‌ ಪ್ರವೇಶ ನಿರ್ಬಂಧ ವಿಧಿಸಲಾಗಿತ್ತು.

ಎಂಟು ಕೋರ್ಟ್‌ಗಳು ಕಾರ್ಯನಿರ್ವಹಣೆ: ಸೋಮವಾರ ಹೈಕೋರ್ಟ್‌ನ ಎರಡು ವಿಭಾಗೀಯ ಪೀಠ ಸೇರಿದಂತೆ ಒಟ್ಟು 8 ಪೀಠಗಳು ಮಾತ್ರ ಕಾರ್ಯ ನಿರ್ವಹಿಸಿದವು. ಬೆಳಗಿನ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್‌ ವಿಚಾರಣೆ ನಡೆಯಿತು.  ಮಧ್ಯಾಹ್ನ ತೆರೆದ ನ್ಯಾಯಾಲಯದಲ್ಲಿ ಕಲಾಪ ನಡೆಯಿತು. ವಕೀಲರು ಖುದ್ದು ಹಾಜರಾಗಿ ವಾದ ಮಂಡಿಸಿದರು. ವಕೀಲರು 15ರಿಂದ 20 ನಿಮಿಷಗಳ ಒಳಗೆ ವಾದ ಮಂಡನೆ ಪೂರ್ಣಗೊಳಿಸಲು ಅವಕಾಶ ನೀಡಲಾಗಿತ್ತು.

ವಕೀಲರು  ಹಾಗೂ ನ್ಯಾಯಮೂರ್ತಿ, ಕೋರ್ಟ್‌ ಸಿಬ್ಬಂದಿ ಮಾಸ್ಕ್ ಹಾಗೂ ಕೈಗವಸು ಧರಿಸಿದ್ದು ಸಾಮಾನ್ಯವಾಗಿತ್ತು. ಪ್ರತಿ ಕೋರ್ಟ್‌ ಹಾಲ್‌ನಲ್ಲಿಯೂ ಸ್ಯಾನಿಟೈಸರ್‌ ಸೇರಿದಂತೆ ಮುಂಜಾಗ್ರತಾ ಕ್ರಮಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಆರೋಗ್ಯ ಇಲಾಖೆ  ಹೊರಡಿಸಿರುವ ಮಾರ್ಗ ಸೂಚಿಗಳ ಫಲಕಗಳನ್ನು ಕೋರ್ಟ್‌ ಆವರಣದ ಪ್ರಮುಖ ಸ್ಥಳದಲ್ಲಿ ಪ್ರದರ್ಶನ ಮಾಡಲಾಗಿತ್ತು.

ಟಾಪ್ ನ್ಯೂಸ್

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Virat Kohli: ಬಾಕ್ಸಿಂಗ್‌ ಡೇ ಟೆಸ್ಟ್‌ಗೂ ಮುನ್ನ ವಿರಾಟ್‌ ನೂತನ ಕೇಶ ವಿನ್ಯಾಸ

Virat Kohli: ಬಾಕ್ಸಿಂಗ್‌ ಡೇ ಟೆಸ್ಟ್‌ಗೂ ಮುನ್ನ ವಿರಾಟ್‌ ನೂತನ ಕೇಶ ವಿನ್ಯಾಸ

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.