ಕಟ್ಟಡ ಕಾರ್ಮಿಕರಿಗೆ 619 ಕೋಟಿ ಪ್ಯಾಕೇಜ್
Team Udayavani, Jun 3, 2020, 5:43 AM IST
ಬೆಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿಕಟ್ಟಡ ಕಾರ್ಮಿಕರಿಗೆ 619 ಕೋಟಿ ಪ್ಯಾಕೇಜ್ ಸಂಕಷ್ಟದಲ್ಲಿರುವ ವಿವಿಧ ಶ್ರಮಿಕ ವರ್ಗಗಳಿಗೆ ಮುಖ್ಯಮಂತ್ರಿಯವರು ಘೋಷಿಸಿರುವ ವಿಶೇಷ ಪ್ಯಾಕೇಜ್ ಪ್ರಕಾರ 12.39 ಲಕ್ಷ ಕಟ್ಟಡ ಕಾರ್ಮಿಕರಿಗೆ ತಲಾ 5 ಸಾವಿರ ರೂ. ಪರಿಹಾರ ಹಣವನ್ನು ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಈ ಕುರಿತು ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾ. ಎ.ಎಸ್. ಓಕಾ ಹಾಗೂ ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಈ ವೇಳೆ ರಾಜ್ಯ ಸರ್ಕಾರದ ಪರ ಹೆಚ್ಚುವರಿ ಸರ್ಕಾರಿ ವಕೀಲರಾದ ವಿ.ಜಿ. ಭಾನುಪ್ರಕಾಶ್ ಲಿಖೀತ ಆಕ್ಷೇ ಪಣಾ ಹೇಳಿಕೆಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.
ಅದರಂತೆ, “ಮುಖ್ಯಮಂತ್ರಿಯವರು ಘೋಷಿಸಿದ ಪ್ಯಾಕೇಜ್ ಪ್ರಕಾರ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಂಡಿರುವ 21.80 ಲಕ್ಷ ಕಟ್ಟಡ ಕಾರ್ಮಿಕರ ಪೈಕಿ ಈವರೆಗೆ ಮಂಡಳಿ ಬಳಿ ಬ್ಯಾಂಕ್ ಖಾತೆಗಳ ವಿವರ ಲಭ್ಯವಿದ್ದ 12.39 ಲಕ್ಷ ಕಾರ್ಮಿಕರಿಗೆ ತಲಾ 5 ಸಾವಿರ ರೂ. ಗಳನ್ನು ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ. ಇದರ ಒಟ್ಟು ಮೊತ್ತ 619 ಕೋಟಿ ರೂ. ಆಗಿದೆ.
ಉಳಿದ ಕಾರ್ಮಿಕರ ಬ್ಯಾಂಕ್ ಖಾತೆ ಹಾಗೂ ಇತರೆ ವಿವರಗಳನ್ನು ಪರಿಶೀಲಿಸಲು ರಾಜ್ಯಾದ್ಯಂತ 41 ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ತಿಳಿಸಿದರು. ಅಲ್ಲದೇ, ಕಟ್ಟಡ ಕಾರ್ಮಿಕರಿಗೆ ಮಾಸ್ಕ್, ಸ್ಯಾನಿಟೈಸರ್, ಸಾಬೂನು ಪೂರೈಸಲು 41 ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ತಲಾ 10 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಈವರೆಗೆ ಕಟ್ಟಡ ಕಾರ್ಮಿಕರಿಗೆ 78.21 ಲಕ್ಷ ತಯಾರಿಸಿದ ಆಹಾರ ಕಿಟ್, 81 ಸಾವಿರ ಒಣ ಆಹಾರ ಪದಾರ್ಥಗಳ ಕಿಟ್ ಗಳನ್ನು ವಿತರಿಸಲಾಗಿದೆ. ರಾಜ್ಯಾದ್ಯಂತ ಅದರ ವಿತರಣೆ ಪ್ರಗತಿಯಲ್ಲಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಈ ವೇಳೆ ಅರ್ಜಿದಾರರ ಪರ ವಕೀಲ ಎಸ್.ಎಸ್. ರವಿಶಂಕರ್ ವಾದ ಮಂಡಿಸಿ, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಟ್ಟಡ ಕಾರ್ಮಿಕರನ್ನು ನೋಂದಾಯಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ಸುಪ್ರೀಂಕೋರ್ಟ್ ನಿರ್ದೇಶನಗಳನ್ನು ಉಲ್ಲಂ ಸಲಾಗಿದೆ. ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಲಾಗಿಲ್ಲ. ಬ್ಯಾಂಕ್ ಖಾತೆ ಇಲ್ಲದೇ ಕಾರ್ಮಿಕರನ್ನು ನೋಂದಾಯಿಸಿಕೊಳ್ಳಲಾಗಿದೆ ಇದು ನಿಯಮ ಬಾಹಿರ ಎಂದು ಆರೋಪಿಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಸರ್ಕಾರ ಹೇಳಿರುವ ಪ್ರಕಾರ 21.80 ಲಕ್ಷ ಕಾರ್ಮಿಕರ ಪೈಕಿ 12.39 ಲಕ್ಷ ಕಾರ್ಮಿಕರಿಗಷ್ಟೇ ಪರಿಹಾರ ತಲುಪಿದೆ. ಹಾಗಾದರೆ, ಉಳಿದ ಕಾರ್ಮಿಕರಿಗೆ ಪರಿಹಾರ ಯಾವಾಗ ನೀಡಲಾಗುತ್ತದೆ? ಬ್ಯಾಂಕ್ ಖಾತೆ ಇಲ್ಲದ ಕಾರ್ಮಿಕರನ್ನು ನೋಂದಾಯಿಸಿ ಕೊಂಡಿದ್ದು ಹೇಗೆ? ಮಾನದಂಡಗಳ ವಿವರಣೆ ನೀಡುವಂತೆ ಸೂಚಿದ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.