ಎರಡೂವರೆ ತಿಂಗಳು ಹಸುಗೂಸಿಗೆ ಸೋಂಕು
ಪೊಲೀಸ್ ಕಾನ್ಸ್‌ಟೇಬಲ್ ಸೇರಿ ಏಳು ಜನರಿಗೆ ಕೋವಿಡ್-19
Team Udayavani, Jun 2, 2020, 9:27 PM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಆನೆಕೊಂಡದ ಎರಡೂವರೆ ತಿಂಗಳು ಹಸುಗೂಸು, ಪೊಲೀಸ್ ಕಾನ್ಸ್‌ಟೇಬಲ್ ಒಳಗೊಂಡಂತೆ ಏಳು ಜನರಲ್ಲಿ ಮಹಾಮಾರಿ ಕೋವಿಡ್-19 ವಕ್ಕರಿಸಿದೆ.
ರೋಗಿ ನಂಬರ್ 2819ರ ಸಂಪರ್ಕದಿಂದ ಬಾಲಕಿಯ ತಾಯಿಯಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿತ್ತು. ಈಗ ತಾಯಿ(ರೋಗಿ ನಂಬರ್3640) ಸಂಪರ್ಕದಿಂದ ಎರಡೂವರೆ ತಿಂಗಳ ಹೆಣ್ಣು ಮಗವಿಗೂ (3638) ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ.
ದಾವಣಗೆರೆ ಬಡಾವಣಾ ಪೊಲೀಸ್ ಠಾಣೆಯ 40 ವರ್ಷದ ಕಾನ್ಸ್‌ಟೇಬಲ್(ರೋಗಿ ನಂಬರ್ 3637) ಸೋಂಕು ಕಾಣಿಸಿಕೊಂಡಿದೆ. ಹೆಲ್ತ್ ಬುಲೆಟಿನ್ ಮಾಹಿತಿಯಂತೆ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಸೋಂಕು ತಗುಲಿರಬಹುದು ಎನ್ನಲಾಗುತ್ತಿದೆ.
35 ವರ್ಷದ ವಯೋಮಾನದ ವ್ಯಕ್ತಿ(ರೋಗಿ ನಂಬರ್ 3635)ಗೆ ರೋಗಿ ನಂಬರ್ 1808 ಸಂಪರ್ಕದಿಂದ ಸೋಂಕು ಕಾಣಿಸಿಕೊಂಡಿದೆ. ಮಹಾರಾಷ್ಟ್ರದಿಂದ ಹಿಂತಿರುಗಿದ್ದ 32 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ರೋಗಿ ನಂಬರ್ 2560ರ ಸಂಪರ್ಕದಿಂದ 14 ವರ್ಷದ ಬಾಲಕಿಗೆ ಸೋಂಕು ಕಾಣಿಸಿಕೊಂಡಿದೆ. ರೋಗಿ ನಂಬರ್ 623ರ ಸಂಪರ್ಕದಿಂದ 65 ವರ್ಷದ ಮಹಿಳೆ(ರೋಗಿ ನಂಬರ್ 3657) ಕೋವಿಡ್-19 ಕಾಣಿಸಿಕೊಂಡಿದೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 163 ಪ್ರಕರಣಗಳು ವರದಿಯಾಗಿದ್ದು, 121 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.4 ಜನರು ಮರಣ ಹೊಂದಿದ್ದಾರೆ. ಒಟ್ಟು 38 ಸಕ್ರಿಯ ಪ್ರಕರಣಗಳಿವೆ. ನಿನ್ನೆ 276 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಒಟ್ಟು 772 ನೆಗೆಟಿವ್ ಎಂದು ವರದಿ ಬಂದಿದೆ. ಈವರೆಗೆ ಒಟ್ಟು 8,982 ಜನರ ಗಂಟಲುದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, 8261 ನೆಗೆಟಿವ್ ಎಂದು ವರದಿ ಬಂದಿದೆ. ಇನ್ನೂ 558 ಮಾದರಿಗಳ ವರದಿ ಬರಬೇಕಾಗಿದೆ.
16 ಕಂಟೈನ್‌ಮೆಂಟ್ ಝೋನ್‌ಗಳಲ್ಲಿ ಪ್ರತಿ ದಿನ ಜ್ವರ, ಐಎಲ್‌ಐ, ಸಾರಿ ಸಮೀಕ್ಷೆ ನಡೆಸಲಾಗುತ್ತಿದೆ. 3 ದಿನಗಳಿಗೊಮ್ಮೆ ಬಫರ್ ಝೋನ್‌ನಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ. ತೀವ್ರ ಉಸಿರಾಟದ ತೊಂದರೆಗೆ(ಸಾರಿ)ಸಂಬಂಧಿ ಸಿದಂತೆ ಈವರೆಗೆ 335 ಪರೀಕ್ಷೆ ನಡೆಸಲಾಗಿದ್ದು 3 ಪಾಸಿಟಿವ್ ಬಂದಿದ್ದು, 6ರ ಫಲಿತಾಂಶ ನಿರೀಕ್ಷೆಯಲ್ಲಿದೆ. ಶೀತ ಕೆಮ್ಮು ಜ್ವರ (ಐಎಲ್‌ಐ)ಕ್ಕೆ ಸಂಬಂಧಿಸಿದಂತೆ 634 ಪರೀಕ್ಷೆ ನಡೆಸಲಾಗಿದ್ದು, 605 ನೆಗೆಟಿವ್ ಎಂದು ವರದಿ ಬಂದಿದ್ದು, 7 ಪಾಸಿಟಿವ್ ವರದಿ ಬಂದಿದೆ ಮತ್ತು 22 ಜನರ ಪರೀಕ್ಷೆ ಫಲಿತಾಂಶ ನಿರೀಕ್ಷೆಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.