ದೇಶದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 1.9 ಲಕ್ಷಕ್ಕೆ ಏರಿಕೆ: ಸಹಜ ಸ್ಥಿತಿಗೆ ಮರಳಿದ ಜನಜೀವನ
Team Udayavani, Jun 2, 2020, 8:00 AM IST
ನವದೆಹಲಿ: ದೇಶದ 5ನೇ ಹಂತದ ಲಾಕ್ ಡೌನ್ ಅವಧಿಯಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳಿದ್ದು, ವೈರಸ್ ಆರ್ಭಟವಿರುವ ಪ್ರದೇಶಗಳಲ್ಲಿ ಮಾತ್ರ ನಿರ್ಬಂಧಗಳು ಮುಂದುವರೆದಿದೆ. ಸೋಮವಾರ ಅತೀ ಹೆಚ್ಚು ಜನರು ಮಾರುಕಟ್ಟೆ ಸೇರಿದಂತೆ ಹಲವೆಡೆ ಪ್ರಯಾಣಿಸಿದ್ದರಿಂದ ರಸ್ತೆಗಳಲ್ಲಿ ಸಂಚಾರ ದಟ್ಟನೆಯೂ ಕಂಡುಬಂದವು.
ಏತನ್ಮಧ್ಯೆ ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 1.9 ಲಕ್ಷ ತಲುಪಿದ್ದು, ಸೋಮವಾರ ಒಂದೇ ದಿನ 8,400 ಜನರು ಸೋಂಕಿಗೆ ತುತ್ತಾಗಿರುವುದು ದಾಖಲೆಯಾಗಿದೆ. ಮತ್ತೊಂದೆಡೆ ಮರಣ ಪ್ರಮಾಣವೂ ಏರುಗತಿಯಲ್ಲಿ ಸಾಗಿದ್ದು ಒಟ್ಟಾರೆಯಾಗಿ 5,394 ಜನರು ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 230 ಜನರು ಸೋಂಕಿನ ಕಾರಣದಿಂದ ಪ್ರಾಣ ತ್ಯೆಜಿಸಿದ್ದಾರೆಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಒಟ್ಟಾರೆ ವೈರಾಣು ಪೀಡಿತರ ಸಂಖ್ಯೆ 1,90,535 ಇದ್ದರೆ, ಗುಣಮುಖರಾದವರ ಪ್ರಮಾಣ 92,000 ಎಂದು ವರದಿಯಾಗಿದೆ. ಭಾರತವೂ ಕೋವಿಡ್ 19 ಹಾಟ್ ಸ್ಪಾಟ್ ದೇಶಗಳಲ್ಲಿ 7ನೇ ಸ್ಥಾನದಲ್ಲಿ ಗುರುತಿಸಕೊಂಡಿದ್ದು ಅಮೆರಿಕಾ, ಬ್ರೆಜಿಲ್, ರಷ್ಯಾ, ಯುಕೆ, ಸ್ಪೇನ್, ಇಟಲಿ ಮೊದಲ 6 ಸ್ಥಾನಗಳಲ್ಲಿವೆ.
ಗಮನಾರ್ಹ ಸಂಗತಿಯೆಂದರೇ ಇತರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆ ಹೆಚ್ಚಿದ್ದು ಮೃತರ ಪ್ರಮಾಣ ಕಡಿಮೆಯಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಜಾಗತಿಕವಾಗಿ 63 ಲಕ್ಷಕ್ಕಿಂತ ಹೆಚ್ಚು ಜನರು ಸೋಂಕಿಗೆ ತುತ್ತಾಗಿದ್ದು 3,77 ಲಕ್ಷದಷ್ಟು ಜನರು ಮೃತಪಟ್ಟಿದ್ದಾರೆ. ಅಮೆರಿಕಾವೊಂದರಲ್ಲೇ 1ಲಕ್ಷಕ್ಕಿಂತ ಹೆಚ್ಚು ಜನರು ಅಸುನೀಗಿದ್ದು, 18 ಲಕ್ಷ ಜನರು ವೈರಾಣುವಿಗೆ ಭಾಧಿತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.