ಕೋವಿಡ್-19 ಬಾಧೆ: ಪಡುಬಿದ್ರಿ ಬಾದೆಟ್ಟು ಪ್ರದೇಶ ಸೀಲ್ಡೌನ್
Team Udayavani, Jun 3, 2020, 5:08 AM IST
ಪಡುಬಿದ್ರಿ: ಮಹಾರಾಷ್ಟ್ರದಿಂದ ಬಂದಿದ್ದ ಪಡುಬಿದ್ರಿಯ ಬಾದೆಟ್ಟು ಪ್ರದೇಶದಲ್ಲಿನ ನಾಲ್ವರ ಕೋವಿಡ್-19 ವರದಿ ಪಾಸಿಟಿವ್ ಆಗಿದ್ದು, ಅವರನ್ನು ಉಡುಪಿಯ ಡಾ| ಟಿಎಂಎ ಪೈ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪಡುಬಿದ್ರಿ ಬಾದೆಟ್ಟು ಪ್ರದೇಶದ ನಾಲ್ಕು ಮನೆಗಳು ಸೀಲ್ಡೌನ್ ಆಗಿವೆ.
ಇವರೆಲ್ಲರೂ ಒಂದೇ ಕುಟುಂಬದವರಾಗಿದ್ದು ಕಾರ್ಕಳದಲ್ಲಿ ಕ್ವಾರಂಟೈನ್ನಲ್ಲಿದ್ದಾಗ ಇವರ ಜತೆಗಿದ್ದ ಮಹಿಳೆಗೆ ಕೋವಿಡ್-19 ಲಕ್ಷಣ ಕಂಡುಬಂದಿದ್ದರೂ ವರದಿ ಬರುವ ಮೊದಲೇ ಮನೆಗೆ ಕಳುಹಿಸಲಾಗಿತ್ತು. ಮಂಗಳವಾರ ಆಸ್ಪತ್ರೆಗೆ ದಾಖಲಾದವರಲ್ಲಿ 38ರ ಹರೆಯದ ಮಹಿಳೆ ಮತ್ತು 46, 16 ಹಾಗೂ 40ರ ವಯೋಮಾನದ ಪುರುಷರು ಇದ್ದಾರೆ. ಇವರ ಜತೆಗಿದ್ದ ಮಹಿಳೆ ಈಗಾಗಲೇ ಕುಂದಾಪುರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಮೂರು ವರ್ಷದ ಮಗುವಿಗೆ ಕೊರೊನಾ ನೆಗೆಟಿವ್ ಆಗಿದ್ದು, ಆ ಮಗು ಮುಂಡ್ಕೂರಿನ ಅಜ್ಜಿ ಮನೆಯಲ್ಲಿದೆ.
ಸ್ಥಳಕ್ಕೆ ಕಾಪು ತಹಶೀಲ್ದಾರ್ ಮಹಮ್ಮದ್ ಐಸಾಕ್, ಪಡುಬಿದ್ರಿ ಪ್ರಾ.ಆ. ಕೇಂದ್ರದ ವೈದ್ಯಾಧಿಕಾರಿ ಡಾ| ಬಿ.ಬಿ. ರಾವ್, ಪಿಎಸ್ಐ ಸುಬ್ಬಣ್ಣ, ಪಡುಬಿದ್ರಿ ಪಿಡಿಒ ಪಂಚಾಕ್ಷರಿ ಸ್ವಾಮಿ, ಹೆಜಮಾಡಿ ಗ್ರಾಮಲೆಕ್ಕಿಗ ಅರುಣ್ ಕುಮಾರ್ ಹಾಗೂ ಪಡುಬಿದ್ರಿ ಗ್ರಾಮಲೆಕ್ಕಿಗ ಶ್ಯಾಮ್ಸುಂದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
IPL : ಸಿಎಸ್ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.