ಕೇಂದ್ರದಿಂದ ರಾಜ್ಯಕ್ಕೆ 2 ಲಕ್ಷ ಕೋಟಿ ಅನುದಾನ: ರವಿ
Team Udayavani, Jun 2, 2020, 1:30 PM IST
ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಇದುವರೆಗೂ 2 ಲಕ್ಷ 19 ಸಾವಿರ ಕೋಟಿ ರೂ. ಅನುದಾನ ರಾಜ್ಯಕ್ಕೆ ನೀಡಿದೆ ಎಂದು ಸಚಿವ ಸಿ.ಟಿ. ರವಿ ತಿಳಿಸಿದರು. ಸೋಮವಾರ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರಕ್ಕೆ ಹೋಲಿಸಿದರೆ ಮೋದಿ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಶೇ.180 ರಷ್ಟು ಅನುದಾನ ಬಂದಿದೆ ಎಂದರು.
ರಾಜ್ಯಕ್ಕೆ ಐಎಟಿ ನೀಡಿದ್ದು ಮೋದಿ ಸರ್ಕಾರ. ಏಳು ಲಕ್ಷ ಮನೆ 18 ಸಾವಿರ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ತುಮಕೂರಿಗೆ ಹೆಲಿಕ್ಯಾಪ್ಟರ್ ಉತ್ಪಾದನಾ ಘಟಕ ಮಂಜೂರಾಗಿದೆ. ಬೀದರ್, ಕಲಬುರ್ಗಿ ರೈಲ್ವೆ ಯೋಜನೆ ಪೂರ್ಣಗೊಳಿಸಲಾಗಿದೆ. 240 ಜನರಿಕ್ ಔಷ ಧ ಮಳಿಗೆಗಳ ಕಾರ್ಯ ನಿರ್ವಹಿಸುತ್ತಿವೆ ಎಂದರು. ರಾಜ್ಯದ ರೈತರು 11 ಸಾವಿರ ಕೋಟಿ ಪರಿಹಾರವನ್ನು ಫಸಲ್ ಭೀಮಾ ಯೋಜನೆಯಡಿ ಸದುಪಯೋಗಪಡೆದುಕೊಂಡಿದ್ದಾರೆ. ಬೆಂಬಲ ಬೆಲೆ ಘೋಷಣೆ ಮಾಡಿದೆ. ಸ್ಮಾಟ್ ಸಿಟಿ ಯೋಜನೆಯಡಿಯಲ್ಲಿ ರಾಜ್ಯಕ್ಕೆ 1960 ಕೋಟಿ ಹಣ ಬಿಡುಗಡೆ ಮಾಡಿದೆ. 171 ಕೋಟಿ 69 ಲಕ್ಷ ರೂ. ಬರ ಪರಿಹಾರ ನೆರೆ ಪರಿಹಾರ ಬಿಡುಗಡೆ ಮಾಡಿದೆ ಎಂದರು.
ರಾಷ್ಟ್ರೀಯ ಹೆದ್ದಾರಿ ಯೋಜನೆಗೆ 27,487 ಕೋಟಿ ರೂ. ಹಣ ಮಂಜೂರಾಗಿದೆ. ರೈಲ್ವೆ ಯೋಜನೆಗೆ 2197 ಕೋಟಿ ರೂ. ನೀಡಿದೆ. ನಮ್ಮ ಮೆಟ್ರೋ ಯೋಜನೆಗೆ 8,719 ಕೋಟಿ ಅನುದಾನ ಕೇಂದ್ರ ಸರ್ಕಾರ ನೀಡಿದೆ. ಉಜ್ವಲ ಯೋಜನೆಯಡಿ 4,300 ಕೋಟಿ ರೂ. ಅನುದಾನ ನೀಡಿದೆ. ಕೃಷಿ ಸಿಂಚಾಯಿ ಯೋಜನೆ 405 ಕೋಟಿ, ಸಾರಿಗೆ ವ್ಯವಸ್ಥೆ ಸುಧಾರಣೆಗೆ 239 ಕೋಟಿ, ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ 219 ಕೋಟಿ ರೂ., ಮಣ್ಣಿನ ಆರೋಗ್ಯ ಕಾರ್ಡ್ ವಿತರಣೆಗೆ 31 ಕೋಟಿ ಹಣ ಕೇಂದ್ರ ಸರ್ಕಾರ ನೀಡಿದೆ. ಕಾಳು ಮೆಣಸು ಆಮದು ಬಗ್ಗೆ ರೈತರಿಂದ ದೂರು ಬಂದ ಹಿನ್ನೆಲೆಯಲ್ಲಿ ಆಮದು ಬ್ಯಾನ್ ಮಾಡಿ ಬೆಂಬಲ ಬೆಲೆ ಘೋಷಣೆ ಮಾಡಿ ಬೆಲೆ ಸ್ಥಿರತೆ ಮಾಡುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ ಎಂದರು.
