ಜಿಲ್ಲಾಡಳಿತದಿಂದ ಕೃಷಿ ಭೂಮಿ ವಶ: ರೈತರ ವಿರೋಧ

Team Udayavani, Jun 5, 2020, 7:31 AM IST

jilladhalita

ಚನ್ನರಾಯಪಟ್ಟಣ: ತಾಲೂಕಿನ ಬಾಗೂರು ಹೋಬಳಿ ಬಿ. ಹೊನ್ನೇನಹಳ್ಳಿ ಗ್ರಾಮದ ರೈತ ಬೋರೇಗೌಡರ ಸ್ವಾಧೀನದಲ್ಲಿದ್ದ ಕೃಷಿ ಭೂಮಿಗೆ ಪ್ರವೇಶ ಮಾಡ ಬಾರದೆಂದು ಜಿಲ್ಲಾಡಳಿತ ಹೊರಡಿಸಿರುವ ಆದೇಶ ವನ್ನು ಪುನರ್‌  ಪರಿಶೀಲಿಸಬೇಕು ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಗುರವಾರ ತಾಲೂಕು ಕಚೇರಿ ಮುಂದೆ ಧರಣಿ ನಡೆಸಿ ತಹಶೀಲ್ದಾರ್‌ ಜೆ.ಬಿ.ಮಾರುತಿ  ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು,  ಹಲವು ವರ್ಷದಿಂದ ಬಿ.ಹೊನ್ನೇನಹಳ್ಳಿ ಗ್ರಾಮದ ಸರ್ವೆ ನಂಬರ್‌ 25, 30 ಹಾಗೂ 31ರಲ್ಲಿರುವ ಕೃಷಿ ಭೂಮಿ ಯನ್ನು ರೈತ ಬೋರೇಗೌಡ ಉಳುಮೆ ಮಾಡಿಕೊಂಡು ತಮ್ಮ ಬದಕು ಕಟ್ಟಿಕೊಂಡಿದ್ದರು. 1980ರಲ್ಲಿ ಉಳುವವನೇ  ಭೂಮಿಯ ಒಡೆಯ ಕಾಯ್ದೆಯಂತೆ ಕೃಷಿ ಭೂಮಿ ಮಂಜೂರಾತಿ ಪಡೆದು, ತೆಂಗಿನ ಮರ ಬೆಳೆಸಿದ್ದು ಕೊಳವೆಬಾವಿ ಕೊರೆಸಿದ್ದಾರೆ.

ಕೆಲ ದಿನಗಳಿಂದ ಸಾರ್ವಜನಿಕ ಉದ್ದೇಶಕ್ಕಾಗಿ ಇದೇ ಕೃಷಿ ಭೂಮಿಯನ್ನು ಜಿಲ್ಲಾಡಳಿತ ವಶಕ್ಕೆ ಪಡೆದಿದೆ ಎಂದರು.  ಏಕಾ ಏಕಿ  ಜಿಲ್ಲಾಡಳಿತ ಈ ರೀತಿ ಕೃಷಿ ಭೂಮಿ ತಮ್ಮ ವಶಕ್ಕೆ ಪಡೆದಿರುವ ಬಗ್ಗೆ ಕರ್ನಾಟಕ ಆಡಳಿತಾತ್ಮಕ ನ್ಯಾಯಾಲಯಕ್ಕೆ ಮೊರೆ ಹೋಗಿದ್ದು, ನ್ಯಾಯಾಲಯ ರೈತರಪರ ಅದೇಶ ನೀಡಿತ್ತು. ಅನುಭವನದ ಆಧಾರದ ಮೇಲೆ ಕೃಷಿ ಭೂಮಿ ಮಂಜೂರಾತಿ ಮಾಡಬೇಕೆಂದು ಉಚ್ಚನ್ಯಾಯಾಲಯದಲ್ಲಿ  ಮೊಕದ್ದಮೆ ಹೂಡಲಾಗಿದೆ. ಆದರೆ ಗ್ರಾಮದ ಕೆಲವರು ಈ ಜಮೀನು ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಬೇಕೆಂದು  ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು.

ನ್ಯಾಯಾಲಯದಲ್ಲಿ ಮೊಕದ್ದಮೆ ಇರುವಾಗ ಜಿಲ್ಲಾಡಳಿತ  ಮಧ್ಯಪ್ರವೇಶ ಮಾಡಿ ರೈತನಿಗೆ ದ್ರೋಹ ಮಾಡುತ್ತಿದೆ. ಜಿಲ್ಲಾಡಳಿತದ ಆದೇಶವನ್ನು ಪುನರ್‌ ಪರಿಶೀಲಿಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಧರಣಿ ನಿರತ ರೈತ  ಸಂಘದ ಸದಸ್ಯರು ಆಗ್ರಹಿಸಿದರು. ರೈತ ಸಂಘದ ಮುಖಂಡರಾದ ದೊಡ್ಡೇರಿ ಶ್ರೀಕಂಠ, ಶಿವೇಗೌಡ, ಬೋರೇಗೌಡ, ಲಕ್ಷ್ಮೇಗೌಡ ಮೊದಲಾದವರು ಧರಣಿ ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.