ಅಮೆರಿಕದ ನಗರಗಳಲ್ಲಿ ಈಗ ಯುದ್ಧದ ಛಾಯೆ!
ಪ್ರಮುಖ ನಗರಗಳಲ್ಲಿ ನ್ಯಾಷನಲ್ ಗಾರ್ಡ್‌ಗಳ ಭದ್ರತೆ
Team Udayavani, Jun 4, 2020, 8:27 AM IST
ವಾಷಿಂಗ್ಟನ್‌ನಲ್ಲಿರುವ ಶ್ವೇತಭವನದ ಮುಂಭಾಗದಲ್ಲಿ ಜಾರ್ಜ್ ಫ್ಲಾಯ್ಡ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
ವಾಷಿಂಗ್ಟನ್: ವಿವಿಧ ನಗರಗಳ ಪ್ರಮುಖ ಜಂಕ್ಷನ್‌ಗಳಲ್ಲಿ ಬಂದು ನಿಂತ ಯುದ್ಧ ವಾಹನಗಳು, ರಸ್ತೆಗಳಲ್ಲಿ ಸಾಲಾಗಿ ಸಾಗುವ ರಕ್ಷಣಾ ಸಿಬಂದಿ ಹೊತ್ತ ಟ್ರಕ್‌ಗಳು, ಬೀದಿ ಬೀದಿಗೂ ಬಂದಿಳಿದ ಶಸ್ತ್ರ ಸಜ್ಜಿತ ನ್ಯಾಷನಲ್ ಗಾರ್ಡ್ ಸಿಬ್ಬಂದಿ… ಇದು ಅಮೆರಿಕದ ಹಲವು ನಗರಗಳಲ್ಲಿ ಮಂಗಳವಾರ ಕಂಡು ಬಂದ ದೃಶ್ಯ.
ಜಾರ್ಜ್ ಫ್ಲಾಯ್ಡ ಸಾವಿನ ಬಳಿಕ ಮೇ 25ರಿಂದ ಅಮೆರಿಕದಲ್ಲಿ ಭುಗಿಲೆದ್ದಿರುವ ಹಿಂಸಾತ್ಮಕ ಪ್ರತಿಭಟನೆಯ ಪರಿಣಾಮವಿದು. ಪ್ರತಿಭಟನೆಯನ್ನು ನಿಯಂತ್ರಣಕ್ಕೆ ತರುವಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ ಕೊಟ್ಟ ಬೆನ್ನಲ್ಲೇ ಮಿನ್ನಿಯಾಪೊಲೀಸ್, ಲಾಸ್ ಎಂಜಲೀಸ್ ಮತ್ತಿತರ ನಗರಗಳಲ್ಲಿ ನ್ಯಾಷನಲ್ ಗಾರ್ಡ್ ಸಿಬ್ಬಂದಿ ಮೂಲಕ ವಿಶೇಷ ಭದ್ರತೆ ಒದಗಿಸಲಾಗಿದೆ. ಈ ನಡುವೆ ನ್ಯೂಯಾರ್ಕ್ ನಗರದಲ್ಲಿ ಪ್ರತಿಭಟನಾ ಕಾರರು ಮತ್ತು ಪೊಲೀಸರ ನಡುವಿನ ಸಂಘರ್ಷ ಮುಂದುವರಿದಿದೆ. ಮಂಗಳವಾರ ಸಂಜೆ ಕೂಡ ಸಾವಿರಾರು ಪ್ರತಿಭಟನಾಕಾರರು ಫ್ಲಾಯ್ಡ ಹತ್ಯೆ ಖಂಡಿಸಿ ಬೀದಿಗಿಳಿದರು. ವಿಶೇಷ ಭದ್ರತೆ ನಡುವೆಯೂ ಲಾಸ್ ಎಂಜಲೀಸ್, ಫಿಲಡೆಲ್ಫಿಯಾ, ಅಟ್ಲಾಂಟ ಮತ್ತು ಸೀಟೆಲ್ ನಗರಗಳಲ್ಲಿ ದೊಡ್ಡ ಮಟ್ಟದ ಜಾಥಾ ಮತ್ತು ಪ್ರತಿಭಟನಾ ರ್ಯಾಲಿಗಳು ನಡೆದವು. ಯುಎಸ್ ಕ್ಯಾಪಿಟಲ್ ಕಟ್ಟಡದ ಎದುರು ಸೇರಿದ ಪ್ರತಿಭಟನಾಕಾರರು, ರಾತ್ರಿಯಾದರೂ ಅಲ್ಲಿಂದ ಕದಲಲಿಲ್ಲ. ನ್ಯಾಷನಲ್ ಗಾರ್ಡ್ ಮಾತ್ರವಲ್ಲ ಟ್ರಂಪ್ ಹೇಳಿದಂತೆ ಅಮೆರಿಕದ ಸೇನೆಯನ್ನೇ ಕರೆತಂದರೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಆಡಳಿತಕ್ಕೆ ಸಂದೇಶ ರವಾನಿಸಿದರು.
ಸೇನೆ ನಿಯೋಜನೆ ಇಲ್ಲ: ಪ್ರತಿಭಟನೆ ಶಾಂತವಾಗದ ರಾಜ್ಯಗಳಲ್ಲಿ ಸೇನೆ ನಿಯೋಜಿಸುವುದಾಗಿ ಬೆದರಿಕೆ ಹಾಕಿದ್ದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಒಂದೇ ದಿನದಲ್ಲಿ ತಮ್ಮ ನಿರ್ಧಾರದಿಂದ ಹಿಂದೆ ಸರಿದು ಮƒದು ಧೋರಣೆ ತಳೆದಿದ್ದಾರೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಈ ವಾರ ಲಭ್ಯವಾಗಿರುವ ವರದಿಯಂತೆ ರಾಜ್ಯಗಳು ಪರಿಸ್ಥಿತಿ ತಿಳಿಗೊಳಿಸಲು ಕ್ರಮ ವಹಿಸಿವೆ ಎಂದಿರುವ ಶ್ವೇತ ಭವನದ ಅಧಿಕಾರಿಗಳು, ಹಿಂಸಾತ್ಮಕ ಪ್ರತಿಭಟನೆ ಹತ್ತಿಕ್ಕುವ ಉದ್ದೇಶದಿಂದ ಅಧ್ಯಕ್ಷರು ಖಾರವಾಗಿ ಹೇಳಿಕೆ ನೀಡಿದ್ದರು ಎಂದಿದ್ದಾರೆ.
ಹೀರೋ ಆದ ಭಾರತೀಯ
ಫ್ಲಾಯ್ಡ ಹತ್ಯೆ ಖಂಡಿಸಿ ಪ್ರತಿಭಟಿಸುತ್ತಿದ್ದ 70ಕ್ಕೂ ಅಧಿಕ ಪ್ರತಿಭಟನಾಕಾರರಿಗೆ ತನ್ನ ಮನೆಯಲ್ಲಿ ಆಶ್ರಯ ನೀಡುವ ಮೂಲಕ ಭಾರತ ಮೂಲದ ಅಮೆರಿಕ ಪ್ರಜೆಯೊಬ್ಬರು ಪ್ರತಿಭಟನಕಾರರ ಪಾಲಿಗೆ ಹೀರೋ ಆಗಿ ಹೊರಹೊಮ್ಮಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಂಡು ಬಂದ ಪ್ರತಿಭಟನಾಕಾರರಿಗೆ ರಾಹುಲ್ ದುಬೆ ಎಂಬವರು ತಮ್ಮ ಮನೆಯಲ್ಲಿ ಆಶ್ರಯ ನೀಡಿದ್ದರು ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.