ಹಿರೇಬಾಗೇವಾಡಿ ಸೀಲ್‌ಡೌನ್‌ ತೆರವು


Team Udayavani, Jun 6, 2020, 5:25 AM IST

ಹಿರೇಬಾಗೇವಾಡಿ ಸೀಲ್‌ಡೌನ್‌ ತೆರವು

ಹಿರೇಬಾಗೇವಾಡಿ: ಗ್ರಾಮದಲ್ಲಿ ಅತಿ ಹೆಚ್ಚು ಪ್ರಕರಣಗಳಾಗಿದ್ದರೂ ಎಲ್ಲ ಜನರು ಸಹಕಾರ ನೀಡಿದ್ದಾರೆ. ಸರ್ಕಾರದ ಆದೇಶವನ್ನು ಪಾಲನೆ ಮಾಡಿದ್ದರಿಂದ ಕೋವಿಡ್ ಸೋಂಕಿನಿಂದ ಈ ಗ್ರಾಮವು ಮುಕ್ತವಾಗಿದೆ. ಶುಕ್ರವಾರ ಮಧ್ಯ ರಾತ್ರಿಯಿಂದ ಸೀಲ್‌ ಡೌನ್‌ ಮುಕ್ತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಎಸ್‌.ಬಿ.ಬೊಮ್ಮನಹಳ್ಳಿ ತಿಳಿಸಿದರು.

ಶುಕ್ರವಾರ ಗ್ರಾಮದಲ್ಲಿ ಪೊಲೀಸ್‌ ಠಾಣೆ ಆವರಣದಲ್ಲಿ ನಡೆದ ಫುಡ ಕಿಟ್‌ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗ್ರಾಮವನ್ನು ಸೀಲ್‌ ಡೌನ್‌ ಮಾಡಿದ್ದರಿಂದ ಗ್ರಾಮಸ್ಥರು  ಎರಡು ತಿಂಗಳ ಕಾಲ ಬಹಳ ತೊಂದರೆ ಅನುಭವಿಸಿದ್ದಾರೆ. ಹಾಗೂ ಸರ್ಕಾರದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸೋಂಕು ಮುಕ್ತ ಗ್ರಾಮವನ್ನಾಗಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಸರ್ಕಾರದಿಂದ ಕೊಡುವ ಫುಡ್‌ ಕಿಟ್‌ಗಳನ್ನು ಸಾಂಕೇತಿಕವಾಗಿ ವಿತರಿಸ ಲಾಯಿತು. ಇನ್ನುಳಿದವುಗಳನ್ನು ಮನೆ ಮನೆಗೆ ಹಂಚುವ ವ್ಯವಸ್ಥೆ ಮಾಡಲಾಗಿದೆ ಎಂದರು. ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರ ಮತ್ತು ಎಲ್ಲ ಜನಪ್ರತಿನಿ ಧಿಗಳು ನಿಮ್ಮೊಡನೆ ಇದ್ದೇವೆ. ಸಾಮಾಜಿಕ ಅಂತರ ಕಾಯ್ದುಕೊಂಡು ಜನರು ತಮ್ಮ ಚಟುವಟಿಕೆಗಳನ್ನು ಪ್ರಾರಂಭಿಸಬೇಕು ಎಂದರು.

ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಮಾತನಾಡಿ, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿಯೇ ಹಿರೇಬಾಗೇವಾಡಿ ಬಹುದೊಡ್ಡ ಗ್ರಾಮವಾಗಿದ್ದು, ಸುದೀರ್ಘ‌ 60 ದಿನಗಳ ಕಾಲ ಸೀಲ್‌ ಡೌನ್‌ ಕಷ್ಟದ ಸಮಯದಲ್ಲೂ ಇಲ್ಲಿನ ಜನರು ಸ್ವಾಭಿಮಾನ ಮತ್ತು ತಾಳ್ಮೆಯಿಂದ ಸರಕಾರದ ನಿಯಮ ಮತ್ತು ಕಾನೂನುಗಳನ್ನು ಪಾಲಿಸಿ ಕೋವಿಡ್ ಮುಕ್ತ ಮಾಡಲು ಸಹಕರಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.

ನಮ್ಮ ಮನವಿಗೆ ಸ್ಪಂದಿಸಿ ಗ್ರಾಮದ ಕುಟುಂಬಗಳಿಗೆ ಸರ್ಕಾರದಿಂದ ಫುಡ್‌ ಕಿಟ್‌ ಪೂರೈಸಿದ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದರು. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ ಕುಮಠಳ್ಳಿ, ಕೋವಿಡ್ ನೋಡಲ್‌ ಅಧಿಕಾರಿ ರಾಜೇಂದ್ರ ಚೋಳನ್‌,ಜಿಲ್ಲಾ ಪಂಚಾಯಿತಿ ಸಿಇಒ ಡಾ| ಕೆ.ವಿ ರಾಜೇಂದ್ರ, ಪೋಲಿಸ್‌ ಆಯುಕ್ತ ಬಿ.ಎಸ್‌. ಲೊಕೇಶಕುಮಾರ, ಡಿಸಿಪಿ ಸೀಮಾ ಲಾಟ್ಕರ, ಗ್ರಾ.ಪಂ ಸದಸ್ಯರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.