ಕಾಸರಗೋಡು: ಮೂವರಿಗೆ ಕೋವಿಡ್-19 ಸೋಂಕು ದೃಢ
6 ಮಂದಿ ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆ
Team Udayavani, Jun 7, 2020, 7:39 PM IST
ಕಾಸರಗೋಡು: ಜಿಲ್ಲೆಯಲ್ಲಿ ರವಿವಾರ ಮೂವರಿಗೆ ಕೋವಿಡ್-19 ಪಾಸಿಟಿವ್ ವರದಿಯಾಗಿದೆ. ಬಾಧಿತರಲ್ಲಿ ಇಬ್ಬರು ಮಹಾರಾಷ್ಟ್ರದಿಂದ, ಒಬ್ಬರು ಕುವೈಟ್ನಿಂದ ಆಗಮಿಸಿದವರು.
ಕುವೈತ್ನಿಂದ ಆಗಮಿಸಿದ್ದ ಕಾಂಞಂಗಾಡ್ ನಗರಸಭೆ ವ್ಯಾಪ್ತಿಯ 38 ವರ್ಷದ ವ್ಯಕ್ತಿ, ಮಹಾರಾಷ್ಟ್ರದಿಂದ ಬಂದ ಚೆರುವತ್ತೂರು ಗ್ರಾಮ ಪಂಚಾಯತ್ನ 33 ವರ್ಷದ ವ್ಯಕ್ತಿ ಮತ್ತು ಪುಲ್ಲೂರು ಪೆರಿಯ ಗ್ರಾ.ಪಂ.ನ 63 ವರ್ಷದ ವ್ಯಕ್ತಿ ಬಾಧಿತರು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾಣ ಎ.ವಿ. ರಾಮದಾಸ್ ತಿಳಿಸಿದ್ದಾರೆ.
ಇದೇ ವೇಳೆ ಉಕ್ಕಿನಡ್ಕದ ಕಾಸರಗೋಡು ಮೆಡಿಕಲ್ ಕಾಲೇಜಿನಲ್ಲಿ ದಾಖಲಾಗಿದ್ದ 6 ಮಂದಿ ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಮಹಾರಾಷ್ಟ್ರದಿಂದ ಆಗಮಿಸಿದ್ದ ಕುಂಬಳೆ ಗ್ರಾ.ಪಂ. ವ್ಯಾಪ್ತಿಯ 56, 46, 57 ವರ್ಷದ ವ್ಯಕ್ತಿಗಳು, ಮಂಗಲ್ಪಾಡಿಯ 33 ವರ್ಷದ ವ್ಯಕ್ತಿ, ದುಬಾೖಯಿಂದ ಬಂದಿದ್ದ ಮಧೂರು ಪಂಚಾಯತ್ನ 68 ವರ್ಷದ ವ್ಯಕ್ತಿ, ಕೋಡೋಂ ಬೇಳೂರು ಪಂಚಾಯತ್ನ 32 ವರ್ಷದ ವ್ಯಕ್ತಿ ಗುಣಮುಖರಾದವರು.
ಕೇರಳದಲ್ಲಿ 107 ಪ್ರಕರಣ
ಕೇರಳದಲ್ಲಿ ರವಿವಾರ 107 ಮಂದಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಅವರಲ್ಲಿ 71 ಮಂದಿ ವಿದೇಶದಿಂದ, 28 ಮಂದಿ ಇತರ ರಾಜ್ಯಗಳಿಂದ ಬಂದವರು. ಸಂಪರ್ಕದಿಂದ 8 ಮಂದಿಗೆ ಸೋಂಕು ಬಾಧಿಸಿದೆ. ರಾಜ್ಯದಲ್ಲಿ ಒಟ್ಟು 1,095 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 803 ಮಂದಿ ಗುಣಮುಖರಾಗಿದ್ದಾರೆ.
ವೈದರ್ಗೆ ನೆಗೆಟಿವ್
ತಮಿಳುನಾಡಿನಿಂದ ಬಂದು ಕ್ವಾರಂಟೈನ್ನಲ್ಲಿರುವಾಗ ಮೃತಪಟ್ಟ ಆಯುರ್ವೇದ ವೈದ್ಯ ತಳಂಗರೆ ಗಝಲಿ ನಗರದ ರಾಮಚಂದ್ರನ್ ವೈದ್ಯರ್ (76) ಅವರಿಗೆ ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ಫಲಿತಾಂಶ ಬಂದಿದೆ. ಮೃತ ದೇಹವನ್ನು ಸಂಬಂಧಿಕರಿಗೆ ಬಿಟ್ಟುಕೊಡಲಾಯಿತು.
ಮಾಸ್ಕ್ ಧರಿಸದ 217 ಮಂದಿ
ವಿರುದ್ಧ ಕೇಸು
ಮಾಸ್ಕ್ ಧರಿಸದೇ ಇದ್ದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ರವಿವಾರ 217 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 5,105 ಮಂದಿಯ ವಿರುದ್ಧ ಕೇಸು ದಾಖಲಿಸಿ ದಂಡ ವಸೂಲಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.