ಅಂಗನವಾಡಿ ಕಟ್ಟಡ ಕಾಮಗಾರಿ ಶೀಘ್ರ ಮುಗಿಸಿ


Team Udayavani, Jun 4, 2020, 8:03 AM IST

mugisi

ತುಮಕೂರು: ಜಿಲ್ಲೆಯಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ.ರಾಕೇಶ್‌ಕುಮಾರ್‌ ಅವರು ಸೂಚಿಸಿದರು.  ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂ ಗಣದಲ್ಲಿ ಬುಧವಾರ ನಡೆದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿ, ಪಂಚಾಯತ್‌ ರಾಜ್‌ ಇಲಾಖೆಯಡಿಯಲ್ಲಿ ಯಲ್ಲಿ 56 ಗ್ರಾಪಂನ 130 ಹಾಗೂ ನಿರ್ಮಿತಿ ಕೇಂದ್ರದ 26  ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರ ಕಾಮಗಾರಿ ಪೂರ್ಣ ಗೊಳಿಸ ಬೇಕೆಂದು ಜಿಲ್ಲಾಧಿಕಾರಿ ಖಡಕ್‌ ಸೂಚನೆ ನೀಡಿದರು.

ಪೌಷ್ಟಿಕ ಕೈ ತೋಟ ನಿರ್ಮಿಸಿ: ಕಾಪೌಂಡ್‌ ಹೊಂದಿರುವ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕ ಕೈತೋಟವನ್ನು ನಿರ್ಮಿಸುವಂತೆ ತೋಟ ಗಾರಿಕಾ ಇಲಾಖೆಯವರಿಗೆ ಸೂಚಿಸಿ ದರಲ್ಲದೇ ಕೊರೊನಾ ಲಾಕ್‌ಡೌನ್‌ ಹಿನ್ನೆಲೆ ಯಲ್ಲಿ  ಅಂಗನವಾಡಿ ಕೇಂದ್ರಗಳ ವ್ಯಾಪ್ತಿಯಲ್ಲಿ ರುವ ಮಕ್ಕಳು, ಗರ್ಭಿಣಿ, ಬಾಣಂತಿಯರಿಗೆ ಮನೆಗೆ ಆಹಾರ ಪದಾರ್ಥಗಳನ್ನು ನಿಗದಿತ ಸಮಯಕ್ಕೆ ವಿತರಣೆ ಮಾಡುವಂತೆ ಶಿಶೂ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಅಂಗನವಾಡಿ  ಕೇಂದ್ರಗಳಿಗೆ ಗ್ರಾಪಂ, ತಾಪಂ ಅನುದಾನದಲ್ಲಿ ಕಾಪೌಂಡ್‌ ಮತ್ತು ನೀರಿನ ಸೌಲಭ್ಯ ಹಾಗೂ ಅಗತ್ಯವಿರುವ ಮೂಲಭೂತ ಸೌಲಭ್ಯವನ್ನು ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ದೂರು ನೀಡಿ: ವರದಕ್ಷಿಣೆ ನಿಷೇಧ ಕಾಯ್ದೆ ಯಡಿ ದಾಖಲಾಗುವ ಪ್ರಕರಣಗಳಲ್ಲಿ ಮಹಿಳೆಯ ಮೇಲೆ ದೈಹಿಕವಾಗಿ ಕಿರುಕುಳ ನೀಡುತ್ತಿದ್ದರೆ ಅಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್‌ ಠಾಣೆಗೆ ದೂರು ನೀಡಿ,  ಕೌಟುಂಬಿಕ ಕಲಹದಂತಹ ಪ್ರಕರಣಗಳಲ್ಲಿ ದೂರುದಾರರನ್ನು ಕರೆಸಿ ಸಮಾಲೋಚನೆ ನಡೆಸಿ ಇತ್ಯರ್ಥಗೊಳಿಸ ಬೇಕೆಂದು ಸೂಚಿಸಿದರು.

292 ಪ್ರಕರಣಗಳು ಬಾಕಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ  ಎಸ್‌.ನಟರಾಜ್‌ ಮಾತನಾಡಿ, ಸಾಂತ್ವನ ಯೋಜನೆಯಡಿ ಕೌಟುಂಬಿಕ ಕಲಹದಲ್ಲಿ 1049 ಪ್ರಕರಣಗಳು ದಾಖಲಾಗಿದ್ದು, 757 ಪ್ರಕರಣಗಳು  ಇತ್ಯರ್ಥಗೊಂಡಿವೆ. ಇನ್ನೂ 292 ಪ್ರಕರಣಗಳ ವಿಚಾರಣೆ ಬಾಕಿ ಇರುತ್ತವೆ ಎಂದು ಸಭೆಗೆ ಮಾಹಿತಿ ನೀಡಿದರು. ಸಖೀ ಒನ್‌ ಸ್ಟಾಪ್‌ ಸೆಂಟರ್‌ ಯೋಜನೆ ಯಡಿ ಅತ್ಯಾಚಾರ, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಒಂದೇ  ಸೂರಿನಡಿ ಸಮಾಲೋಚನೆ, ವೈದ್ಯಕೀಯ, ಕಾನೂನು ಸಲಹೆ, ಪೊಲೀಸ್‌ ನೆರವನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.

