ಮಹಾ: ನಿಸರ್ಗ ನಿಟ್ಟುಸಿರು; ಮೂವರ ಸಾವು
ಮುಂಬಯಿ ಸೇರಿ ಹಲವು ಜಿಲ್ಲೆಗಳಲ್ಲಿ ಹಾನಿ
Team Udayavani, Jun 4, 2020, 6:00 AM IST
ಹೊಸದಿಲ್ಲಿ: “ಅಂಫಾನ್’ಚಂಡಮಾರುತದ ರೀತಿಯಲ್ಲೇ ಅಬ್ಬರಿಸುವ ಆತಂಕ ಹುಟ್ಟಿಸಿದ್ದ “ನಿಸರ್ಗ’ ಚಂಡಮಾರುತ ಮುಂಬಯಿಗರಿಗೆ ಕೊಂಚ ಸಮಾಧಾನ ತಂದಿದೆ.
ಮುಂಬಯಿಯಿಂದ ಸುಮಾರು 94 ಕಿ.ಮೀ. ದೂರದ ಅಲಿಭಾಗ್ ( ರಾಯಗಢ)ನಲ್ಲಿ ಮಧ್ಯಾಹ್ನ 12.30ರ ವೇಳೆಗೆ ಗಂಟೆಗೆ 110 ಕಿ.ಮೀ. ವೇಗದಲ್ಲಿ ಬಂದು ಅಪ್ಪಳಿಸಿದೆ. ಆದರೆ ಅಪರಾಹ್ನ 2.30ರ ವೇಳೆಗೆ ಚಂಡಮಾರುತ ಪ್ರಭಾವ ಇಳಿಯಿತು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೊದಲೇ ಕೋವಿಡ್-19 ಭೀತಿಯಲ್ಲಿದ್ದ ಮುಂಬಯಿಗೆ “ನಿಸರ್ಗ’ಭಾರೀ ಭೀತಿ ಸೃಷ್ಟಿಸಿತ್ತು. ಬುಧವ ರದ ಚಂಡಮಾರುತ ಭಾರೀ ಮಳೆ ಮತ್ತು ಗಾಳಿಗೆ ಸಾಕ್ಷಿಯಾ ಯಿತು.ಪುಣೆಯಲ್ಲಿ ಇಬ್ಬರು,ರಾಯಭಾಗ್‌ನಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಗುಜರಾತ್‌ನಲ್ಲೂ ಹೆಚ್ಚಿನ ಪ್ರಮಾಣದ ಹಾನಿಯಾಗಿಲ್ಲ.
ಧರೆಗುರುಳಿದ ಮರ,ವಿದ್ಯುತ್ ಕಂಬ
ರಾಯ್‌ಭಾಗ್ ಭಾಗದಲ್ಲಿ ಸುಮಾರು 100 ಬೃಹತ್ ಗಾತ್ರದ ಮರಗಳು ಧರೆಗುರುಳಿವೆ. ಕೆಲವು ಮರಗಳು,ವಿದ್ಯುತ್ ಕಂಬಗಳು ಮನೆಗಳ ಮೇಲೆ ಬಿದ್ದಿವೆ.ಹಲವು ಕಡೆ ಮೇಲ್ಛಾವಣಿಗಳು ಹಾರಿ ಹೋಗಿವೆ.ಸಹಸ್ರಾರು ಮನೆಗಳ ವಿದ್ಯುತ್ ಸಂಪರ್ಕ ಕಡಿತವಾಗಿದೆ.
