ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 17 ಮಂದಿಗೆ ಕೋವಿಡ್ ಸೋಂಕು ದೃಢ
Team Udayavani, Jun 7, 2020, 6:19 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 17 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ದೃಢಪಟ್ಟಿದೆ. ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 192ಕ್ಕೆ ಏರಿಕೆಯಾಗಿದೆ.
ಇಂದು ದೃಢಪಟ್ಟ 17 ಮಂದಿ ಸೋಂಕಿತರಲ್ಲಿ 16 ಮಂದಿ ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದವರಾಗಿದ್ದು ಒಬ್ಬರು ಗೋವಾದಿಂದ ಬಂದವರಾಗಿದ್ದಾರೆ.
ಇಂದಿನ ಸೋಂಕಿತರಲ್ಲಿ 15 ಮಂದಿ ಪುರುಷರು ಮತ್ತು ಇಬ್ಬರು ಮಹಿಳೆಯರಾಗಿದ್ದಾರೆ. ಇವರೆಲ್ಲರಿಗೂ ನಿಗಿಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಒಟ್ಟು 192 ಜನರಿಗೆ ಸೋಂಕು ಧೃಢವಾಗಿದ್ದು, 94 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿಂದು 239 ಜನರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 5452ಕ್ಕೆ ಏರಿಕೆಯಾಗಿದೆ. ಇಂದು 143 ಜನರು ಗುಣಮುಖರಾಗಿದ್ದು, ಒಟ್ಟು 2132 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಇಬ್ಬರು ಸೋಂಕಿನ ಕಾರಣದಿಂದ ಮರಣ ಹೊಂದಿದ್ದು, ರಾಜ್ಯದಲ್ಲಿ ಇದುವರೆಗೆ 61 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಬ್ಬರು ಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.