ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಪೂರ್ವ ಸಿದ್ಧತೆ


Team Udayavani, Jun 7, 2020, 1:40 PM IST

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಪೂರ್ವ ಸಿದ್ಧತೆ

ಸಾಂದರ್ಭಿಕ ಚಿತ್ರ

ಸವಣೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಶಾಲೆ ಮುಖ್ಯಶಿಕ್ಷಕರು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಡಿಡಿಪಿಐ ಅಂದಾನೆಪ್ಪ ವಡಗೇರಿ ಹೇಳಿದರು.

ಪಟ್ಟಣದ ಅಂಜುಮನ್‌ ಇಸ್ಲಾಂ ಶಾದಿಮಹಲ್‌ ಸಭಾಂಗಣದಲ್ಲಿ ಜರುಗಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಗೂ ಶಾಲಾ ಪ್ರಾರಂಭೋತ್ಸವ ನಂತರ ಶಾಲಾ ಮುಖ್ಯಶಿಕ್ಷಕರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ತಾಲೂಕಿನಲ್ಲಿ 7 ಎಸ್‌ಎಸ್‌ ಎಲ್‌ಸಿ ಪರೀಕ್ಷಾ ಕೇಂದ್ರಗಳಿದ್ದು, ಪ್ರತಿಯೊಂದರಲ್ಲಿ ಪರೀಕ್ಷೆ ಆರಂಭಕ್ಕೂ ಮುನ್ನ ಎಸ್‌ಒಪಿ ನಿಯಮದಂತೆ ಪ್ರತಿಯೊಬ್ಬ ಪರೀಕ್ಷಾಕೇಂದ್ರದ ಅಧಿಕ್ಷಕರು ಸಾಂಕ್ರಾಮಿಕ ರೋಗದ ಹತೋಟಿ ಹಾಗೂ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗೃತ ಕ್ರಮ ಕೈಗೊಳ್ಳಬೇಕು. ಪರೀಕ್ಷಾ ಸಮಯದಲ್ಲಿ ಮಕ್ಕಳಲ್ಲಿ ಅಂತರ ಕಾಯ್ದುಕೊಳ್ಳುವಂತೆ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ದಾನಿಗಳು ನೀಡಿದ ಮಾಸ್ಕ್ ಮತ್ತು ಸ್ಯಾನಿಟೈಸರ್‌ ಗಳ ವ್ಯವಸ್ಥೆ ಮಾಡಲಾಗಿದೆ. ಅವುಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ವಿತರಿಸಿ, ನಿರಂತರವಾಗಿ ಉಪಯೋಗಿಸುವಂತೆ ತಿಳಿಸಬೇಕು. ವಿದ್ಯಾರ್ಥಿಗಳ ಆರೋಗ್ಯದ ವಿಷಯದಲ್ಲಿ ಕೊಂಚವೂ ತೊಂದರೆಯಾಗದಂತೆ ಸಕಲ ಸಿದ್ಧತೆ ಮಾಡಿಕೊಂಡು ಪರೀಕ್ಷೆ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಬಿಇಒ ಐ.ಬಿ. ಬೆನಕೊಪ್ಪ ಮಾತನಾಡಿ, ಶಾಲೆ ಆರಂಭಕ್ಕೂ ಮುನ್ನ ಮುಖ್ಯಶಿಕ್ಷಕರು ಹಾಗೂ ಸಹಶಿಕ್ಷಕರು ಶಾಲಾ ಪರಿಸರದ ಸ್ವಚ್ಛತಾ ಕಾರ್ಯ ಕೈಗೊಂಡು ಶಾಲೆಗಳಿಗೆ ಬಣ್ಣ ಹಚ್ಚಬೇಕು. ಶಿಕ್ಷಕರು ತಮ್ಮ ವೈಯಕ್ತಿಕ ಆರೋಗ್ಯದ ಜೊತೆಗೆ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ತಿಳಿಸಿದರು.

ಬಿಆರ್‌ಸಿ ಸಮನ್ವಯಾಧಿಕಾರಿ ನಾಗರಾಜ ಬಣಕಾರ, ಅಕ್ಷರದಾಸೋಹ ಸಹಾಯಕ ನಿರ್ದೇಶಕ ಸಂಗಮೇಶ ಸುಣದೋಳಿ, ದೈಹಿಕ ಶಿಕ್ಷಣಾಧಿಕಾರಿ ಮೃತ್ಯುಂಜಯಗೌಡ್ರ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎನ್‌. ಕೆ. ಪಾಟೀಲ ಸೇರಿದಂತೆ ಬಿಆರ್‌ಪಿ, ಸಿಆರ್‌ಪಿಗಳು, ತಾಲೂಕಿನ ವಿವಿಧ ಪ್ರೌಢ ಹಾಗೂ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕರು ಇದ್ದರು.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.