ರೈತರ ಮೇಲೆ ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಿದೆ: HDK
Team Udayavani, Jun 7, 2020, 12:45 PM IST
ಬೆಂಗಳೂರು: ಟ್ರ್ಯಾಕ್ಟರ್, ವಾಹನ ಇರುವ ರೈತರು ಬಿಪಿಎಲ್ ಕಾರ್ಡ್‌ಗಳನ್ನು ಹಿಂದಿರುಗಿಸಬೇಕು, ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಇದು ಮೂರ್ಖತನದ ಸೂಚನೆ. ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸರಕಾರದ ವಿರುದ್ಧ ಟ್ವೀಟ್ ಮಾಡಿ ಟೀಕೆ ಮಾಡಿರುವ ಎಚ್ ಡಿಕೆ, ರೈತರಿಗೆ ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಹೇಳಿರುವ ಸರ್ಕಾರ ಅದಕ್ಕೆ ಟ್ರ್ಯಾಕ್ಟರ್, ವಾಹನಗಳನ್ನು ಮಾನದಂಡ ಮಾಡಿದೆ. ವೈಜ್ಞಾನಿಕ ಕೃಷಿ, ಟ್ರಾಕ್ಟರ್ ಖರೀದಿಗೆ ಪ್ರೋತ್ಸಾಹ ನೀಡುತ್ತಿರುವುದು ಸರ್ಕಾರಗಳೇ ಅಲ್ಲವೇ? ಟ್ರ್ಯಾಕ್ಟರ್ ಖರೀದಿಸಲು ಹೇಳಿ, ಅದನ್ನೇ ಮುಂದಿಟ್ಟು ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವುದು ಮೂರ್ಖತನವಲ್ಲವೇ ಎಂದಿದ್ದಾರೆ.
ಇಂದಿನ ಪೈಪೋಟಿ ಯುಗದಲ್ಲಿ ಕೃಷಿಕ ಯಂತ್ರ, ವಾಹನಗಳನ್ನು ಹೊಂದುವುದು ಅಗತ್ಯ. ಸರ್ಕಾರ ಅದಕ್ಕೆ ಪ್ರೋತ್ಸಾಹ ನೀಡಬೇಕು. ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಬೆದರಿಕೆಯೊಡ್ಡಬಾರದು. ಬಿಪಿಎಲ್ ಕಾರ್ಡ್ ಈಗ ಕೇವಲ ಪಡಿತರಕ್ಕೆ ಮಾತ್ರ ಸೀಮಿತವಲ್ಲ. ಹಲವು ಸವಲತ್ತು, ಸೌಲಭ್ಯಗಳಿಗೆ ಬಿಪಿಎಲ್ ಕಾರ್ಡೇ ಆಧಾರ ಎಂಬುದು ಗಮನದಲ್ಲಿರಲಿ ಎಂದು ಸರ್ಕಾರವನ್ನು ಎಚ್ಚರಿಸಿದ್ದಾರೆ.
ಅರ್ಹ ಫಲಾನುಭವಿಗಳಿಗೆ ಸವಲತ್ತು ಸಿಗಬೇಕು. ಅದಕ್ಕಾಗಿ ರೈತರ ಅನ್ನದ ತಟ್ಟೆಗೆ ಕೈ ಹಾಕಬಾರದು. ಸಾರ್ವಜನಿಕ ಪಡಿತರ ವಿತರಣೆ ವ್ಯವಸ್ಥೆಯಲ್ಲಿ ದೋಷಗಳಿವೆ. ಪಟ್ಟಭದ್ರ ಹಿತಾಸಕ್ತಿಗಳಿವೆ. ಅದನ್ನು ಮೊದಲು ಹೋಗಲಾಡಿಸಬೇಕು. ಸರ್ಕಾರ ಅದರತ್ತ ಗಮನ ಹರಿಸಲಿ. ಮಾತಿಗೆ ಮೊದಲು ರೈತರ ಕೊರಳು ಹಿಂಡುವ ತನ್ನ ಎಂದಿನ ಅಭ್ಯಾಸವನ್ನು ಸರ್ಕಾರ ತೊರೆಯಲಿ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.