ವಿದ್ಯುತ್‌ ಕ್ಷೇತ್ರ ಖಾಸಗೀಕರಣ ಯತ್ನಕ್ಕೆ ಸಿಪಿಐಎಂ ಖಂಡನೆ

Team Udayavani, Jun 3, 2020, 3:50 PM IST

ವಿದ್ಯುತ್‌ ಕ್ಷೇತ್ರ ಖಾಸಗೀಕರಣ ಯತ್ನಕ್ಕೆ ಸಿಪಿಐಎಂ ಖಂಡನೆ

ಗಜೇಂದ್ರಗಡ: ಕೇಂದ್ರ ಸರ್ಕಾರ ಸಾರ್ವಜನಿಕ ವಿದ್ಯುತ್‌ ಕ್ಷೇತ್ರವನ್ನು ಖಾಸಗೀಕರಿಸಲು, ವಿದ್ಯುತ್ಛಕ್ತಿ ತಿದ್ದುಪಡಿ ಮಸೂದೆ-2020ನ್ನು ದೇಶಾದ್ಯಾಂತ ಜಾರಿಗೆ ತರುವ ತೀವ್ರ ಪ್ರಯತ್ನದಲ್ಲಿರುವುದನ್ನು ಭಾರತ ಕಮ್ಯುನಿಸ್ಟ್‌ ಪಕ್ಷ (ಮಾರ್ಕ್ಸ್ವಾದಿ) ತೀವ್ರವಾಗಿ ಖಂಡಿಸುತ್ತದೆ ಎಂದು ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಎಂ.ಎಸ್‌.ಹಡಪದತ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿದ್ಯುತ್‌ ಕ್ಷೇತ್ರ ಸಾಮಾಜಿಕ,ಆರ್ಥಿಕ, ಅಭಿವೃದ್ಧಿಯ ಮಹತ್ವದ ಒಂದು ಸೇವೆ ಎಂಬುದು ಇದುವರೆಗಿನ ನಿಲುವಾಗಿತ್ತು. ಅದರಿಂದ ದೂರ ಸರಿದು, ಅದನ್ನು ಮಾರುಕಟ್ಟೆ ಪ್ರೇರಿತ ಲಾಭದ ಸರಕನ್ನಾಗಿ ಪರಿವರ್ತಿಸುವ ಕ್ರಮ ಅಪಾಯಕಾರಿಯಾಗಿದೆ. ವಿದ್ಯುತ್‌ ಮಸೂದೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದಲ್ಲಿ ರಾಜ್ಯದ ವಿದ್ಯುತ್‌ ಉತ್ಪಾದನೆ, ಸರಬರಾಜು ಹಾಗೂ ವಿತರಣೆಯ ಕಂಪನಿಗಳು ಹಾಗೂ ಅವುಗಳ ಲಕ್ಷಾಂತರ ಕೋಟಿ ಆಸ್ತಿಗಳು ಕಾರ್ಪೋರೇಟ್‌ ಕಂಪನಿಗಳ ಕೈ ವಶವಾಗಲಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಖಾಸಗಿ ಕಂಪನಿಗಳ ವ್ಯವಹಾರ ರಾಜ್ಯದ ಎಲ್ಲ ಗ್ರಾಹಕರ ಬಹುದೊಡ್ಡ ಲೂಟಿಗೆ ಕಾರಣವಾಗಲಿದೆ. ಹೀಗಾಗಿ, ಇದರಿಂದ ರಾಜ್ಯದ ಶೇ 90ಕ್ಕೂ ಅಧಿಕ ಜನತೆ ತೀವ್ರ ಸಂಕಷ್ಟಕ್ಕೆ ಒಳಗಾಗಲಿದ್ದಾರೆ. ರಾಜ್ಯದ ಒಟ್ಟು ಆಂತರಿಕ ಉತ್ಪಾದನೆ ಗಹನವಾಗಿ ಕುಸಿಯಲಿದೆ. ಇದರಿಂದ ಸಂಕಷ್ಟದಲ್ಲಿರುವ ರಾಜ್ಯಕ್ಕೆ ಮತ್ತಷ್ಟು ಪೆಟ್ಟು ಬೀಳಲಿದೆ. ರಾಜ್ಯದ ಅಭಿವೃದ್ಧಿಗೆ ಸಾರ್ವಜನಿಕ ರಂಗದ ಈ ವಿದ್ಯುತ್‌ ವಲಯದ ಕೊಡುಗೆ ಅಪಾರವಾಗಿದೆ.

ಆದ್ದರಿಂದ, ಕೃಷಿ ಹಾಗೂ ಕೈಗಾರಿಕಾ ರಂಗದ ಬೆಳವಣಿಗೆ ದೃಷ್ಟಿಯಿಂದ, ಜನವಿರೋಧಿ ಮಸೂದೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಬಾರದು. ಜೊತೆಗೆ ಕೇಂದ್ರ ಸರ್ಕಾರ ಕಾರ್ಪೋರೇಟ್‌ ಕಂಪನಿಗಳ ಪರವಾದ ಮಸೂದೆಯನ್ನು ಕೈ ಬಿಟ್ಟು ಬಡವ, ಕೃಷಿ ಕೂಲಿಕಾರರ ಪರವಾದ ನೀತಿಗಳನ್ನು ಜಾರಿಗೆ ತರಲು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Gadag; ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.