ಕೋವಿಡ್‌ 19 ಮುಂಜಾಗ್ರತೆ ಬಿಗಿಗೊಳಿಸಿ

Team Udayavani, Jun 3, 2020, 5:23 AM IST

bigigolosi

ಚಾಮರಾಜನಗರ: ಕೋವಿಡ್‌ 19 ವೈರಸ್‌ ಹರಡದಂತೆ ತಡೆಯಲು ಸಾರ್ವಜನಿಕ ಜಾಗೃತಿಗಾಗಿ ನಿಯೋಜಿಸಿರುವ ಸೆಕ್ಟರ್‌ ಮ್ಯಾಜಿ ಸ್ಟ್ರೇ ಟ್‌ಗಳು ವಹಿಸಿರುವ ಕಾರ್ಯನಿರ್ವಹಣೆ ಮುಂದುವರಿಯುವಂತೆ ಜಿಲ್ಲಾಧಿಕಾರಿ ಡಾ.  ಎಂ.ಆರ್‌.ರವಿ ಸೂಚಿಸಿದರು. ನಗರದಲ್ಲಿ ಕೋವಿಡ್‌-19 ಮುನ್ನೆಚ್ಚರಿಕೆ ಕ್ರಮಗಳ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿ, 5ನೇ ಹಂತದ ಲಾಕ್‌ಡೌನ್‌ ಈಗಾಗಲೇ ಜಾರಿಯಾಗಿದೆ.

ಜಿಲ್ಲೆ ಹಸಿರು ವಲಯದಲ್ಲಿದೆ. ಪ್ರಸ್ತುತ ಲಾಕ್‌ಡೌನ್‌  ಸಡಿಲಿಕೆಯಾಗಿರುವುದರಿಂದ ನಗರ, ಪಟ್ಟಣ ಪ್ರದೇಶಗಳಲ್ಲಿ ಜನದಟ್ಟಣೆ ಹೆಚ್ಚಾಗುವ ಸಾಧ್ಯತೆಯಿದೆ. ಹಾಗಾಗಿ ಕೋವಿಡ್‌-19 ಜಾಗೃತಿ ಕಾರ್ಯಗಳಿಗಾಗಿ ನಿಯೋಜಿಸಿರುವ ಸೆಕ್ಟರ್‌ ಮ್ಯಾಜಿಸ್ಟ್ರೇಟ್‌ಗಳು ತಮ್ಮ ಕರ್ತವ್ಯ ಮತ್ತಷ್ಟು  ಚುರುಕುಗೊಳಿಸಬೇಕು ಎಂದರು.

ಚೆಕ್‌ಪೋಸ್ಟ್‌ಗಳಲ್ಲಿ ಜಾಗ್ರತೆ: ಜಿಲ್ಲೆಯು ಹಸಿರು ವಲಯವನ್ನಾಗಿ ಉಳಿಸಿಕೊಳ್ಳುವುದು ಸವಾಲಾಗಿದೆ. ಮತ್ತಷ್ಟು ಜಾಗೃತರಾಗಬೇಕು. ಅಂತರ ಜಿಲ್ಲೆ ಚೆಕ್‌ಪೋಸ್ಟ್‌ ಗಳನ್ನು ಈಗಾಗಲೇ ತೆರವುಗೊಳಿಸಲಾಗಿದೆ. ಅಂತರರಾಜ್ಯ ಚೆಕ್‌ ಪೋಸ್ಟ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಚೆಕ್‌  ಪೋಸ್ಟ್‌ಗಳ ಮೂಲಕ ಒಳಬರುವ ಸರಕು ವಾಹನಗಳಿಗೆ ಮಾತ್ರ ಸ್ಯಾನಿಟೈಜೇಷನ್‌ ಮಾಡಬೇಕು ಎಂದರು.

ಸಾಂಸ್ಥಿಕ ಕ್ವಾರಂಟೈನ್‌: ಜಿಲ್ಲೆಗೆ ಕೇರಳ ಹಾಗೂ ತಮಿಳುನಾಡಿಂದ ಬರುವವರನ್ನು ನಿಗದಿಪಡಿಸಿರುವ ಹಾಸ್ಟೆಲ್‌, ಹೋಟೆಲ್‌ಗ‌ಳಂತಹ ಸಾಂಸ್ಥಿಕ ಕ್ವಾರಂಟೈನ್‌ ಕೇಂದ್ರಗಳಲ್ಲಿ ಇರಿಸಲು ಅವಕಾಶ ಕಲ್ಪಿಸಲಾಗಿದೆ. ವಿಶೇಷವಾಗಿ ತಮಿಳುನಾಡಿಂದ ಬರುವವರಿಗೆ ಕಡ್ಡಾಯವಾಗಿ 7  ದಿನಗಳವರೆಗೆ ಕ್ವಾರೆಂಟೈನ್‌ ಮಾಡಿದ ಬಳಿಕ ಮನೆಗೆ ಕಳುಹಿಸಬೇಕು. ಜಿಲ್ಲೆಯ ಜನ ಅಂತಾರಾಜ್ಯ ಸೇರಿದಂತೆ ಹೊರಗಿನಿಂದ ಬಂದವರನ್ನು ಕ್ವಾರಂಟೈನ್‌ ಮಾಡುವಂತೆ ಮಾಹಿತಿ ನೀಡಿ  ಸಹಕರಿಸಬೇಕೆಂದರು. ಸಭೆಯಲ್ಲಿ ಎಸ್ಪಿ ಆನಂದ್‌ ಕುಮಾರ್‌, ಎಸಿ ನಿಖೀತಾ, ಡಿಎಚ್‌ಒ ಡಾ.ಎಂ.ಸಿ. ರವಿ, ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಡೀನ್‌ ಡಾ.ಸಂಜೀವ್‌ ಮತ್ತಿತರ ಅಧಿಕಾರಿಗಳಿದ್ದರು.

ಸಮುದಾಯ ಜಾಗೃತಿ ಅಗತ್ಯ: ಜಿಲ್ಲೆಯ ಜನತೆ ಸಮುದಾಯ ಹೆಚ್ಚು ಜಾಗೃತರಾಗಿದ್ದಾರೆ. ಆದರೂ ಜೂ.8ರ ನಂತರ ದೇವಸ್ಥಾನಗಳು, ಹೋಟೆಲ್‌ಗ‌ಳು ತೆರೆಯುವುದರಿಂದ ಜನಸಂದಣಿ ಅಧಿಕವಾಗಲಿದ್ದು, ಸೆಕ್ಟರ್‌ ಮ್ಯಾಜಿಸ್ಟ್ರೇಟ್‌ಗಳು  ಜನರಿಗೆ ಭೌತಿಕ ಅಂತರ ಕಾಪಾಡಿಕೊಳ್ಳುವಿಕೆ, ಮಾಸ್ಕ್ ಧರಿಸುವುದು ಹಾಗೂ ಸ್ಯಾನಿಟೈಸರ್‌ ಬಳಸುವಂತೆ ತಿಳಿವಳಿಕೆ ನೀಡಬೇಕು. ತಪ್ಪಿದರೆ ದಂಡ ವಿಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ರವಿ ನಿರ್ದೇಶನ ನೀಡಿದರು.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.