ಕೋವಿಡ್ 19 ತಡೆಗಟ್ಟಲು ಸಂಘಟಿತ ಹೋರಾಟ ಅಗತ್ಯ
Team Udayavani, Jun 3, 2020, 6:53 AM IST
ಹಾಸನ: ಕೋವಿಡ್ 19 ತಡೆಗಟ್ಟುವ ಹಿನ್ನೆಲೆಯಲ್ಲಿ ಎಲ್ಲ ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ , ಟಾಸ್ಕ್ ಫೋರ್ಸ್ ಸಮಿತಿ, ರಾಪಿಡ್ ರೆಸ್ಪಾನ್ಸ್ ಟೀಮ್ ಹಾಗೂ ಆಶಾ ಕಾರ್ಯಕರ್ತರು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಸಂಘಟಿತವಾಗಿ ಕಾರ್ಯನಿರ್ವಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಹಾಸನದ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ಸಂಬಂಧಿಸಿದಂತೆ ಹಾಕಿಕೊಂಡಿರುವ ಯೋಜನೆಗಳ ಬಗ್ಗೆ ಪರಿಶೀಲಿಸಿ ಮಾತನಾಡಿದ ಸಚಿವರು, ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಹೊರ ಸಂಪನ್ಮೂಲ ವ್ಯಕ್ತಿಗಳು, ಡಿ ಗ್ರೂಪ್ ಸಿಬ್ಬಂದಿ, ಹೌಸ್ ಕೀಪಿಂಗ್ ಹಾಗೂ ಸೆಕ್ಯೂರಿಟಿ ಸಿಬ್ಬಂದಿ ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿ ಜಾರಿ ಮಾಡಿ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ 19 ತಡೆಗಟ್ಟಲು ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಹೆಚ್ಚಿನ ಜಾಗೃತಿ ಹಾಗೂ ಕಾಳಜಿಯಿಂದ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಗೂ ವೈದ್ಯಕೀಯ ಕಾಲೇಜು ಯು.ಜಿ. ಹಾಗೂ ಪಿ.ಜಿ. ವಿದ್ಯಾರ್ಥಿಗಳ ಹಾಸ್ಟೆಲ್ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಎಂಜಿನಿಯರ್ಗಳಿಗೆ ಅವರು ನಿರ್ದೇಶಿಸಿದರು.
ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ, ಉಪಭಾಗಾಧಿಕಾರಿ ಡಾ.ನವೀನ್ ಭಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಹಿಮ್ಸ್ ನಿರ್ದೇಶಕ ಡಾ. ರವಿಕುಮಾರ್, ಜಿಲ್ಲಾ ಶಸOಉಚಿಕಿತ್ಸಕ ಡಾ. ಕೃಷ್ಣಮೂರ್ತಿ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.