ಶ್ರೀರಂಗ ಏತನೀರಾವರಿ ಕಾಮಗಾರಿ ಪೂರ್ಣ

Team Udayavani, Jun 7, 2020, 6:38 AM IST

sriranga poorna

ಮಾಗಡಿ: 1,100 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು-ಮಾಗಡಿ ಚತುಷ್ಪಥ ಮತ್ತು ಹೇಮಾವತಿ ಯೋಜನೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮುಖ್ಯಮಂತ್ರಿ ಬಿ.ಎಸ್‌ .ಯಡಿಯೂರಪ್ಪ ಅಗತ್ಯ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ  ಎಂದು ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ಎಂ. ಧನಂಜಯ ರುದ್ರೇಶ್‌ ತಿಳಿಸಿದ್ದಾರೆ. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಯಡಿಯೂರಪ್ಪ ಬಳಿ ನಿಯೋಗ ತೆರಳಿ ಮನವಿ ಮಾಡಿ ಚರ್ಚಿಸಲಾಗಿದೆ. ಈ ಸಂಬಂಧ ಈಗಾಗಲೇ ಟೆಂಡರ್‌ ಪೂರ್ಣಗೊಂಡಿದ್ದು, ಬೇಗ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ. ಈಗಾಗಲೇ ಡಿಸಿಎಂ ಬಹಳ ಆಸಕ್ತಿ ವಹಿಸಲಾಗಿದೆ ಎಂದಿದ್ದಾರೆ ಎಂದು ತಿಳಿಸಿದರು.

86 ಕೆರೆ ತುಂಬಿಸುವ ಯೋಜನೆ: ವೀರಪ್ಪ ಮೊಯ್ಲಿ ಮಖ್ಯಮಂತ್ರಿಯಾಗಿದ್ದಾಗ ನೀರಾವರಿ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಯೋಜನೆ ಅನುಷ್ಠಾನಕ್ಕೆ ಎಚ್‌.ಎಂ.ರೇವಣ್ಣ ಅವರು ಪ್ರಸ್ತಾವನೆ ಸಲ್ಲಿಸಿ,  ಮಾಗಡಿಗೆ ಹೇಮಾವತಿ ಹರಿಸಲು ಶ್ರೀರಂಗ ಏತ ನೀರಾವರಿ ಯೋಜನೆ ರೂಪಿಸಿದರು. ಯೋಜನೆ ಅನುಸಾರ ತುಮಕೂರು ಶಾಖಾ ನಾಲೆ 190 ಕಿ.ಮೀ. ಅಂತರದಿಂದ ಏತ ನೀರಾವರಿ ಮೂಲಕ ತಾಲೂಕಿನ 86 ಕೆರೆಗಳಿಗೆ ನೀರು ತುಂಬಿಸಿ  ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಕನಿಷ್ಠ 0.9 ಟಿಎಂಸಿ ನೀರು ಅವಶ್ಯ ಯೋಜನೆ ರೂಪಗೊಂಡಿದ್ದು, ಸುಮಾರು 190 ಕಿ.ಮೀ. ದೂರದಿಂದ 131 ಕ್ಯೂಸೆಕ್‌ ನೀರನ್ನು 120 ಮೀ. ಎತ್ತರಕ್ಕೆ ಲಿಫ್ಟ್ ಮಾಡಬೇಕಿದೆ.

