ಚಿದಂಬರಂ, ಕಾರ್ತಿ ಚಿದಂಬರಂ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ
Team Udayavani, Jun 4, 2020, 9:22 AM IST
ಹೊಸದಿಲ್ಲಿ: ಐಎನ್ಎಕ್ಸ್ ಮೀಡಿಯಾ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ), ಕೇಂದ್ರದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ವಿರುದ್ಧ ಇ-ಚಾರ್ಜ್ ಶೀಟ್ ದಾಖಲಿಸಿದೆ. ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ನ್ಯಾಯಾಲಯಗಳಿನ್ನೂ ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸದ ಕಾರಣ ಸದ್ಯಕ್ಕೆ ಇ-ಚಾರ್ಜ್ಶೀಟ್ ಸಲ್ಲಿಸಲಾಗಿದೆ. ನ್ಯಾಯಾಲಯಗಳ ಕಲಾಪಗಳು ಎಂದಿನಂತೆ ಶುರುವಾದಾಗ ಮುದ್ರಿತ ರೂಪದ ಚಾರ್ಜ್ಶೀಟ್ ಸಲ್ಲಿಸಲಾಗುತ್ತದೆ ಎಂದು ಇ.ಡಿ. ತಿಳಿಸಿದೆ.
ಏನಿದೆ ಚಾರ್ಜ್ಶೀಟ್ನಲ್ಲಿ?: 2007ರಲ್ಲಿ ಕೇಂದ್ರದಲ್ಲಿ ವಿತ್ತ ಸಚಿವರಾಗಿದ್ದಾಗ ಚಿದಂಬರಂ, ಆಗಿನ ಉದ್ಯಮಿಯಾಗಿದ್ದ ಪೀಟರ್ ಮುಖರ್ಜಿ, ಅವರ ಪತ್ನಿ ಇಂದ್ರಾಣಿ ಮುಖರ್ಜಿ ಮಾಲಕತ್ವದ ಐಎನ್ಎಕ್ಸ್ ಮೀಡಿಯಾಕ್ಕೆ ನಿಯಮಗಳನ್ನು ಮೀರಿ ವಿದೇಶಿ ಬಂಡವಾಳ ನಿರಾಳವಾಗಿ ಹರಿದುಬರುವಂತೆ ಮಾಡಿದ್ದರು. ಇದಕ್ಕಾಗಿ, ಕಾರ್ತಿ ಚಿದಂಬರಂಗೆ ಲಂಚದ ರೂಪದಲ್ಲಿ ಅಪಾರ ಹಣ ಸಂದಾಯವಾಗಿದೆ. ಈ ಹಣದಿಂದ ಅವರು, ಭಾರತ, ಯು.ಕೆ. ಹಾಗೂ ಸ್ಪೇನ್ನಲ್ಲಿ ಆಸ್ತಿಯನ್ನು ಖರೀದಿಸಿದ್ದಾರೆ. ಇಂದ್ರಾಣಿ ಮುಖರ್ಜಿ ಅವರ ಹೇಳಿಕೆಯ ಆಧಾರದಲ್ಲಿ ಅವರ ವಿರುದ್ಧ ಆರೋಪ ಪಟ್ಟಿ ದಾಖಲಿಸಲಾಗುತ್ತಿದೆ ಎಂದು ಇ- ಚಾರ್ಜ್ಶೀಟ್ನಲ್ಲಿ ವಿವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.