ಕಾರ್ಕಳದ ಇನ್ನಾದಲ್ಲಿ ಮತ್ತೆ ಕೋವಿಡ್ ಆತಂಕ: ಕ್ವಾರಂಟೈನ್ ಮುಗಿಸಿ ಬಂದ ಪತಿ ಪತ್ನಿಗೆ ಸೋಂಕು
Team Udayavani, Jun 2, 2020, 2:24 PM IST
ಬೆಳ್ಮಣ್: ಉಡುಪಿ ಜಿಲ್ಲೆಯಲ್ಲಿ ಇಂದು ಭಾರಿ ಪ್ರಮಾಣದಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಳ್ಳುತ್ತಿದೆ. ಇಂದು ಕಾರ್ಕಳ ತಾಲೂಕಿನ ಇನ್ನಾ ಗ್ರಾಮಲ್ಲಿ ಮತ್ತರ ಇಬ್ಬರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ.
ಇನ್ನಾ ಗ್ರಾಮದ ದಾಸಬೈಲ್ ನಲ್ಲಿ ಪತಿ ಪತ್ನಿಯರ ವರದಿ ಪಾಸಿಟಿವ್ ಬಂದಿದೆ. ಇವರಿಬ್ಬರೂ ಮಹಾರಾಷ್ಟ್ರದಿಂದ ಬಂದಿದ್ದು, ಪೇತ್ರಿಯಲ್ಲಿ ಕ್ವಾರಂಟೈನ್ ನಲ್ಲಿದ್ದರು. ಬಳಿಕ ಬಿಡುಗಡೆಗೊಂಡು ಉದ್ಯಾವರಕ್ಕೆ ತೆರಳಿದ್ದರು ಎನ್ನಲಾಗಿದೆ. ಸದ್ಯ ಅವರ ಗಂಟಲು ದ್ರವ ವರದಿ ಬಂದಿದ್ದು, ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.
ಕಳೆದ ಎರಡು ದಿನಗಳ ಹಿಂದೆ ಮುಂಬೈನಿಂದ ಬಂದಿದ್ದ ಇನ್ನಾದ ಮಡ್ಮಣ್ ನ ಯುವಕನ ವರದಿಯೂ ಪಾಸಿಟಿವ್ ಆಗಿತ್ತು. ಸದ್ಯ ಆತನೂ ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನ. ಗ್ರಾಮದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದು ಇನ್ನಾ ಗ್ರಾಮದ ಜನತೆಯ ಆತಂಕಕ್ಕೆ ಕಾರಣವಾಗಿದೆ.
ಜಿಲ್ಲೆಯಲ್ಲಿ ಇಂದು ಕೋವಿಡ್ -19 ಮಹಾ ಸ್ಪೋಟವೇ ಸಂಭವಿಸಿದೆ. ಇಂದು ಒಂದೇ 210 ಹೊಸ ಕೋವಿಡ್-19 ಪ್ರಕರಣಗಳು ದೃಢವಾಗಿದೆ. ಸಂಜೆಯ ಆರೋಗ್ಯ ಇಲಾಖೆಯ ವರದಿಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳ ಕಾಣುವ ಸಾಧ್ಯತೆಯಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.