ಸೀಲ್‌ಡೌನ್ ಪ್ರದೇಶದಲ್ಲಿ ಜಾಗೃತಿ
Team Udayavani, Jun 5, 2020, 6:41 AM IST
ತಿಪಟೂರು: ನಗರದ ಚಾಮುಂಡೇಶ್ವರಿ ಬಡಾವಣೆಯಲ್ಲಿ ಮಹಾರಾಷ್ಟ್ರದಿಂದ ಬಂದ ವ್ಯಕ್ತಿಗೆ ಕೋವಿಡ್ 19 ಪಾಸಿಟಿವ್ ಬಂದ ಹಿನ್ನೆಲೆ ಬಡಾವಣೆಯ 8ರಿಂದ 12ನೇ ಕ್ರಾಸ್‌ವರೆಗೆ ಕಂಟೈನ್‌ಮೆಂಟ್ ಝೋನ್ ಮಾಡಲಾಗಿದೆ ಎಂದು ನಗರ ಠಾಣೆ ಇನ್ಸ್‌ಪೆಕ್ಟರ್ ನವೀನ್ ಹೇಳಿದರು.
ಚಾಮುಂಡೇಶ್ವರಿ ಬಡಾವಣೆಯ ನಿವಾಸಿಗಳಲ್ಲಿ ಕೋವಿಡ್ 19 ಬಗ್ಗೆ ಜಾಗೃತಿ ಮೂಡಿಸಿದ ಅವರು, ಪ್ರದೇಶವನ್ನು ಸಂಪೂರ್ಣವಾಗಿ ಸೀಲ್‌ಡೌನ್ ಮಾಡ ಲಾಗಿದ್ದು, ಮನೆಗಳಿಂದ ಯಾವುದೇ ಕಾರಣಕ್ಕೂ ಯಾರೂ ಹೊರಬರಬೇಡಿ, ಅಗತ್ಯ ವಸ್ತು, ಆರೋಗ್ಯ ಸೇವೆಗೆ ಇಬ್ಬರು ವಾಲೆಂಟರಿಗಳನ್ನು ನೇಮಿಸಲಾಗಿದೆ ಎಂದು ಹೇಳಿದರು.
ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. 6 ಅಡಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ವಯಸ್ಸಾ ದವರು, ಚಿಕ್ಕ ಮಕ್ಕಳ ಬಗ್ಗೆ ಆರೋಗ್ಯ ಕಾಳಜಿ ವಹಿಸಬೇಕು. ಆರೋಗ್ಯ ಕಾರ್ಯ ಕರ್ತರು ತಪಾಸಣೆಗೆ ಬಂದಾಗ ಪ್ರತಿಯೊ ಬ್ಬರು ಸಹಕರಿಸಬೇಕು. ಈ ಬಡಾವಣೆ ಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ತಿಳಿಸಿದರು.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಜಾರಿಯಲ್ಲಿರುವ ಈ ಪ್ರದೇಶ ದಲ್ಲಿ ಮೇಲ್ಕಂಡ ಸೂಚನೆ ಉಲ್ಲಂಘಿ ಸಿದಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಕಣ್ಗಾವಲಿಗಾಗಿ ಡ್ರೋಣ್ ಕ್ಯಾಮೆರಾ ಮೂಲಕ ಸಾರ್ವಜನಿಕರಿಗೆ ಸಂದೇಶ ಹಾಗೂ ಪ್ರದೇಶದ ಚಟುವಟಿಕೆಗಳ ಮೇಲೆ ನಿಗಾ ಇಡಲಾಗಿದೆ ಎಂದು ಹೇಳಿದರು. ನಗರಠಾಣೆ ಸಬ್‌ಇನ್ಸ್‌ಪೆಕ್ಟರ್ ದಾಕ್ಷಾಯಣಿ ಹಾಗೂ ಸಿಬ್ಬಂದಿ ಕೋವಿಡ್ 19 ಬಗ್ಗೆ ಬಡಾವಣೆ ನಿವಾಸಿಗಳಿಗೆ ಜಾಗೃತಿ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.