ಗಾಳಿಯ ರಭಸಕ್ಕೆ ಮುಂಬಯಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮರಗಳು,ಕಂಬಗಳು ಬಿದ್ದ ಪರಿ ಣಾಮ ವಾಹನಗಳು, ಮನೆಗಳು ಜಖಂಗೊಂಡಿವೆ. ಮುಂಬಯಿಯ ಸಾಂತಾಕ್ರೂಸ್‌ನಲ್ಲಿ ಸಿಮೆಂಟ್ ಇಟ್ಟಿಗೆ ಬಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಂಡಮಾರುತದ ಪ್ರಭಾವದಿಂದ ಮುಂಬಯಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಜೆ 7ರ ವರೆಗೆ ವಿಮಾನ ಟೇಕಾಫ್, ಲ್ಯಾಂಡಿಂಗ್ ಸ್ಥಗಿತಗೊಳಿಸಲಾಗಿತ್ತು. ಬಳಿಕ ವಿಮಾನ ಸಂಚಾರ ಪುನರಾರಂಭಿಸಲಾಯಿತು.
ಮುಂಬಯಿಯ ಬೈಖುಲಾ ಮೃಗಾಲಯದಲ್ಲಿನ ಹುಲಿ, ಚಿರತೆ ಮತ್ತಿತರ ವನ್ಯ ಜೀವಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಮೃಗಾಲಯದ ಸರೀಸೃಪ ಸೇರಿದಂತೆ 300 ಪ್ರಾಣಿಗಳನ್ನು ಹೊಲ್ಡಿಂಗ್ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.
ಲಕ್ಷ ಮಂದಿ ಸ್ಥಳಾಂತರ
ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರ ಕರಾವಳಿ ತೀರದ 40 ಸಾವಿರ ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿತ್ತು. ಇದೇ ರೀತಿ ಗುಜರಾತ್‌ನಲ್ಲಿ 50 ಸಾವಿರ ಮಂದಿ ಹಾಗೂ ಕೇಂದ್ರಾಡಳಿತ ಪ್ರದೇಶ ದಮನ್‌ನಿಂದ 4 ಸಾವಿರ ಮಂದಿಯನ್ನು ಸ್ಥಳಾಂತರ ಮಾಡಲಾಗಿತ್ತು.
ರಕ್ಷಣಾ ಕಾರ್ಯಾಚರಣೆ
ಮುಂಬಯಿ ಸಹಿತ ಹಲವು ಜಿಲ್ಲೆಗಳಲ್ಲಿ ಮರಗಳು, ವಿದ್ಯುತ್ ಕಂಬಗಳು ಬಿದ್ದ ಪರಿಣಾಮ ರಸ್ತೆ ಸಂಪರ್ಕ ಕಡಿತವಾಗಿತ್ತು. ಮಹಾರಾಷ್ಟ್ರದಲ್ಲಿ 21 ಎನ್‌ಡಿಆರ್‌ಎಫ್ ತಂಡಗಳು ಹಾಗೂ ರಾಜ್ಯ ತಂಡಗಳು ಬಿರುಸಿನಿಂದ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ. ಗುಜರಾತ್‌ನಲ್ಲಿ 16 ಎನ್‌ಡಿಆರ್‌ಎಫ್ ತಂಡಗಳು ಪರಿಹಾರ ಕಾರ್ಯದಲ್ಲಿ ನಿರತವಾಗಿವೆ.
ಇಂದೂ ಭಾರೀ ಮಳೆ ಸಾಧ್ಯತೆ
ಚಂಡಮಾರುತದಿಂದ ಮಹಾರಾಷ್ಟ್ರ ಕರಾವಳಿ ಪ್ರದೇಶ, ವಾಣಿಜ್ಯ ನಗರಿ ಮುಂಬಯಿ ಹಾಗೂ ಉಪ ನಗರಗಳು, ಥಾಣೆ, ಪಾಲ^ರ್, ರಾಯಗಢ, ಸಿಂಧುದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಗುರುವಾರ ಕೂಡ ಈ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಅಲ್ಲದೆ ದಕ್ಷಿಣ ಗುಜರಾತ್, ಕರ್ನಾಟಕ, ಕೇರಳ, ಕೊಂಕಣ, ಗೋವಾ, ಮಧ್ಯಪ್ರದೇಶದ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಈ ನಡುವೆ ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲೂ ಗುರುವಾರ ಮಳೆಯಾಗುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.