ಬೀಳ್ಕೊಡುಗೆ ಸಮಾರಂಭದಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದ ಎ.ಎಸ್.ಐ. ಸಾವು
Team Udayavani, Jun 2, 2020, 9:00 AM IST
ಕೋಟ: ನಿವೃತ್ತಿಯ ಬೀಳ್ಕೊಡುಗೆ ಸಮಾರಂಭ ಸಂದರ್ಭದಲ್ಲೇ ಕುಸಿದು ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದ ಕೋಟ ಪೊಲೀಸ್ ಠಾಣೆ ಎ.ಎಸ್.ಐ. ಬೈಂದೂರಿನ ನಿವಾಸಿ ಆನಂದ್ವೆಂಕಟ (60) ಅವರನ್ನು ಮೇ 31ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಜೂ. 2ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಮೇ 31ರಂದು ಇವರಿಗೆ ಕೋಟ ಪೊಲೀಸ್ ಠಾಣೆಯಲ್ಲಿ ಸಹೋದ್ಯೋಗಿಗಳು ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ಈ ಸಂದರ್ಭ ಸಮ್ಮಾನ ಸ್ವೀಕರಿಸಿ ಊಟ ಮಾಡುತ್ತಿದ್ದಾಗ ಒಮ್ಮೆಲೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದರು. ತತ್ಕ್ಷಣ ಕೋಟ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಮೆದುಳಿನಲ್ಲಿ ವಿಪರೀತ ರಕ್ತಸ್ರಾವವಾದ ಕಾರಣ ಪರಿಸ್ಥಿತಿ ಗಂಭೀರವಾಗಿತ್ತು. ಇದೀಗ ಮೂರು ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಠಾಣೆಯಲ್ಲಿ ಅಂತಿಮ ನಮನ
ಮೃತ ಶರೀರವನ್ನು ಕೋಟ ಪೊಲೀಸ್ ಠಾಣೆಯಲ್ಲಿ ಅಂತಿಮ ದರ್ಶನಕ್ಕಾಗಿ ಇರಿಸಲಾಗಿತ್ತು. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ ಹಾಗೂ ಕೋಟ ಠಾಣಾಧಿಕಾರಿ ರಾಜಶೇಖರ್ ಮಂದಲಿ ಮತ್ತಿತರರು ಅಂತಿಮ ನಮನ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ
Udupi: ವಿಸಿಲ್ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್ ನಿರ್ವಹಣೆ!
Padubidri: ನಿಧಾನವಾಗಿ ಚಲಿಸಿ, ಹೆದ್ದಾರಿ ಕಾಮಗಾರಿ ನಡೆಯುತ್ತಿದೆ!
Karkala: ನಕ್ಸಲ್ ನಾಯಕ ವಿಕ್ರಂ ಗೌಡ ಹೆಬ್ರಿಯ ಕಾಡಿನಲ್ಲಿ ಎನ್ ಕೌಂಟರ್ ಗೆ ಬಲಿ
MUST WATCH
ಹೊಸ ಸೇರ್ಪಡೆ
Kasaragod ಅಪರಾಧ ವಾರ್ತೆ; ಆನೆಯ ತುಳಿತಕ್ಕೆ ಮಾವುತ ಸಹಿತ ಇಬ್ಬರ ಸಾವು
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Kasaragod: ವಂದೇ ಭಾರತ್ಗೆ ಕಲ್ಲೆಸೆತ, ಹಳಿಯಲ್ಲಿ ಕಲ್ಲಿರಿಸಿದ ಇಬ್ಬರ ಬಂಧನ
Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.