ವೈದ್ಯಕೀಯ ಬಿಲ್ ಪಾವತಿ ಸರ್ಕಾರದ ಕರ್ತವ್ಯ
Team Udayavani, Jun 4, 2020, 7:07 AM IST
ಚಿಕ್ಕಬಳ್ಳಾಪುರ: ಸರ್ಕಾರಿ ನೌಕರರ ವೈದ್ಯಕೀಯ ವೆಚ್ಚ ಬಿಲ್ ಕಳೆದ 4 ವರ್ಷಗಳಿಂದ ನೌಕರರಿಗೆ ಪಾವತಿ ಯಾ ಗದೆ 183 ನೌಕರರಿಗೆ ತೊಂದರೆಯಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರು ಕಳಿಸದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ತಿಳಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಸರ್ಕಾರಿ ನೌಕರರಿಗೆ ವೈದ್ಯಕೀಯ ವೆಚ್ಚ ಬಿಲ್ ವಿತರಣೆ ಕಾರ್ಯ ಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರಿ ನೌಕರರ ವೇತನ ಹಾಗೂ ಇತರೆ ಬಿಲ್‌ಗಳನ್ನು 8 ದಿನ ದೊ ಳಗೆ ಪೂರ್ಣಗೊಳಿಸಲಾಗುತ್ತಿತ್ತು. ಆದರೆ ಈ ವೈದ್ಯಕೀಯ ವೆಚ್ಚ ಬಿಲ್‌ನ್ನು ಕಳೆದ 4 ವರ್ಷದಿಂದ ನೆನ ಗುದಿಗೆ ಬಿದ್ದಿತ್ತು.
ಯಾರೊ ಮಾಡಿರುವ ತಪ್ಪಿಗೆ ಯಾರೋ ಶಿಕ್ಷೆ ಅನುಭವಿಸುವಂತಹ ಸಮಸ್ಯೆ ಎದುರಾಗಿದೆ ಎಂದರು. ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿ, ಮುಂದಿನ ದಿನಗಳಲ್ಲಿ ಆಯಾ ತಾಲೂಕಿನಲ್ಲೇ ಸರ್ಕಾರಿ ನೌಕರರಿಗೆ ವೈದ್ಯಕೀಯ ವೆಚ್ಚ ಬಿಲ್‌ಗಳನ್ನು ನೀಡಲು ಕ್ರಮ ವಹಿಸ ಲಾಗುತ್ತದೆ ಹಾಗೂ ಮುಂದಿನ ದಿನಗಳಲ್ಲಿ ವೈದ್ಯಕೀಯ ಸರ್ಕಾರಿ ನೌಕರರ ವೈದ್ಯಕೀಯ ವೆಚ್ಚ ಬಿಲ್‌ಗಳನ್ನು ವಿಳಂಬ ಆಗದಂತೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
183 ಸರ್ಕಾರಿ ನೌಕರರಿಗೆ ವೈದ್ಯಕೀಯ ವೆಚ್ಚ ಬಿಲ್‌ಗಳನ್ನು ವಿತರಿಸಲಾಯಿತು. ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್, ಸಾರ್ವ ಜನಿಕ ಶಿಕ್ಷಣ ಇಲಾಖೆ ನಿರ್ದೇಶಕ ಎಸ್ ನಾಗೇಶ್, ವೃತ್ತ ನಿರೀಕ್ಷಕ ಸುದರ್ಶನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ, ಪದಾಧಿಕಾರಿಗಳಾದ ಚಿಂತಾಮಣಿ ಚೌಡಪ್ಪ, ಅಶೋಕ್ ಕುಮಾರ್, ರವಣಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.