ಗ್ರಾಪಂ ನೌಕರರ ಬೇಡಿಕೆ ಈಡೇರಿಸಿ
Team Udayavani, Jun 3, 2020, 5:25 AM IST
ಮೈಸೂರು: ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘ (ಸಿಐಟಿಯುಸಿ)ದಿಂದ ಜಿಲ್ಲಾ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಸಂಘಟನೆ ಅಧ್ಯಕ್ಷ ಬಸವರಾಜು, ರಾಜ್ಯದ 6025 ಗ್ರಾಪಂಗಳಲ್ಲಿ ಕೆಲಸ ನಿರ್ವಹಿಸುತ್ತಿರುವ 6,500 ಸಿಬ್ಬಂದಿಗೆ 900 ಕೋಟಿ ರೂ.ಹಣ ಬೇಕಾಗಿದೆ ಎಂದು ಅಂದಾಜಿಸಲಾಗಿದೆ.
900 ಕೋಟಿ ರೂ. ಹಣದಲ್ಲಿ 518 ಕೋಟಿ ಮಾತ್ರ ಹಣಕಾಸು ಇಲಾಖೆ ಮಂಜೂರು ಮಾಡಿದೆ. ಕಳೆದ 2 ವರ್ಷಗಳಿಂದ ಸಿಬ್ಬಂದಿ ವೇತನ ಬಾಕಿ ಉಳಿದಿದ್ದು, 3 ತಿಂಗಳಿಗೊಮ್ಮೆ ಬಿಡುಗಡೆಯಾದ ಕಂತಿನ ಹಣದಲ್ಲಿ 2 ತಿಂಗಳು ವೇತನಕ್ಕಾಗಿ ಮಾತ್ರ ಹಣ ಸಾಕಾಗುತ್ತದೆ. 2 ವರ್ಷಗಳಿಂದ 8 ತಿಂಗಳು ಹಣ ಬಾಕಿಯಿದೆ. ವೇತನಕ್ಕಾಗಿ 2020-21ನೇ ಸಾಲಿನ ಹಣ ಮಂಜೂರು ಮಾಡಿಸಬೇಕು ಎಂದು ಆಗ್ರಹಿಸಿದರು.
ಎಲ್ಲಾ ಸಿಬ್ಬಂದಿಗೆ ಪಿಂಚಣಿ, ವೈದ್ಯಕೀಯ ವೆಚ್ಚ ಸಿಗುವಂತಾಗಬೇಕು. ಕನಿಷ್ಠ ವೇತನ ಪಡೆಯುವ ಎಲ್ಲರಿಗೂ ಬಿಪಿಎಲ್ ಕಾರ್ಡ್ ಉಳಿಸಿಕೊಳ್ಳಲು ಮಂಜೂರಾತಿ ಮಿತಿ 1.20 ಲಕ್ಷದಿಂದ 2 ಲಕ್ಷಕ್ಕೆ ಹೆಚ್ಚಿಸಬೇಕು. ಅದಕ್ಕಾಗಿ ಆಹಾರ ಇಲಾಖೆಗೆ ಪತ್ರ ಬರೆಯಬೇಕು. ಈಗ ಸದ್ಯಕ್ಕೆ ಸೇವಾ ನಿಯಮಾವಳಿ ಗೆಜೆಟ್ ಪ್ರಕಟಣೆಯಾಗಿದ್ದು ತಿದ್ದುಪಡಿ ಪರಿಶೀಲಿಸಿ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಸಂಘಟನೆಯ ಪ್ರಧಾನ ಕಾರ್ಯದರ್ಶಿ ದಿನೇಶ್, ಖಜಾಂಚಿ ಲೋಕೇಶ್ ಕಿರಿಜಾಜಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.