ಮುಂಗಾರು ಬಿತ್ತನೆಗೆ ಸಕ್ಕರೆ ಬಾಕಿ ಸಂಕಷ್ಟ

ತುಮಕೂರು ಕೋರ್‌ ಗ್ರೀನ್‌ ಸಕ್ಕರೆ ಕಾರ್ಖಾನೆಯಿಂದ 23 ಕೋಟಿಗೂ ಅಧಿಕ ಬಾಕಿ

Team Udayavani, Jun 7, 2020, 7:17 AM IST

ಮುಂಗಾರು ಬಿತ್ತನೆಗೆ ಸಕ್ಕರೆ ಬಾಕಿ ಸಂಕಷ್ಟ

ಯಾದಗಿರಿ: ಜಿಲ್ಲೆಯ ಏಕೈಕ ಕೋರ್‌ ಗ್ರೀನ್‌ ಸಕ್ಕರೆ ಕಾರ್ಖಾನೆ ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಯ ರೈತರ 23.19 ಕೋಟಿ ಹಣ ಬಾಕಿ ಉಳಿಸಿಕೊಂಡಿದ್ದು, ಈಗ ಮುಂಗಾರು ಬಿತ್ತನಗೆಗೆ ಕಬ್ಬು ನೀಡಿದ ರೈತರು ಆರ್ಥಿಕ ಸಂಕಷ್ಟಕ್ಕೆ ಎದುರಿಸುವಂತಾಗಿದೆ.

ಕಳೆದ 2019-20ನೇ ಸಾಲಿನಲ್ಲಿ ಬರೋಬ್ಬರಿ 2355 ರೈತರಿಂದ 2.36 ಲಕ್ಷ ಮೆಟ್ರಿಕ್‌ ಟನ್‌ ಕಬ್ಬು ಖರೀದಿಸಿ ಈಗ ಹಣ ಪಾವತಿಸುವುದಕ್ಕೆ ಕಾಡಿಸುತ್ತಿದ್ದು, ರೈತರು ಕಾರ್ಖಾನೆಗೆ ಹಣಕ್ಕಾಗಿ ಅಲೆದಾಡುವಂತಾಗಿದೆ.

ಒಟ್ಟು 64.81 ಕೋಟಿ ಮೊತ್ತದಲ್ಲಿ 41.57 ಕೋಟಿಯಷ್ಟು ಪಾವತಿಸಿದೆ. ಇದೀಗ ಮುಂಗಾರು ಆರಂಭವಾಗಿದೆ. ಹಲವು ಬಿತ್ತನೆ ಬೀಜ ಖರೀದಿಸಲು ಹಣದ ಅವಶ್ಯಕತೆಯಿದೆ. ಆದರೆ ವಡಗೇರಾ ತಾಲೂಕು ತುಮಕೂರು ಹತ್ತಿರದ ಸಕ್ಕರೆ ಕಾರ್ಖಾನೆ ಮಾತ್ರ ಹಣ ಸಕಾಲಕ್ಕೆ ಪಾವತಿಸದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಬೆಳೆದ ಕಬ್ಬು ನೀಡಿದ್ದು ನಾವು ಕಷ್ಟಪಟ್ಟು ಬೆಳೆದ ಫಸಲಿಗೆ ಹಣ ಸರಿಯಾದ ಸಮಯಕ್ಕೆ ಸಿಗದೇ ಸಾಲ ಮಾಡುವ ಅನಿವಾರ್ಯತೆ ಎದುರಾಗಿದೆ ಎಂದು ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಪ್ರತಿಬಾರಿಯೂ ಕಾರ್ಖಾನೆ ರೈತರಿಂದ ಕಬ್ಬು ಪಡೆದು ಬಳಿಕ ಹಣ ಪಾವತಿಸುವುದಕ್ಕೆ ಮೀನಾಮೀಷ ಎಣೆಸುತ್ತದೆ. ಇದರಿಂದ ರೈತರು ಕಷ್ಟಕ್ಕೆ ಸಿಲುಕುವಂತಾಗಿದೆ. ಕಳೆದ ವರ್ಷವೂ ರೈತರು ಹಣಕ್ಕಾಗಿ ಕಾರ್ಖಾನೆ ಎದುರು ಮತ್ತು ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟಿದ್ದರು. ಅಲ್ಲದೇ ಕಾರ್ಖಾನೆಯನ್ನು ಸರ್ಕಾರ ಜಪ್ತಿ ಮಾಡಿದ ಘಟನೆಯೂ ನಡೆದಿತ್ತು. ಇಷ್ಟಾದರೂ ಬುದ್ಧಿ ಕಲಿಯದ ಕಾರ್ಖಾನೆ ಆಡಳಿತ ಮಂಡಳಿ ಈ ಬಾರಿಯೂ ಕಬ್ಬು ಪಡೆದು ತಿಂಗಳುಗಳೇ ಕಳೆದಿದೆ. ಸಕ್ಕರೆ ಉತ್ಪಾದನೆ ಮಾಡಿರುವ ಕಾರ್ಖಾನೆ ಸಂಪೂರ್ಣ ಸಕ್ಕರೆ ಮಾರಾಟ ಮಾಡಿದೆ. ಈಗ ಹಣ ನೀಡಲು ಮಾತ್ರ ಸತಾಯಿಸುತ್ತಿದ್ದು, ರೈತರು ಆಕ್ರೋಶಗೊಳ್ಳುವಂತೆ ಮಾಡಿದೆ.

