ಮೈಕ್ರೋ ಫೈನಾನ್ಸ್ ವಿರುದ್ಧ ಕ್ರಮಕ್ಕೆ ಒತ್ತಾಯ
Team Udayavani, Jun 6, 2020, 5:46 AM IST
ಕೊಪ್ಪಳ: ಜಗತ್ತಿಗೆ ವ್ಯಾಪಿಸಿರುವ ಮಹಾಮಾರಿ ಕೋವಿಡ್ ವೈರಸ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವುದಕ್ಕಾಗಿ ಭಾರತದಲ್ಲೂ ನಿರಂತರ ಹೋರಾಟ ನಡೆಸಲಾಗುತ್ತಿದೆ. ಲಾಕ್‌ಡೌನ್‌ನಲ್ಲಿ ಹಲವು ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಇದರಲ್ಲಿ ಮೈಕ್ರೋ ಫೈನಾನ್ಸ್‌ಗಳು ಸಾಲ ವಸೂಲಾತಿಗೆ ಜನರಿಗೆ ಕಿರುಕುಳ ನೀಡುತ್ತಿದ್ದು, ಕೂಡಲೇ ಅವುಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಪ್ಪಳ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಎರಡು ತಿಂಗಳ ಕಾಲ ಲಾಕ್‌ಡೌನ್ ಜಾರಿಯಾಗಿದ್ದರಿಂದ ಜನತೆ ಕೆಲಸ ಇಲ್ಲದೆ ತುಂಬ ತೊಂದರೆ ಅನುಭವಿಸಿದ್ದಾರೆ. ಕೇಂದ್ರ ಸರ್ಕಾರ ಆಗಸ್ಟ್ 2020ರ ವರೆಗೂ ಸಾಲ ವಸೂಲಾತಿ ಮುಂದೂಡಬೇಕೆಂದು ತಿಳಿಸಿದ್ದರೂ ಸ್ವ-ಸಹಾಯ ಗುಂಪುಗಳು ಹಾಗೂ ಮೈಕ್ರೋ ಫೈನಾನ್ಸ್ ಏಜೆನ್ಸಿಗಳು ಸಾಲ ವಸೂಲಾತಿಗಾಗಿ ಜನಸಾಮಾನ್ಯರಿಗೆ ಕಿರುಕುಳ ನೀಡುತ್ತಿವೆ. ಕೂಡಲೇ ಅಂತಹ ಫೈನಾನ್ಸ್ಗಳ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.
ಈ ವೇಳೆ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಪಾಷಾ ಕಾಟನ್, ಮಾನ್ವಿ ಪಾಷಾ, ಸಲೀಂ ಅಳವಂಡಿ, ವಸೀಮ್ ಮನಿಯಾರ, ಪರಶುರಾಮ ಕೆರಹಳ್ಳಿ, ಯೂಸುಫ್ ಮಾಳೆಕೊಪ್ಪ, ಆಜಮ್ ಕರ್ಕಿಹಳ್ಳಿ, ರಹೀಮ್ ಶೇಖ್ ಸೇರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.