ಡೆಂಘೀ ನಿಯಂತ್ರಣಕ್ಕೆ ವರ್ಷ ಪೂರ್ತಿ ಸರ್ವೇ

ಡೆಂಘೀ ರೋಗ ನಿಯಂತ್ರಣಾ ದಿನಾಚರಣೆ-ಕಾರ್ಯಾಗಾರ

Team Udayavani, Jun 5, 2020, 11:43 AM IST

5-June-06

ಸಾಂದರ್ಭಿಕ ಚಿತ್ರ

ವಿಜಯಪುರ: ಕೋವಿಡ್‌-19 ಸಾಂಕ್ರಾಮಿಕ ರೋಗ ನಿಯಂತ್ರಣದ ಜೊತೆಗೆ ಜಿಲ್ಲೆಯಲ್ಲಿ ಡೆಂಘೀ ರೋಗ ನಿಗ್ರಹಕ್ಕಾಗಿ ಆರೋಗ್ಯ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ|
ಜೇಬುನ್ನಿಸಾಬೇಗಂ ಬೀಳಗಿ ಹೇಳಿದರು.

ಗುರುವಾರ ನಗರದ ಡಿಎಚ್‌ಒ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ಡೆಂಘೀ ರೋಗ ನಿಯಂತ್ರಣಾ ದಿನಾಚರಣೆ ನಿಮಿತ್ತ ನಡೆದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಡೆಂಘೀ ರೋಗ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿವುದು ಅತ್ಯಗತ್ಯ. ಇದಕ್ಕಾಗಿ ಆಶಾ ಕಾರ್ಯಕರ್ತೆಯರಿಂದ ಮನೆ-ಮನೆಗೆ ತೆರಳಿ ಲಾರ್ವಾ ಸಾಂದ್ರತೆ ಸಮೀಕ್ಷೆ ನಡೆಸುವ ಜೊತೆಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತದೆ ಎಂದರು.

ಕೋವಿಡ್‌-19 ಸಮೀಕ್ಷೆಯಂತೆ ಡೆಂಘೀ ರೋಗದ ಕುರಿತು ವರ್ಷದ 12 ತಿಂಗಳು ಆಶಾ ಕಾರ್ಯಕರ್ತೆಯರು, ಕಿರಿಯ ಆರೋಗ್ಯ ಸಹಾಯಕಿಯರು ಮನೆ ಮನೆಗೆ ತೆರಳಿ ಸಮಗ್ರ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಡೆಂಘೀ ರೋಗದ ಲಕ್ಷಣ, ನಿಯಂತ್ರಣ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆಯ ಭಿತ್ತಿಪತ್ರ ಹಾಗೂ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ ಎಂದರು.

ಹಿಂದಿನ ದಾಖಲೆ ಆಧಾರದಲ್ಲಿ ಡೆಂಘೀ ರೋಗ ಹೆಚ್ಚಿರುವ ಹಾಗೂ ಕೊಳಚೆ ಪ್ರದೇಶದಲ್ಲಿ ಆದ್ಯತೆ ನೀಡಿ ಸಮೀಕ್ಷೆ ನಡೆಸಲಾಗುತ್ತಿದೆ. ಜೊತೆಗೆ ಸೊಳ್ಳೆ ಪರದೆ ವಿತರಣೆ, ಧೂಮಿಕರಣ ಮಾಡಲಾಗುತ್ತಿದೆ. ಸೊಳ್ಳೆ ಸಂತಾನೊತ್ಪತ್ತಿ ನಿರ್ಮೂಲೆನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಜಿಲ್ಲೆಯಲ್ಲಿ ಜನೇವರಿ ತಿಂಗಳಿಂದ ಮೇ ತಿಂಗಳವರೆಗೆ 310 ರಕ್ತ ಸಂಗ್ರಹಿಸಿದ್ದು, 102 ಜನರಲ್ಲಿ ಡೆಂಘೀ ರೋಗ ದೃಢಪಟ್ಟಿದೆ. 2019ರಲ್ಲಿ 271 ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷಿಸಿದ್ದು 77 ಜನರಿಗೆ ಡೆಂಘೀ ರೋಗ ದೃಢಪಟ್ಟಿದೆ ಎಂದು ವಿವರಿಸಿದರು.

ರೋಗಕಾರಕ ಸೊಳ್ಳೆಗಳು ಹುಟ್ಟಿದಂತೆ ಸ್ಥಳೀಯ ಆಡಳಿತಗಳು ಒಳಚರಂಡಿ ಹಾಗೂ ಕೊಳಚೆ ಪ್ರದೇಶ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಮಹಾನಗರ ಪಾಲಿಕೆ ವತಿಯಿಂದ ಸೊಳ್ಳೆ ನಾಶಕ್ಕೆ ವಾರಕ್ಕೊಮ್ಮೆ ಸೂಕ್ತ ಕೀಟನಾಶಕ ದ್ರಾವಣ ಸಿಂಪಡನೆ ಹಾಗೂ ಧೂಮಿಕರಣ ಕೈಗೊಳ್ಳಲಾಗುತ್ತಿದೆ. ಸೊಳ್ಳೆ ರಹಿತ ಓವರ್‌ ಹೆಡ್‌ ಟ್ಯಾಂಕ್‌, ಅಂಡರ್‌ಗ್ರೌಂಡ್‌ ಟ್ಯಾಂಕ್‌ ನಿರ್ಮಿಸಲು ಸೂಚಿಸಲಾಗಿದೆ. ನೀರು ಸರಬರಾಜಿಗೆ ಮುನ್ನ ಸೂಕ್ತ ಕ್ಲೋರಿನೇಷನ್‌ ಮಾಡಲಾಗುತ್ತಿದೆ. ಜೊತೆಗೆ ನೀರು ಸರಬರಾಜು ಮಾಡುವ ಪೈಪುಗಳಲ್ಲಿ ಸೋರಿಕೆ ತಡೆಗಟ್ಟಲಾಗುತ್ತಿದೆ ಎಂದು ವಿವರಿಸಿದರು.

ಡೆಂಘೀಕಾರಕ ಲಾರ್ವಾಹಾರಿ ಶಪ್ಪಿ ಮತ್ತು ಗ್ಯಾಂಬ್ಯುಸಿಯಾ ಮೀನುಗಳನು ಬೆಳೆಸಿ ಜಿಲ್ಲೆಯಾದ್ಯಂತ ಅಗತ್ಯ ಇರುವಲ್ಲಿ ನೀಡಲಾಗುತ್ತಿದೆ. ಕರೆ, ಬಾವಿ, ಕೊಳ್ಳಗಳಲ್ಲಿ ಜಿಲ್ಲಾವಾರು ಜಿಐಎಸ್‌ ನಕ್ಷೆ ತಯಾರಿಕೆ, ಮಾಹಿತಿ ನೀಡಿಕೆ ಕುರಿತು ಆರೋಗ್ಯ ಇಲಾಖೆಗೆ ಕ್ರಮ ಕೈಗೊಂಡಿದೆ ಎಂದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜೇಶ್ವರಿ ಗೋಲಗೇರಿ, ಜಿಲ್ಲಾ ಕೀಟಶಾಸ್ತ್ರಜ್ಞ ಡಾ| ರಿಯಾಝ್ ದೇವಳ್ಳಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.