ಜಿಲ್ಲೆಯಲ್ಲಿ 8ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ
Team Udayavani, Jun 2, 2020, 8:16 AM IST
ಧಾರವಾಡ: ಕೋವಿಡ್ ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಜೂ.1ರಿಂದ 8ರ ವರೆಗೆ ಜಿಲ್ಲೆಯಾದ್ಯಂತ ಸಿಆರ್‌ಪಿಸಿ 1973ರ ಕಲಂ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.
ಜಿಲ್ಲಾದ್ಯಂತ ಸಂತೆ, ಜಾತ್ರೆ, ಸಮಾವೇಶ, ಮೆರವಣಿಗೆ, ಸಮ್ಮೇಳನ, ಕ್ರೀಡಾಕೂಟ, ಪ್ರಾರ್ಥನೆ ಸ್ಥಳಗಳು, ಚಿತ್ರಮಂದಿರ, ಮಾಲ್, ಜಿಮ್, ರಾಜಕೀಯ ಪಕ್ಷಗಳ ಸಮಾವೇಶ ಸೇರಿದಂತೆ ಎಲ್ಲಾ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಹಾಗೂಕ್ರೀಡಾ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ.
5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ, ಸಭೆ-ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಕರ್ಫ್ಯೂ ಅವಧಿಯಲ್ಲಿ ಸಾರ್ವಜನಿಕರು ತುರ್ತು ವೈದ್ಯಕೀಯ ಕಾರ್ಯ ಹೊರತುಪಡಿಸಿ ಅನಗತ್ಯವಾಗಿ ತಿರುಗಾಡುವುದನ್ನು ನಿಬಂì ಧಿಸಿದೆ. ಕರ್ಫ್ಯೂ ಅವಧಿಯಲ್ಲಿ ಜಿಲ್ಲೆಯಲ್ಲಿನ ಮದುವೆ ಕಾರ್ಯಕ್ರಮದಲ್ಲಿ ಕೇವಲ 50 ಜನರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ. ಶವ ಸಂಸ್ಕಾರ ಕಾರ್ಯದಲ್ಲಿ ಕೇವಲ 20 ಜನರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ. ಶಿಕ್ಷಣ, ತರಬೇತಿ, ಕೋಚಿಂಗ್ ಸಂಸ್ಥೆಗಳು, ಹೋಟೆಲ್, ರೆಸ್ಟೋರೆಂಟ್, ಬಾರ್ ಸೇರಿದಂತೆ ಆತಿಥ್ಯ ಸೇವೆಗಳೆಲ್ಲವನ್ನು ನಿರ್ಬಂಧಿಸಲಾಗಿದೆ. ಆದರೆ ಆನ್‌ಲೈನ್ ಕ್ಲಾಸ್‌ಗಳು ಹಾಗೂ ದೂರ ಸಂವೇದಿ ಕಲಿಕೆಗೆ ಇದು ಅನ್ವಯಿಸುವುದಿಲ್ಲ. ಸರಕಾರಿ ವಾಹನಗಳಿಗೆ ಮತ್ತು ಕೋವಿಡ್-19 ಕಾರ್ಯಾಚರಣೆಯಲ್ಲಿ ಕರ್ತವ್ಯನಿರತ ಸಿಬ್ಬಂದಿ ಮತ್ತು ವಾಹನಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ. ರಾತ್ರಿ 9ರಿಂದ ಬೆಳಗ್ಗೆ 5 ಗಂಟೆವರೆಗೆ ಸಾರ್ವಜನಿಕ ತುರ್ತು ವೈದ್ಯಕೀಯ ಕಾರ್ಯ ಹೊರತುಪಡಿಸಿ ಅನಗತ್ಯವಾಗಿ ತಿರುಗಾಡುವುದನ್ನು ನಿರ್ಬಂಧಿಸಿದೆ.
ಹೋಟೆಲ್‌ಗಳು ಪಾರ್ಸೆಲ್ ಸೇವೆ ಮಾತ್ರ ನೀಡಬಹುದು. ಈ ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.