ಹೊಳೆಆಲೂರ ಮೇಘರಾಜ ನಗರ ಪ್ರತಿಬಂಧಕ ಪ್ರದೇಶ
Team Udayavani, Jun 7, 2020, 3:15 PM IST
ಹೊಳೆಆಲೂರ: ಗ್ರಾಮದ ಮೇಘರಾಜ ನಗರದ ನಿವಾಸಿ 28 ವರ್ಷದ ವ್ಯಕ್ತಿಗೆ ಶನಿವಾರ ಕೋವಿಡ್ ಸೋಂಕು ದೃಢವಾಗಿದ್ದು, ಅವನ ಕುಟುಂಬದ 5 ಜನರು ಸೇರದಂತೆ 9 ಮಂದಿಯನ್ನು ಕ್ವಾರಂಟೈನ್‌ಗೆ ಕಳುಹಿಸಿರುವುದರಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಸೋಂಕು ದೃಢವಾದ ಸುದ್ದಿ ತಿಳಿಯುತ್ತಿದ್ದಂತೆ ಬಹುತೇಕ ಹಿಂದುಳಿದ ವರ್ಗದವರನ್ನು ಹೂಂದಿರುವ ಮೇಘರಾಜ ಕಾಲೋನಿಯಲ್ಲಿ ಜನರು ಆತಂಕಕ್ಕೆ ಒಳಗಾಗಿದ್ದಾರೆ. ನಿತ್ಯ ದುಡಿದು ತಿನ್ನುವ ನಮ್ಮ ಕಾಲೋನಿ ಶೀಲ್ ಡೌನ್ ಅದರೆ ಏನು ಗತಿ ಎಂದು ಅಳಲು ತೋಡಿಕೊಂಡಿದ್ದಾರೆ. ಸೋಂಕಿತನ ಸಂಪರ್ಕದಲ್ಲಿ ಇರುವವರಿಗೇನಾದರೂ ಪಾಸಿಟೀವ್ ತಗುಲಿದರೆ ಗ್ರಾಮದಲ್ಲಿ ಮಾತ್ರವಲ್ಲ ಗ್ರಾಮೀಣ ಭಾಗದಲ್ಲಿ ಹೆಚ್ಚು ಪ್ರಮಾಣದಲ್ಲಿ ಸೋಂಕು ವ್ಯಾಪಿಸುವ ಲಕ್ಷಣಗಳು ದಟ್ಟವಾಗಿವೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಿಂದ ಶನಿವಾರ ಹೊಳೆಆಲೂರಿಗೆ ಯಾರೂ ಬರಲಿಲ್ಲ.
ಶನಿವಾರ ಸ್ಥಳೀಯ ಗ್ರಾಮ ಪಂಚಾಯತ ಅಧಿಕಾರಿಗಳು ಡಂಗುರ ಸಾರಿ ಎಲ್ಲ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ತಾಲೂಕು ಆರೋಗ್ಯ ಅಧಿಕಾರಿ ಬಿ.ಎಸ್. ಬಭಂತ್ರಿ, ಡಾ|ಅರವಿಂದ ಕಂಬಳಿ, ಡಾ| ರಾಘು, ಡಾ| ಕೆ.ಎಸ್. ಹಾದಿಮನಿ, ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶಿವಲೀಲಾ ಸಂಗಳದ, ತಾಪಂ ಇಒ ಸಂತೋಷ ಪಾಟೀಲ, ಪಿಡಿಒ ಮಂಜುನಾಥ ಗಣಿ ನೇತೃತ್ವದಲ್ಲಿ ಮೇಘರಾಜ ನಗರದ ಪ್ರತಿ ಮನೆ ಮನೆ ತಪಾಸಣೆ ಆರಂಭಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.