![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 3, 2020, 5:05 PM IST
ಸಾಂದರ್ಭಿಕ ಚಿತ್ರ
ಚಿಂಚೋಳಿ: ತಾಲೂಕಿನಲ್ಲಿ ಪ್ರಸಕ್ತ ಏಪ್ರಿಲ್-ಮೇ ತಿಂಗಳಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಹಲವಾರು ಕಾಮಗಾರಿಗಳು ನಡೆಯುತ್ತಿದ್ದು, ಶೇ.98.86 ಸಾಧನೆ ಮಾಡಿ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಶಾಸಕ ಡಾ|ಅವಿನಾಶ ಜಾಧವ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನಿಂದ ಬೇರೆ ರಾಜ್ಯಗಳಿಗೆ ಉದ್ಯೋಗಕ್ಕಾಗಿ ಗುಳೆ ಹೋದ ಕೂಲಿ ಕಾರ್ಮಿಕರಿಗೆ ತಮ್ಮ ಸ್ವಗ್ರಾಮದಲ್ಲಿ ಕೆಲಸ ಮಾಡಿ ಜೀವನ ಸಾಗಿಸುವುದಕ್ಕೆ ವರದಾನವಾಗಿದೆ. ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ 1,56,431 ಮಾನವ ದಿನಗಳನ್ನು ಸೃಷ್ಟಿಸಿ ಇದುವರೆಗೆ ಒಟ್ಟು 3.93 ಕೋಟಿ ರೂ. ಖರ್ಚು ಮಾಡಲಾಗಿದೆ. ವಲಸೆ ಹೋದ ಕಾರ್ಮಿಕರಿಗೆ ಹೊಸದಾಗಿ ಉದ್ಯೋಗ ಕಾರ್ಡ್‌ಗಳನ್ನು 4500 ನೀಡಿ ದಾಖಲೆ ಮಾಡಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯ ರಾಜ್ಯ ಆಯುಕ್ತರು ಮತ್ತು ಕಲಬುರಗಿ ಜಿಪಂ ಸಿಇಒ ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದರು.
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಒಟ್ಟು 90,425 ಹೆಕ್ಟೇರ್ ಬಿತ್ತನೆ ಗುರಿ ಇದೆ. ರೈತರಿಗೆ ಬಿತ್ತನೆ ಬೀಜ ಪೂರೈಸಲಾಗುತ್ತಿದೆ ಬಿತ್ತನೆ ಬೀಜಗಳ ಕೊರತೆಯಿಲ್ಲ ಎಂದರು. ತಾಲೂಕಿನಲ್ಲಿ ಹೊಸದಾಗಿ ರಸ್ತೆ ಡಾಂಬರೀಕರಣ, ಕುಡಿಯುವ ನೀರು ಪೂರೈಕೆ ಯೋಜನೆ ಅಭಿವೃದ್ಧಿಪಡಿಸಲಾಗಿದೆ. ರೈತರಿಗೋಸ್ಕರ ತೊಗರಿ ಖರೀದಿ ಕೇಂದ್ರ ಹೆಚ್ಚು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
ತಾಲೂಕಿನಲ್ಲಿ ಯಾರು ಭಿಕ್ಷಾಟನೆ ಮಾಡಿ ಬದುಕುವಂತಹ ಪರಿಸ್ಥಿತಿ ಇಲ್ಲ ಕುಂಚಾವರಂ ಗಡಿಭಾಗದ ಲಿಂಗಾನಗರ ತಾಂಡಾದಲ್ಲಿ ಶಾಲಾ ಬಾಲಕನೊಬ್ಬನು ಕುಟುಂಬ ನಿರ್ವಹಣೆಗಾಗಿ ಭಿಕ್ಷಾಟನೆಯಲ್ಲಿ ತೊಡಗಿದ್ದಾನೆ ಎಂಬುದು ಸತ್ಯಕ್ಕೆ ದೂರವಾಗಿದೆ. ಬಡ ಕುಟುಂಬಕ್ಕೆ ತಾಲೂಕಾಡಳಿತ ವತಿಯಿಂದ ಬೇಕಾಗಿವ ಎಲ್ಲ ಸೌಲಭ್ಯ ಕೊಡಿಸಲಾಗಿದೆ. ಬಿಇಒ ತಾಂಡಾಕ್ಕೆ ಭೇಟಿ ನೀಡಿ ಶಾಲಾ ಬಾಲಕ ಭಿಕ್ಷಾಟನೆಯಲ್ಲಿ ಮಾಡುತ್ತಿಲ್ಲವೆಂದು ವರದಿ ನೀಡಿದ್ದಾರೆ ಎಂದರು. ತಾಪಂ ಅಧಿಕಾರಿ ಅನಿಲಕುಮಾರ ರಾಠೊಡ, ಸಂಜೀವಕುಮಾರ ಚವ್ಹಾಣ, ರಾಮಚಂದ್ರ ಜಾಧವ್, ಸಂತೋಷ ಗಡಂತಿ, ಶ್ರೀಮಂತ ಕಟ್ಟಿಮನಿ ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.