ಮುಂಬೈನಿಂದ ಬಂದ ಮಹಿಳೆಗೆ ಸೋಂಕು ದೃಢ: ಉದ್ಯಾವರ ಕಲಾಯಿಬೈಲು ಸೀಲ್ ಡೌನ್
Team Udayavani, Jun 6, 2020, 2:14 PM IST
ಉಡುಪಿ: ಮಹಾರಾಷ್ಟ್ರದ ಮುಂಬೈನಿಂದ ಆಗಮಿಸಿ ಏಳು ದಿನದ ಕ್ವಾರಂಟೈನ್ ಮುಗಿಸಿ ಉದ್ಯಾವರದ ತನ್ನ ಮನೆಗೆ ಬಂದಿದ್ದ 26 ವರ್ಷದ ಮಹಿಳೆಗೆ ಇದೀಗ ಕೋವಿಡ್-19 ಪಾಸಿಟಿವ್ ಪತ್ತೆಯಾಗಿದೆ. ಹಾಗಾಗಿ ಮಹಿಳೆ ವಾಸವಿದ್ದ ಮನೆಯನ್ನು ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ.
ಉದ್ಯಾವರದ ಕಲಾಯಿಬೈಲಿನ ವಿವಾಹಿತ ಮಹಿಳೆ ಸರಕಾರಿ ಆದೇಶದ 7 ದಿನದ ಕ್ವಾರಂಟೈನ್ ಮುಗಿಸಿ, ಉದ್ಯಾವರದ ತನ್ನ ಮನೆಗೆ ಆಗಮಿಸಿದ್ದರು. ಆದರೆ ಇದೀಗ ಆ ಮಹಿಳೆಯಲ್ಲಿ ಕೋವಿಡ್-19 ಪಾಸಿಟಿವ್ ಪತ್ತೆಯಾಗಿದ್ದು, ಮಹಿಳೆ ವಾಸವಿದ್ದ ಮನೆಯನ್ನು ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ.
ಉದ್ಯಾವರ ಗ್ರಾಮದಲ್ಲಿ ಇದು ಪ್ರಥಮ ಕೋವಿಡ್-19 ಪಾಸಿಟಿವ್ ಇದಾಗಿದೆ. ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಅದರಲ್ಲೂ ಮಹಾರಾಷ್ಟ್ರದಿಂದ ಆಗಮಿಸಿದ ಪ್ರಯಾಣಿಕರಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಶುಕ್ರವಾರ ಜಿಲ್ಲೆಯಲ್ಲಿ ಒಂದೇ ದಿನ 205 ಜನರಿಗೆ ಕೋವಿಡ್-19 ಸೋಂಕು ದೃಢವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.