ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನೋಟಿಸ್
Team Udayavani, Jun 5, 2020, 7:29 AM IST
ಹಾಸನ: ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಆಸ್ತಿಯ ಬಗ್ಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಸಂಬಂಧ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಜ್ವಲ್ ರೇವಣ್ಣ ಅವರು ಗೆಲವು ಸಾಧಿಸಿದ್ದರು. ಆವರು ಚುನಾವಣೆಯ ನಾಮಪತ್ರ ಸಲ್ಲಿಸುವಾಗ ಆಸ್ತಿಯ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾರೆ. ದ್ದರಿಂದ ಅವರನ್ನು ಸಂಸದ ಸ್ಥಾನದಿಂದ ವಜಾ ಮಾಡಬೇಕು ಎಂದು ಅವರ ಪ್ರತಿಸ್ಪರ್ಧಿಯಾಗಿದ್ದ ಬಿಜೆಪಿ ಅಭ್ಯರ್ಥಿ ಎ.ಮಂಜು ಹೈ ಕೋರ್ಟ್ಗೆ ಹೋಗಿದ್ದರು. ಆದರೆ ತಾಂತ್ರಿಕ ಕಾರಣ ನೀಡಿ ಎ.ಮಂಜು ಅವರ ದೂರನ್ನು ಹೈ ಕೋರ್ಟ್ ವಜಾ ಮಾಡಿತ್ತು. ಆದರೆ ಅವರು ಸುಪ್ರೀಂ ಕೋರ್ಟಿಗೂ ಮೇಲ್ಮನವಿ ಸಲ್ಲಿಸಿದ್ದರು.
ಈ ನಡುವೆ ಹಾಸನದ ವಕೀಲ ದೇವರಾಜೇಗೌಡ ಅವರು ಪ್ರಜ್ವಲ್ ರೇವಣ್ಣ ಅವರ ವಿರುದ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿ ಈ ಸಂಬಂಧ ಪ್ರತಿಕ್ರಿಯಿಸಲು ಪ್ರಜ್ವಲ್ ರೇವಣ್ಣ ಅವರಿಗೆ ಬುಧವಾರ ನೋಟೀಸ್ ಜಾರಿ ಮಾಡಿದೆ. ಎ. ಮಂಜು ಅವರು ಸಲ್ಲಿಸಿದ್ದ ಅರ್ಜಿಯನ್ನೂ ಸೇರ್ಪಡೆ ಮಾಡಿಕೊಳ್ಳು ವಂತೆ ದೇವರಾಜೇಗೌಡ ಅವರು ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.