ಮುನ್ನೆಚ್ಚರಿಕೆಯೊಂದಿಗೆ ರೆಸ್ಟೋರೆಂಟ್ ಓಪನ್
Team Udayavani, Jun 7, 2020, 7:24 AM IST
ಬೆಂಗಳೂರು: ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶನಿವಾರ ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಾಗೂ ಕೆಲವು ತೊಡಕುಗಳ ನಿವಾರಣೆ ಕುರಿತು ಪ್ರವಾಸೋದ್ಯಮ ಹಾಗೂ ಸಾರಿಗೆ ಇಲಾಖೆ ಮತ್ತು ವಿವಿಧ ಭಾಗೀದಾರರ ಜೊತೆಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದಾಗಿ ಹೋಟೆಲ್‌ಗಳ ಸಂಘದ ಪ್ರತಿನಿಧಿಗಳು ಮತ್ತು ಸಾರಿಗೆ ಕಂಪನಿಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದರು.
ಈ ಸಭೆಯಲ್ಲಿ ಭಾಗವಹಿಸಿದ್ದ ಬಸ್ ಮಾಲೀಕರ ಸಂಘ, ಹೋಟೆಲ್ ಮಾಲೀಕರ ಸಂಘ ಹಾಗೂ ಟ್ಯಾಕ್ಸಿ ಮಾಲೀಕರ ಸಂಘಗಳ ನಿಯೋಗವು ಸರ್ಕಾರದ ಮುಂದೆ ಕೆಲ ಬೇಡಿಕೆಗಳನ್ನು ಮುಂದಿಟ್ಟರು. ಅವರ ಬೇಡಿಕೆಗಳನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪ್ರವಾಸೋದ್ಯಮ ಇಲಾಖೆಯು ಹೋಟೆಲ್ ಗಳು, ಆತಿಥ್ಯ ಘಟಕಗಳು ಮತ್ತು ಪ್ರವಾಸಿ ತಾಣಗಳನ್ನು ತೆರೆಯುವ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕೈಪಿಡಿಯನ್ನು ಬಿಡುಗಡೆ ಮಾಡಿದರು.
ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದಿ ನಿಗಮದ ಅಧ್ಯಕ್ಷರಾದ ಶ್ರುತಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್ ದಾಖಲು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Renukaswamy case: ದರ್ಶನ್ ವಿರುದ್ಧ ಸಾಕ್ಷ್ಯ “ಸೃಷಿ’: ವಕೀಲ ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.