ರೈತರಿಗೆ ಹಣ ಪಾವತಿಯಾಗದ ಕುರಿತು ದೂರುಗಳು ಬಂದ ಹಿನ್ನೆಲೆ ಜಿಲ್ಲಾಡಳಿತ ಕಾರ್ಖಾನೆಗೆ ಮೇ 12ರಂದು ನೋಟಿಸ್‌ ಜಾರಿಗೊಳಿಸಿದೆ. ರೈತರಿಗೆ ಶೀಘ್ರವೇ ಹಣ ಪಾವತಿಸುವಂತೆ ಎಚ್ಚರಿಕೆಯನ್ನೂ ನೀಡಿದೆ. ಆದರೆ ಕಾರ್ಖಾನೆ ಸಮಯ ಕೇಳಿದ್ದು, ನಿಗದಿತ ಸಮಯ ಪಡೆದು ರೈತರಿಗೆ ತೊಂದರೆಯಾಗದಂತೆ ಹಣ ನೀಡುವಂತೆ ತಿಳಿಸಲಾಗಿದೆ. ಜಿಲ್ಲಾಡಳಿತಕ್ಕೆ ಲಿಖೀತ ಪತ್ರವನ್ನು ನೀಡಿರುವ ಕಾರ್ಖಾನೆ 2020ರ ಜೂನ್‌ ಅಂತ್ಯದ ವೇಳೆಗೆ ಎಲ್ಲ ರೈತರಿಗೆ ಹಣವನ್ನು ಪಾವತಿ ಮಾಡುವ ಭರವಸೆ ನೀಡಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಪ್ರತಿ ಬಾರಿಯೂ ಕಾರ್ಖಾನೆ ಸರಿಯಾದ ಸಮಯಕ್ಕೆ ಹಣ ಪಾವತಿ ಮಾಡುತ್ತಿಲ್ಲ. ಕಳೆದ ವರ್ಷವೂ ಹೀಗೆ ಪ್ರತಿಭಟನೆ ಮಾಡಿ ಹಣ ಪಡೆದುಕೊಳ್ಳಲಾಯಿತು. ನಮ್ಮ ಫಸಲು ಪಡೆದು ಹಣ ನೀಡಲ್ಲ ಎಂದರೇ ಏನರ್ಥ. ಸರ್ಕಾರ ರೈತರಿಗೆ ತೊಂದರೆಯಾಗದಂತೆ ಸೂಕ್ತ ಕ್ರಮವಹಿಸಬೇಕು. –ಮಲ್ಲಣ್ಣ ಪಾಟೀಲ, ಕಬ್ಬು ಬೆಳೆಗಾರರ ಸಂಘದ ಮುಖಂಡರು

 

-ಅನೀಲ ಬಸೂದೆ

ಟಾಪ್ ನ್ಯೂಸ್

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.