ಯೋಜನೆ ಅನುಕೂಲತೆ: ಮಾಗಡಿ ಕ್ಷೇತ್ರಕ್ಕೆ ಹೇಮಾವತಿ ನೀರಾವರಿ ಯೋಜನೆಗೆ ಶ್ರೀರಂಗ ಏತ ನೀರಾವರಿ ಯೋಜನೆ ಎಂಬ ಹೆಸರಿಡಲಾಗಿತ್ತು. ಯೋಜನೆ ಅನುಷ್ಠಾನ  ದಿಂದ ಮಾಗಡಿ ತಾಲೂಕಿನ 86 ಕೆರೆಗಳಿಗೆ ನೀರು ಹರಿಸುವುದು.  ಅಂತರ್ಜಲ ಹೆಚ್ಚಿಳ್ಳ ಹಾಗೂ ತಾಲೂಕಿನ 11.015 ಎಕರೆ ಪ್ರದೇಶಕೆಕ ನೀರು ಹರಿಸಲು ಹಾಗೂ 0.062 ಟಿಎಂಸಿ ನೀರು ಕುಡಿಯುವ ಬಳಕೆಗೆ ಮೀಸಲಿಡಲಾಗಿತ್ತು. ನನಗೆ ರಾಜಕೀಯ ಶಕ್ತಿ ನೀಡಿದ ಮಾಗಡಿ ಜನತೆಯ ಋಣ ತೀರಿಸಬೇಕು  ಎಂಬ ಚಿಂತನೆಯಿಂದ ಸಣ್ಣ ಮತ್ತು ದೊಡ್ಡ ನೀರಾವರಿ ಇಲಾಖೆಯ ಎಂಜಿನಿಯರ್‌ ಅವರೊಂದಿಗೆ ಮಾಜಿ ಸಚಿವ ಎಚ್‌.ಎಂ.ರೇವಣ್ಣ ಚರ್ಚಿಸಿದ್ದರು.

ನಂತರ ಆಗಿನ ಕೇಂದ್ರ ಕಾನೂನು ಮಂತ್ರಿಯಾಗಿದ್ದ ಡಾ.ಎಂ.ವೀರಪ್ಪ ಮೊಯ್ಲಿ  ಅವರೊಂದಿಗೆ ಚರ್ಚಿಸಿದರು. ಈ ಯೋಜನೆಯನ್ನು ಅನುಷ್ಠಾನಗೊಳಿಸುವ ಭರವಸೆ ಸಿಕ್ಕಿತು. 325 ಕೋಟಿ ರೂ. ಹಣ ಮಂಜೂರು: ಎಸ್‌.ಎಂ.ಕೃಷ್ಣ ಮುಖ್ಯಮಂತ್ರಿಯಾದ ಬಳಿಕ ಯೋಜನೆಗೆ ಸುಮಾರು 96 ಕೋಟಿ ಅನುದಾನ  ಬಿಡುಗಡೆಗೊಳಿಸಿ, ಡಿಪಿಆರ್‌ ತಯಾರಿಸಲು ಸುಚಿಸಿದ್ದರು. ನಂತರದಲ್ಲಿ ಪರಿಸ್ಕೃತ ಅಂದಾಜು 124 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿತ್ತು. ಅದೇ ಸಮಯಕ್ಕೆ ಸರ್ಕಾರದ ಅವಧಿ ಮುಗಿದಿದ್ದರಿಂದ ಹೇಮಾವತಿ ಯೋಜನೆ ಮತ್ತೆ  ಸ್ಥಗಿತಗೊಂಡಿತು.

ಸಿದ್ದರಾಮಯ್ಯ ಸಿಎಂ ಆದ ನಂತರ ಲೋಕಸಭೆ ಉಪ ಚುನಾವಣೆ ಪ್ರಚಾರಕ್ಕೆ ಮಾಗಡಿಗೆ ಬಂದ ಸಮಯದಲ್ಲಿ ಹೇಮಾವತಿ ಯೋಜನೆಗೆ ಚಾಲನೆ ನೀಡಿದ್ದರು. ಈಗ ಸಿಎಂ ಬಿಎಸ್‌ವೈ, ಶೀಘ್ರ ಕಾಮಗಾರಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಿ ದ್ದಾರೆ. ಈಗಾಗಲೇ ಟೆಂಡರ್‌ ಪ್ರಕ್ರಿಯೆ ಮುಗಿದಿದೆ ಎಂದು ವಿವರಿಸಿದರು.ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್‌, ತಾಲೂಕು ಅಧ್ಯಕ್ಷ ಎಂ.ಜಿ.ರಂಗಧಾಮಯ್ಯ, ಎಂ.ಆರ್‌.ರಾಘವೇಂದ್ರ, ರಾಜೇಶ್‌, ಶಂಕರ್‌, ಶೇಷಪ್ಪ, ನಾಗರಾಜು ಹಾಜರಿದ್ದರು.

ಟಾಪ್ ನ್ಯೂಸ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.