30ರ ವರೆಗೆ ಲಾಕ್‌ಡೌನ್
Team Udayavani, Jun 2, 2020, 9:51 AM IST
ಬಾಗಲಕೋಟೆ: ಜಿಲ್ಲಾದ್ಯಂತ ಜೂ.30ರ ವರೆಗೆ ಲಾಕ್‌ಡೌನ್ ಮುಂದುವರಿದಿದ್ದು, ಪ್ರತಿದಿನ ಸಂಜೆ 9 ಗಂಟೆಯಿಂದ ಬೆಳಗ್ಗೆ 5ರ ವರೆಗೆ ಅನಾವಶ್ಯಕ ಹೊರಗೆ ಸಂಚಾರ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ಕೆ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, 10 ವರ್ಷದೊಳಗಿನ ಮಕ್ಕಳು, ಯಾವುದೇ ರೋಗ ಹೊಂದಿರುವ ರೋಗಗ್ರಸ್ಥ ವ್ಯಕ್ತಿಗಳು ಹಾಗೂ ಗರ್ಭಿಣಿಯರು ಆರೋಗ್ಯ, ಅವಶ್ಯಕ ಪೂರೈಕೆಗಳಂತಹ ಅನಿವಾರ್ಯ ಕಾರಣಗಳಲ್ಲದ ಹೊರತು ಕಡ್ಡಾಯವಾಗಿ ಮನೆಯಲ್ಲಿಯೇ ಇರುವಂತೆ ತಕ್ಷಣ ಜಾರಿಗೆ ಬರುವಂತೆ ಆದೇಶಿಸಿದ್ದಾರೆ.
ಈ ಆದೇಶವನ್ನು ಪೊಲೀಸ್ ಅಧೀಕ್ಷಕರು ಕಟ್ಟುನಿಟ್ಟಾಗಿ ಜಾರಿಗೆ ತರಲು ಕ್ರಮವಹಿಸಬೇಕು. ಆದೇಶ ಅನುಷ್ಠಾನಕ್ಕೆ ತರಲು ಯಾವುದೇ ಇಲಾಖೆ ಅಧಿಕಾರಿ, ಸಿಬ್ಬಂದಿ ಸೇವೆ ಅಗತ್ಯವಿದ್ದಲ್ಲಿ ಆಯಾ ಇಲಾಖೆ ನೆರವು ಪಡೆದುಕೊಳ್ಳಲು ಅನುಮತಿ ನೀಡಲಾಗಿದೆ. ಜಿಲ್ಲೆಯ ಎಲ್ಲ ತಾಲೂಕು ದಂಡಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲ ಉಪವಿಭಾಗದ ದಂಡಾಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಆರಕ್ಷಕ ಇಲಾಖೆಗೆ ಅಗತ್ಯ ಸಹಕಾರ ನೀಡುವ ಜೊತೆಗೆ ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸುವಂತೆ ಆದೇಶಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.