ವಲಸೆ ಕಾರ್ಮಿಕರಿಗೆ ಪ್ಯಾಕೇಜ್ ಘೋಷಿಸಿ
Team Udayavani, Jun 5, 2020, 7:14 AM IST
ಚಿಕ್ಕಬಳ್ಳಾಪುರ: ವಲಸೆ ಕಾರ್ಮಿಕರಿಗೆ ಕೇಂದ್ರ, ರಾಜ್ಯ ಸರ್ಕಾರಗಳು ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಿ ಲಾಕ್ಡೌನ್ ಸಂದರ್ಭದಲ್ಲಿ ಅಪಘಾತ, ಹಸಿವು ಹಾಗೂ ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕರಿಗೆ ಗರಿಷ್ಠ ಪರಿಹಾರ ನೀಡಬೇಕೆಂದು ಆಗ್ರಹಿಸಿ ಗುರುವಾರ ನಗರದ ಉಪ ವಿಭಾಗಾಧಿಕಾರಿಗಳ ಕಚೇರಿ ಮುಂದೆ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಧರಣಿ ನಡೆಸಿದರು.
ಉಪ ವಿಭಾಗಾಧಿಕಾರಿಗಳ ಕಚೇರಿ ಮುಂದೆ ಜಿಲ್ಲೆಯ ಕೃಷಿ ಕೂಲಿಕಾರರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನಾ ಧರಣಿ ನಡೆಸಿದ ಕೂಲಿಕಾರರು, ಲಾಕ್ಡೌನ್ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಖಾತ್ರಿ ಯೋಜನೆಯಡಿ 200 ದಿನ ಕೂಲಿ ಕೊಡಬೇಕು, ಯೋಜನೆಗೆ ಕೇಂದ್ರ ಸರ್ಕಾರ ಇನ್ನಷ್ಟು ಪರಿಹಾರ ನೀಡಬೇಕೆಂದರು.
ಆಹಾರ ಪದಾರ್ಥ ನೀಡಲಿ: ಕಾರ್ಮಿಕರ ರಕ್ಷಣೆ ಮಾಡುವ ಕಾನೂನುಗಳನ್ನು ಮರಳಿ ಜಾರಿಗೆ ತರಬೇಕು, ಗ್ರಾಮೀಣ ಭಾಗದಲ್ಲಿ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಬೇಕು, ಪ್ರತಿ ಕೂಲಿ ಕುಟುಂಬಕ್ಕೆ ಮುಂದಿನ 6 ತಿಂಗಳಿಗೆ ತಲಾ 10 ಕೆ.ಜಿ.ಅಕ್ಕಿ, ಗೋಧಿ ಮತ್ತಿತರ ಆಹಾರ ಪದಾರ್ಥಗಳನ್ನು ಉಚಿತವಾಗಿ ನೀಡಬೇಕೆಂದು ಕೇಂದ್ರ, ರಾಜ್ಯ ಸರ್ಕಾರಗಳನ್ನು ಆಗ್ರಹಿಸಿ ಉಪ ವಿಭಾಗಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ, ಪದಾಧಿಕಾರಿಗಳಾದ ಕೆ.ಆರ್. ಮಂಜುಳಾ, ಬಸವರಾಜ್, ದೊಡ್ಡನರಸಿಂಹಪ್ಪ, ಶಾಂತಮ್ಮ, ವೆಂಕಟಮ್ಮ, ಮುನಿಯಪ್ಪ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್ಟ್ಯಾಕ್ಸಿ-ಏನಿದರ ವಿಶೇಷ
T20 series: ಪಾಕಿಸ್ಥಾನಕ್ಕೆ ವೈಟ್ವಾಶ್ ಟಿ20: ಆಸ್ಟ್ರೇಲಿಯ 3-0 ಜಯಭೇರಿ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.