ನಕ್ಕನಹಳ್ಳಿ ಅಂಗನವಾಡಿ ಅಕ್ರಮಕ್ಕೆ ಕಡಿವಾಣ ಹಾಕಿ
Team Udayavani, Jun 2, 2020, 7:23 AM IST
ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ನಕ್ಕನಹಳ್ಳಿ ಗ್ರಾಮದಲ್ಲಿನ ಅಂಗನವಾಡಿ ಕೇಂದ್ರದಲ್ಲಿ ನಡೆಯುತ್ತಿರುವ ಅವ್ಯವಹಾರಕ್ಕೆ ಕಡಿವಾಣ ಹಾಕುವಂತೆ ಮತ್ತು ತಾಲೂಕಿನ ಶಿಶು ಅಭಿವೃದ್ಧಿ ಅಧಿಕಾರಿ ವಂಶಿಕೃಷ್ಣ ಮೇಲೆ ಕ್ರಮವಹಿಸುವಂತೆ ಗ್ರಾಮಸ್ಥರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಇಲಾಖೆಯ ಅಧಿಕಾರಿಗೆ ಮನವಿ ಸಲ್ಲಿಸಿದರು
ಗರ್ಭಿಣಿಯರಿಗೆ ಸರ್ಕಾರದಿಂದ ಉಚಿತವಾಗಿ ವಿತರಣೆ ಮಾಡುವ ಆಹಾರ ಪದಾರ್ಥಗಳನ್ನು ಗ್ರಾಮದ ಫಲಾನುಭವಿಗಳಿಗೆ ಸರಿಯಾಗಿ ನೀಡದೇ ಬೇರೆಯವರಿಗೆ ಹಣಕ್ಕೆ ಮಾರಾಟ ಮಾಡುತ್ತಿದ್ದು, ಸರ್ಕಾರಕ್ಕೆ ವಂಚನೆ ಮಾಡುತ್ತಾ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡುತ್ತಾ ಇದ್ದಾರೆ ಎಂದು ಮಾಲೂರು ತಾಲೂಕಿನ ಶಿಶು ಅಭಿವೃದ್ಧಿ ಅಧಿಕಾರಿಗೆ ಮೇ 19 ರಂದು ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಕ್ರಮ ಜರುಗಿಸಿಲ್ಲ ಎಂದೂ ಆರೋಪಿಸಿದರು. ಅಂಗನವಾಡಿ ಶಿಕ್ಷಕರು ಮತ್ತು ಶಿಶು ಅಭಿವೃದ್ಧಿ ಅಧಿಕಾರಿ ಶಾಮೀಲಾಗಿದ್ದಾರೆ ಎನ್ನುವ ಗುಮಾನಿ ಇದ್ದು,
ನಾವು ನಮ್ಮ ಗ್ರಾಮದಲ್ಲಿ ನಡೆಯುತ್ತಾ ಇರುವ ಅಕ್ರಮದ ಬಗ್ಗೆ ಸಾಕಷ್ಟು ಬಾರಿ ಮೌಖೀಕವಾಗಿ ದೂರು ನೀಡಿದ್ದರೂ ಕನಿಷ್ಠ ಒಂದು ಬಾರಿಯಾದರೂ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿಲ್ಲ ಯಾಕೆ ಎಂದೂ ಪ್ರಶ್ನಿಸಿದರು. ಈ ಕೂಡಲೇ ನಮ್ಮ ಗ್ರಾಮದಲ್ಲಿ ನಡೆದಿರುವ ಅವ್ಯವಹಾರ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಿಗಿಸಬೇಕು ಎಂದು ಒತ್ತಾಯಿಸಿದರು. ಈ ವೇಳೆ ನಕ್ಕನಹಳ್ಳಿ ಗ್ರಾಮಸ್ಥರಾದ ಮಂಜುನಾಥ್, ನವೀನ್, ಮುನಿಸ್ವಾಮಿ, ತಿಮ್ಮರಾಯಪ್ಪ, ಅಂಜಿನಪ್ಪ, ಪ್ರಭಾಕರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.