ಸ್ಥೈರ್ಯನಿಧಿ ಯೋಜನೆ ಯಡಿ ಅತ್ಯಾಚಾರ, ದೌರ್ಜನ್ಯ ಹಾಗೂ ಇತರೆ ಪ್ರಕರಣಗಳಿಗೆ ಸಂಬಂಧಿಸಿದಂತೆ  ತುರ್ತು ವೈದ್ಯಕೀಯ ಪರಿಹಾರವಾಗಿ 25 ಸಾವಿರ ರೂ. ನೀಡಲಾಗುತ್ತಿದೆ. ವಿಧವಾಕೋಶಕ್ಕೆ ಸಂಬಂಧ ಪಟ್ಟಂತೆ ಸರ್ವೆ ಮಾಡಿಲಾಗಿದ್ದು, ಜಿಲ್ಲಾ ವ್ಯಾಪ್ತಿಯಲ್ಲಿ 63,640 ವಿಧವೆಯರು ಇರುವ ಬಗ್ಗೆ ಮಾಹಿತಿ ಪಡೆಯಲಾಗಿದೆ ಎಂದು  ಜಿಲ್ಲಾಧಿಕಾರಿ ರಾಕೇಶ್‌ ಕುಮಾರ್‌ ಅವರ ಗಮನಕ್ಕೆ ತಂದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್‌, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ವಾಸಂತಿ ಉಪ್ಪಾರ್‌, ಶಿಶು ಕಲ್ಯಾಣ ಅಭಿವೃದ್ಧಿ ಅಧಿಕಾರಿ ಶ್ರೀಧರ್‌ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ 1049 ಕೌಟುಂಬಿಕ ಕಲಹದ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 757 ಪ್ರಕರಣಳು ಸಾಂತ್ವನ ಯೋಜನೆ ಯಡಿ ಇತ್ಯರ್ಥಗೊಂಡಿದ್ದು, 292 ಪ್ರಕರಣಗಳು ಬಾಕಿ ಉಳಿದಿವೆ. ಜಿಲ್ಲೆಯಲ್ಲಿ ಸ್ಥೈರ್ಯನಿಧಿ ಯೋಜನೆ  ಯಡಿ  ಅತ್ಯಾಚಾರ, ದೌರ್ಜನ್ಯ ಹಾಗೂ ಇತರೆ ಪ್ರಕರಣಗಳಲ್ಲಿ ತುರ್ತು ವೈದ್ಯಕೀಯ ಪರಿಹಾರವಾಗಿ 25 ಸಾವಿರ ರೂ. ನೀಡಲಾಗುತ್ತಿದೆ. ವಿಧವಾಕೋಶಕ್ಕೆ ಸಂಬಂಧಪಟ್ಟಂತೆ ಸರ್ವೆ ಮಾಡಿಲಾಗಿದ್ದು, ಜಿಲ್ಲಾ ವ್ಯಾಪ್ತಿಯಲ್ಲಿ 63640 ವಿಧವೆಯರು ಇರುವ ಬಗ್ಗೆ ಮಾಹಿತಿ ಪಡೆಯಲಾಗಿದೆ.
-ಎಸ್‌.ನಟರಾಜ್‌, ಉಪ ನಿರ್ದೇಶಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Tumakur

Wage Workers: ತುಮಕೂರಿನ ಶುಂಠಿ ಕ್ಯಾಂಪ್‌ನಲ್ಲಿ ಜೀತ ಪದ್ಧತಿ ಜೀವಂತ!

1-kunigal

Kunigal: ಕೌಟುಂಬಿಕ ಕಲಹ; ಗೃಹಣಿ ಆತ್ಮಹತ್ಯೆ

Laxmi-Minister

Reality Check: ʼನಮ್ಮ ಅತ್ತೆ ಹೊಡೆಯುತ್ತಿದ್ದಾರೆ ಸಹಾಯ ಮಾಡುವಿರಾʼ ಎಂದ ಸಚಿವೆ ಲಕ್ಷ್ಮೀ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.