ಜಿಲ್ಲೆಗೆ 2,838 ಕೋಟಿ 59 ಲಕ್ಷ ಅನುದಾನವನ್ನು ಕೇಂದ್ರ ಸರ್ಕಾರ ವಿವಿಧ ಯೋಜನೆಯಡಿ ನೆರವು ನೀಡಿದೆ. ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ವಿದ್ಯುತ್ ಜ್ಯೋತಿ ಯೋಜನೆಯಡಿ 195 ಕೋಟಿ ಬಿಡುಗಡೆಯಾಗಿದೆ. ಸೌಭಾಗ್ಯ ಯೋಜನೆಯಡಿಯಲ್ಲಿ 2 ಕೋಟಿ 65 ಲಕ್ಷ ನೀಡಿದೆ. ನಗರ ಪ್ರದೇಶದ ಸಮಗ್ರ
ವಿದ್ಯುತ್ ಅಭಿವೃದ್ಧಿ ಯೋಜನೆಗೆ 22 ಕೋಟಿ 35 ಲಕ್ಷ, ಆಯುಷ್ಮಾನ್ ಭಾರತ್ ಯೋಜನೆಯಡಿ 32 ಕೋಟಿ 98 ಲಕ್ಷ ರೂ. 19.259 ಜಿಲ್ಲೆಯ ಜನತೆ ಸದುಪಯೋಗಪಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಕೊಪ್ಪ ಮೆಡಿಕಲ್ ಆಸ್ಪತ್ರೆಗೆ 12 ಕೋಟಿ, ರಾಷ್ಟ್ರೀಯ ಹೆದ್ದಾರಿಗೆ 731 ಕೋಟಿ ರೂ., ಅಮೃತ್ ಯೋಜನೆಗೆ 102 ಕೋಟಿ 57 ಲಕ್ಷ, ಪಂಚಾಯತ್ ರಾಜ್ ಸಂಸ್ಥೆಗಳಿಗೆ 120 ಕೋಟಿ 72 ಲಕ್ಷ ರೂ., ನಗರ ಸ್ಥಳೀಯ ಸಂಸ್ಥೆಗಳಿಗೆ 58 ಕೋಟಿ 25 ಲಕ್ಷ ರೂ. ಅನುದಾನ ಕೇಂದ್ರ ಸರ್ಕಾರ ನೀಡಿದೆ. ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ 28 ಕೋಟಿ ರೂ., ಕಿಸಾನ್ ಸನ್ಮಾನ್ ಯೋಜನೆಗೆ 86 ಕೋಟಿ 18 ಲಕ್ಷ ರೂ., ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ 41 ಕೋಟಿ 9 ಲಕ್ಷ ಹಣ ನೀಡಿದೆ. ಆತ್ಮ ಯೋಜನೆ, ಪ್ರಧಾನ ಮಂತ್ರಿ ಫಸಲ್ ಭೀಮಾ, ಹವಾಮಾನ ಆಧಾರಿತ ಬೆಳೆ ವಿಮೆ, ರೈಲ್ವೆ ಸೇರಿದಂತೆ 2,838 ಕೋಟಿ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರ ನೆರವು ನೀಡಿದೆ ಎಂದರು.
ವಿಪಕ್ಷದವರು ಕೇಂದ್ರ ಸರ್ಕಾರದಿಂದ ಬಿಡಿಗಾಸು ಬಂದಿಲ್ಲ ಎಂದು ಆರೋಪ ಮಾಡುತ್ತಿದ್ದರು. ಕಳೆದ ಐದು ವರ್ಷದಲ್ಲಿ ಐತಿಹಾಸಿಕ ಸಾಧನೆ, ಕ್ರಾಂತಿಕಾರಕ
ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಜಾಗತಿಕ ಸಂಕಷ್ಟದ ನಡುವೆಯೂ ಐತಿಹಾಸಿಕ ಸಾಧನೆ ಕೇಂದ್ರ ಸರ್ಕಾರ ಮಾಡಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಡೂರು ಕ್ಷೇತ್ರದ ಶಾಸಕ ಬೆಳ್ಳಿಪ್ರಕಾಶ್, ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್, ಸಂಸದೆ ಶೋಭಾ ಕರಂದ್ಲಾಜೆ, ಬಿಜೆಪಿ
ಜಿಲ್ಲಾಧ್ಯಕ್ಷ ಕಲ್ಮುರಡಪ್ಪ, ವರಸಿದ್ದಿ ವೇಣುಗೋಪಾಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಕಾಡಾನೆ ದಾಳಿಗೆ ವ್ಯಕ್ತಿ ಸಾ*ವು… ಅರಣ್ಯ ಇಲಾಖೆ ವಿರುದ್ಧ ಆಕ್ರೋಶ
Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.