ಶಿಕ್ಷಣಾಧಿಕಾರಿಯಿಂದ ದಲಿತ ವಿರೋಧಿ ನೀತಿ-ಆರೋಪ

Team Udayavani, Jun 4, 2020, 6:43 AM IST

ಶಿಕ್ಷಣಾಧಿಕಾರಿಯಿಂದ ದಲಿತ ವಿರೋಧಿ ನೀತಿ-ಆರೋಪ

ಬಾಗಲಕೋಟೆ: ಡಿಎಸ್‌ಎಸ್‌ ಸಾಗರ ಬಣದ ಪದಾಧಿಕಾರಿಗಳು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.

ಬಾಗಲಕೋಟೆ: ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತರು ಆಡಳಿತದಲ್ಲಿ ದಲಿತ ವಿರೋಧ ನೀತಿ ಅನುಸರಿಸುತ್ತಿದ್ದು, ಅವರನ್ನೂ ಸೇವೆಯಿಂದ ವಜಾಗೊಳಿಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಸಾಗರ ಬಣ) ಜಿಲ್ಲಾ ಸಮಿತಿ ಒತ್ತಾಯಿಸಿದೆ. ಬುಧವಾರ ಜಿಲ್ಲೆಗೆ ಆಗಮಿಸಿದ್ದ ಶಿಕ್ಷಣ ಸಚಿವ ಸುರೇಶಕುಮಾರ ಅವರಿಗೆ ಮನವಿ ಸಲ್ಲಿಸಿದ ಸಮಿತಿ ಪದಾಧಿಕಾರಿಗಳು, ಅಪರ ಆಯುಕ್ತ ಮೇಜರ್‌ ಸಿದ್ದಲಿಂಗಯ್ಯ ಹಿರೇಮಠ ಅವರ ಕಾರ್ಯವೈಖರಿ ಕುರಿತು ಆಕ್ರೋಶ ವ್ಯಕ್ತಪಡಿಸಿದರು.

ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಮೇಜರ್‌ ಸಿದ್ದಲಿಂಗಯ್ಯ ಹಿರೇಮಠ ದಲಿತ ವಿರೋಧಿ ಧೋರಣೆ ಅತಿಯಾಗಿದ್ದು, ಇಲಾಖೆಯಲ್ಲಿ ಕೆಲಸ ನಿರ್ವಹಿಸುವ
ದಲಿತ ಅಧಿಕಾರಿಗಳು ಜಾತಿ ಕಾರಣಕ್ಕಾಗಿ ಕಿರುಕುಳ ಅನುಭವಿಸುವಂತಾಗಿದೆ. ಇವರ ಅಧಿಕಾರವಧಿಯಲ್ಲಿ ಹಲವಾರು ಜನ ದಲಿತ ಅಧಿಕಾರಿಗಳು ಅಮಾನತಿಗೆ ಒಳಗಾಗಿದ್ದು, ಈಗ ಬೆಳಗಾವಿ ವಿಭಾಗ ನಿರ್ದೇಶಕ ಡಾ| ಬಿ.ಕೆ.ಎಸ್‌. ವರ್ಧನ ಅವರು ತೀವ್ರ ಕಿರುಕುಳ ಅನುಭವಿಸಿ ನೊಂದು ಸಾರ್ವಜನಿಕವಾಗಿ ಬೆಂಬಲ ನಿರೀಕ್ಷಿಸುವಂತಾಗಿದೆ ಎಂದು ಸಮಿತಿ ಜಿಲ್ಲಾ ಸಂಚಾಲಕ ಪರಶುರಾಮ ಕಾಂಬಳೆ ಆರೋಪಿಸಿದರು.

ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳಿಂದಲೆ ಈ ರೀತಿ ಜಾತಿ ದೌರ್ಜನ್ಯ ನಡೆಯುತ್ತಿರುವುದು ಅಮಾನವೀಯ. ಹಲವಾರು ಎಸ್‌ಸಿ-ಎಸ್‌ಟಿ ಮತ್ತು ಅಲ್ಪಸಂಖ್ಯಾತ ಆಡಳಿತ ಮಂಡಳಿಗಳು ಕೂಡ ದೌರ್ಜನ್ಯ ಅನುಭವಿಸುತ್ತಿದ್ದು, ಕೆಲವರಿಗೆ ಅಧಿಕಾರದಿಂದ ಅಮಾನತು ಕೂಡ ಮಾಡಿದ್ದಾರೆ ಎಂದು ತಿಳಿಸಿದರು. ತಕ್ಷಣವೇ ಇವರ ಮೇಲೆ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅವರನ್ನು ಕೆಲಸದಿಂದ ವಜಾಗೊಳಿಸಬೇಕು. ಇಲ್ಲದಿದ್ದರೆ, ದಲಿತ ಪ್ರಗತಿಪರ ಸಂಘಟನೆಗಳು ಸೇರಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ
ನೀಡಿದರು.

ಜಿಲ್ಲಾ ಸಂಘಟನಾ ಸಂಚಾಲಕ ಬಸವರಾಜ ಹಳ್ಳದಮನಿ, ರಮೇಶ ಅನಗವಾಡಿ, ಜಿಲ್ಲಾ ಸಂಚಾಲಕ ಅಲ್ಪಸಂಖ್ಯಾತರ ಘಟಕದ ಕಾಸೀಂಅಲಿ ಗೋಠೆ, ವಿಜಯಪುರ ಜಿಲ್ಲಾ ಸಂಘಟನಾ ಸಂಚಾಲಕ ವೈ.ಸಿ. ಮಯೂರ, ತಾಲೂಕು ಸಂಚಾಲಕ ಪ್ರಕಾಶ ಮ್ಯಾಗೇರಿ, ನಗರ ಸಂಚಾಲಕ ಶಿವಕುಮಾರ ಸಿಂಗೆ ಇದ್ದರು.

ಟಾಪ್ ನ್ಯೂಸ್

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

5

Chikkodi: ಕಾನೂನು ಪದವಿ ಓದುತ್ತಿದ್ದ ಯುವಕ ಆತ್ಮಹ*ತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.