5ರಿಂದ ಜೂನ್ ತಿಂಗಳ ಪಡಿತರ ವಿತರಣೆ
Team Udayavani, Jun 2, 2020, 9:46 AM IST
ಬಾಗಲಕೋಟೆ: ಕೋವಿಡ್-19 ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜೂನ್ ಮಾಹೆಗೆ ರಾಜ್ಯ ಸರ್ಕಾರ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಮತ್ತು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಒಟ್ಟಿಗೆ ಪಡಿತರವನ್ನು ಜೂ.5 ರಿಂದ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ಕೆ. ರಾಜೇಂದ್ರ ತಿಳಿಸಿದ್ದಾರೆ.
ಅಂತ್ಯೋದಯ ಕಾರ್ಡ್‌ದಾರರಿಗೆ 35 ಕೆ.ಜಿ ಅಕ್ಕಿ (ಎನ್‌ಎಫ್‌ಎಸ್‌ಎ), 5 ಕೆ.ಜಿ ಅಕ್ಕಿ ಪ್ರತಿ ಸದಸ್ಯರಿಗೆ (ಪಿಎಂಜಿಕೆಎವೈ), 2 ಕೆ.ಜಿ ತೊಗರಿ ಬೇಳೆ ನೀಡಲಾಗುವುದು. ಬಿಪಿಎಲ್ ಕಾರ್ಡ್‌ದಾರರಿಗೆ ಎರಡು ಯೋಜನೆ ಸೇರಿ ಪ್ರತಿ ಸದಸ್ಯರಿಗೆ 10 ಕೆ.ಜಿ ಅಕ್ಕಿ, ಪ್ರತಿ ಪಡಿತರ ಚೀಟಿಗೆ 2 ಕೆ.ಜಿ ಗೋಧಿ, 2 ಕೆ.ಜಿ ತೊಗರಿ ಬೇಳೆ ಉಚಿತವಾಗಿ ನೀಡಲಾಗುತ್ತದೆ. ಅಲ್ಲದೇ ಎಪಿಎಲ್ ಕಾರ್ಡ್‌ದಾರರಿಗೆ ಒಪ್ಪಿಗೆ ನೀಡಿದ ಹಾಗೂ ಒಪ್ಪಿಗೆ ನೀಡಲಾರದ ಪಡಿತರ ಚೀಟಿಗೆ ಏಕ ಸದಸ್ಯತ್ವಕ್ಕೆ 5 ಕೆ.ಜಿ ಅಕ್ಕಿ ಮತ್ತು ಎರಡು ಮತ್ತು ಹೆಚ್ಚಿನ ಸದಸ್ಯರಿರುವ ಪಡಿತರ ಚೀಟಿದಾರರಿಗೆ 10 ಕೆ.ಜಿ ಅಕ್ಕಿಯನ್ನು ಪ್ರತಿ ಕೆ.ಜಿಗೆ 15 ರೂ.ಗಳಂತೆ ನೀಡಲಾಗುತ್ತದೆ. ಹೊಸದಾಗಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ ಬಿಪಿಎಲ್ ಕಾರ್ಡ್‌ದಾರರಿಗೆ 10 ಕೆ.ಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತಿದೆ. ಎಪಿಎಲ್ ಕಾರ್ಡ್‌ದಾರರಿಗೆ ಪ್ರತಿ ಕೆ.ಜಿಗೆ 15 ರೂ.ಗಳಂತೆ 10 ಕೆ.ಜಿ ಅಕ್ಕಿ ನೀಡಲಾಗುತ್ತದೆ.
ವಲಸೆ ಕಾರ್ಮಿಕರಿಗೆ ಹಾಗೂ ಪಡಿತರ ಚೀಟಿ ರಹಿತ ಅರ್ಹರಿಗೆ ಮೇ ಮಾಹೆಗೆ ಪಡಿತರ ಪಡೆದಿದ್ದರೆ ಜೂನ್ ಮಾಹೆಗೆ 5 ಕೆ.ಜಿ ಅಕ್ಕಿ ಹಾಗೂ 2 ಕೆ.ಜಿ ಕಡಲೆಕಾಳು ಉಚಿತವಾಗಿ ನೀಡಲಾಗುತ್ತದೆ. ಗ್ರಾಮೀಣ ಭಾಗದ ಅನಿಲ ರಹಿತ ಅಂತ್ಯೋದಯ ಹಾಗೂ ಬಿಪಿಎಲ್ ಪಡಿತರ ಚೀಟಿದಾರರಿಗೆ ಪ್ರತಿ ಲೀಟರ್‌ಗೆ 35 ರೂ.ಗಳಂತೆ 3.ಲೀ ಸೀಮೆ ಎಣ್ಣೆ ಹಾಗೂ ಒಪ್ಪಿಗೆ ನೀಡಿದ ಗ್ಯಾಸ್ ಪಡಿತರ
ಚೀಟಿದಾರರಿಗೆ 1.ಲೀ ಸೀಮೆ ಎಣ್ಣೆ ವಿತರಿಸಲಾಗುತ್ತಿದೆ. ಅಂತಾರಾಜ್ಯ, ಅಂತರ್ ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಬಹುದಾಗಿದೆ. ಕಡ್ಡಾಯವಾಗಿ ಬಯೋ, ಮೊಬೈಲ್ ಓಟಿಪಿ ಮೂಲಕವೇ ಪಡಿತರ ವಿತರಣೆ ಮಾಡಲಾಗುತ್ತಿದೆ. ಜೂ.5ರಿಂದ ಬೆಳಗ್ಗೆ 7 ರಿಂದ ರಾತ್ರಿ 9 ಗಂಟೆಯವರೆಗೆ ತಿಂಗಳ ಅಂತ್ಯದವರೆಗೆ ಊಟದ ಸಮಯ ಹೊರತುಪಡಿಸಿ ಪಡಿತರ ವಿತರಣೆ ಕಾರ್ಯ ನಡೆಯುವುದು. ಪಡಿತರ ಪಡೆಯುವ ಸದಸ್ಯರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.