ಜಿಯೋದ ಶೇ 1.85 ಪಾಲನ್ನು 9,000 ಕೋಟಿಗೆ ಖರೀದಿಸಿದ ಅಬುಧಾಬಿ ಮೂಲದ ಮುಬದಲಾ ಸಂಸ್ಥೆ
Team Udayavani, Jun 5, 2020, 9:09 AM IST
ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ತನ್ನ ಜಿಯೋ ಪ್ಲಾಟ್ ಫಾರ್ಮ್‌ಗಳಿಗಾಗಿ ಹೂಡಿಕೆಗಳನ್ನು ಸಂಗ್ರಹಿಸುವುದನ್ನು ಮುಂದುವರೆಸಿದೆ. ಇದೀಗ ಅಬುಧಾಬಿ ಮೂಲದ ಮುಬದಲಾ ಸಂಸ್ಥೆ ಜಿಯೋದ ಶೇ 1.85 ರಷ್ಟು ಪಾಲನ್ನು 9,093 ಕೋಟಿ ರೂ. ಗಳಿಗೆ ಖರೀದಿಸಿದೆ ಎಂದು ಆರ್ ಐ ಎಲ್ ತಿಳಿಸಿದೆ.
ಗಮನಾರ್ಹ ಸಂಗತಿಯೆಂದರೇ ಕಳೆದ 6 ವಾರಗಳಲ್ಲಿ ಜಿಯೋದಲ್ಲಿ ಹೂಡಿಕೆ ಮಾಡಿದ 6 ಸಂಸ್ಥೆ ಇದಾಗಿದೆ. ಜಿಯೋದಲ್ಲಿ ಮುಬದಲಾ ಹೂಡಿಕೆ ಮಾಡುವ ಮೂಲಕ ಮಾರ್ಚ್ 2021 ರ ವೇಳೆಗೆ ಆರ್‌ಐಎಲ್ ಅನ್ನು ನಿವ್ವಳ ಸಾಲ ಮುಕ್ತ ಕಂಪನಿಯನ್ನಾಗಿ ಮಾಡುವ ಮತ್ತೊಂದು ದಿಟ್ಟ ಹೆಜ್ಜೆಯಾಗಿದೆ ಎಂದೇ ವಿಶ್ಲೇಷಿಲಾಗಿದೆ.
ಮುಖೇಶ್ ಅಂಬಾನಿಯ ಒಡೆತನದ ಜಿಯೋ ಸಂಸ್ಥೆಯ ಮೇಲೆ ಸತತ ಜಾಗತಿಕ ಹೂಡಿಕೆಯ ಒಟ್ಟು ಮೌಲ್ಯ 87,655.35 ಕೋಟಿ ರೂ. ಎಂದು ತಿಳಿದುಬಂದಿದೆ. ಪ್ರಥಮಬಾರಿಗೆ ಫೇಸ್ಬುಕ್ ಜಿಯೋದ ಷೇರನ್ನು ಶೇ.9.99 ಪಾಲನ್ನು ಖರೀದಿಸಿತ್ತು.
ಇನ್ನು, ಖಾಸಗಿ ಹೂಡಿಕೆ ನಿರ್ವಹಣಾ ಸಂಸ್ಥೆಯಾ ಸಿಲ್ವರ್ ಲೇಕ್ ಜಿಯೋದಲ್ಲಿ ಶೇ. 1 ಪಾಲನ್ನು 5,655.75 ಕೋಟಿ ರೂ.ಗೆ ಖರೀದಿಸಿತ್ತು. ಜಿಯೋದ ಶೇ.2.3 ಪಾಲನ್ನು 11,367 ಕೋಟಿ ರೂಪಾಯಿಗೆ ವಿಸ್ತಾ ಸಂಸ್ಥೆ ಪಡೆದುಕೊಂಡಿತ್ತು. ನಂತರ ಜಿಯೋ ಸಂಸ್ಥೆ ಶೇ. 1.34 ಪಾಲನ್ನು 6598.38 ಕೋಟಿ ರೂಪಾಯಿಗೆ ಜನರಲ್ ಅಟ್ಲಾಂಟಿಕ್ ಹಾಗೂ ಶೇ. 2.32 ಪಾಲನ್ನು 11,367 ಕೋಟಿ ರೂಪಾಯಿಗೆ ಕೆಕೆಆರ್ ಖರಿದಿಸಿತ್ತು.
ಈ ಬಗ್ಗೆ ಮಾತನಾಡಿದ ಮುಖೇಶ್ ಅಂಬಾನಿ, ಅಬುಧಾಬಿ ಸಂಸ್ಥೆ ಜಿಯೋ ಮೇಲೆ ಹೂಡಿಕೆ ಮಾಡುತ್ತಿರುವ ವಿಚಾರ ಖುಷಿ ತಂದಿದೆ. ಡಿಜಿಟಲ್ ಇಂಡಿಯ ಯೋಜನೆ ಸಂಪೂರ್ಣವಾಗಿ ಜಾರಿಗೆ ಬರಲು ಈ ಹೂಡಿಕೆ ಸಹಕಾರಿಯಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Saira Banu: ಎ.ಆರ್.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ
Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ
Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್ ಇದ್ರು ಸಿಕ್ಕಿದ್ದು ಕೇವಲ 155 ಮತ!!
UV Fusion: ನಿಸ್ವಾರ್ಥ ಜೀವ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.