ನುಸುಳು ಯತ್ನ ವಿಫಲ: 3 ಉಗ್ರರ ಹೊಡೆದುರುಳಿಸಿದ ಭದ್ರತಾ ಪಡೆ
ನೌಶೇರಾ ವಲಯದಲ್ಲಿ ನಡೆದ ಕಾರ್ಯಾಚರಣೆ; ಕಥುವಾ ಸಾಂಬಾ ವಲಯದಲ್ಲಿ ಬಿರುಸಿನ ಬಿಗಿ ನಿಗಾ
Team Udayavani, Jun 2, 2020, 7:22 AM IST
ಸಾಂದರ್ಭಿಕ ಚಿತ್ರ
ಜಮ್ಮು: ಭದ್ರತಾ ಪಡೆಗಳಿಗೆ ಮತ್ತೂಂದು ಯಶಸ್ಸು ಎಂಬಂತೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೇರಾ ವಲಯದ ಗಡಿ ನಿಯಂತ್ರಣ ರೇಖೆಯ ಬಳಿ ಶಸ್ತ್ರಸಜ್ಜಿತ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಸೋಮವಾರ ಬೆಳಗ್ಗಿನ ಜಾವ ಈ ಘಟನೆ ನಡೆದಿದೆ. ಉಗ್ರರ ಸಮೂಹವೊಂದು ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಿಂದ ಭಾರತದೊಳಕ್ಕೆ ನುಸುಳಲು ಯತ್ನಿಸಿತ್ತು. ಕಲಾಲ್ ಗ್ರಾಮದಲ್ಲಿ ಪಹರೆಯಲ್ಲಿದ್ದ ಭದ್ರತಾ ಪಡೆಯ ಯೋಧರಿಗೆ ಈ ಉಗ್ರರು ಕಣ್ಣಿಗೆ ಬಿದ್ದಿದ್ದು, ಎರಡೂ ಕಡೆ ಕೆಲ ಕಾಲ ಭೀಕರ ಗುಂಡಿನ ಚಕಮಕಿ ನಡೆಯಿತು. ಕೊನೆಗೆ ಮೂವರು ಉಗ್ರರನ್ನು ಹತ್ಯೆಗೈಯುವಲ್ಲಿ ಯೋಧರು ಯಶಸ್ವಿಯಾಗಿದ್ದು, ಉಗ್ರರ ನುಸುಳು ವಿಕೆ ಯತ್ನವನ್ನು ವಿಫಲ ಗೊಳಿಸಿದ್ದಾರೆ.
ಶೋಧ ಕಾರ್ಯ ಚುರುಕು: ಇನ್ನಷ್ಟು ಉಗ್ರರು ಒಳನುಸುಳುವ ಸುಳಿವಿನ ಹಿನ್ನೆಲೆಯಲ್ಲಿ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ 6ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಭದ್ರತಾ ಪಡೆ ಸೋಮವಾರ ಶೋಧ ಕಾರ್ಯ ಆರಂಭಿಸಿದೆ. ಇದೇ ವೇಳೆ, ಕಥುವಾ-ಸಾಂಬಾ ವಲಯದ ಅಂತಾರಾಷ್ಟ್ರೀಯ ಗಡಿಯಲ್ಲಿ ಅನುಮಾನಾಸ್ಪದ ಚಲನವಲನ ಕಂಡುಬಂದ ಹಿನ್ನೆಲೆಯಲ್ಲಿ ಇಲ್ಲೂ ಭಾರೀ ನಿಗಾ ವಹಿಸಿ, ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಈ ಹಿಂದೆ ಹಲವು ಬಾರಿ ಉಗ್ರರು ಹಿರಾನಗರ, ಸಾಂಬಾ ಪ್ರದೇಶದ ಮೂಲಕ ಒಳನುಸುಳಿ ವಿಧ್ವಂಸಕ ಕೃತ್ಯ ಎಸಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.